ಬೆಂಗಳೂರು | ಘನತ್ಯಾಜ್ಯ ನಿರ್ವಹಣೆ ಬಗ್ಗೆ ನಾಗರಿಕರಲ್ಲಿ ಜಾಗೃತಿ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮಾರ್ಚ್‌ 17ರಂದು ಘನತ್ಯಾಜ್ಯ ನಿರ್ವಹಣೆಗೆ ಕುರಿತಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಲಾಯಿತು.

- Advertisement -

ಘನತ್ಯಾಜ್ಯ ನಿರ್ವಹಣೆ ಕುರಿತಂತೆ ದಕ್ಷಿಣ ವಲಯದ ನಾನಾ ಸ್ಥಳಗಳಲ್ಲಿ ‘ತ್ಯಾಜ್ಯ ವಿಂಗಡಣೆ, ಪರಿಸರ ಸ್ವಚ್ಛತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ’ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಬಂಧ ದಕ್ಷಿಣ ವಲಯದ ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಜಂಟಿ ಆಯುಕ್ತ ಶಿವಕುಮಾರ್ ರವರ ಅಧ್ಯಕ್ಷತೆ ಹಾಗೂ ಮುಖ್ಯ ಅಭಿಯಂತರ ಎಸ್.ವಿ ರಾಜೇಶ್ ರವರ ನೇತೃತ್ವದಲ್ಲಿ ಸ್ಥಳೀಯ ಮಟ್ಟದಲ್ಲಿ ಸಾಮೂಹಿಕವಾಗಿ ಮಾಹಿತಿ, ಶಿಕ್ಷಣ ಮತ್ತು ಸಂವಹನ (IEC, Information, Education and Communication) ಚಟುವಟಿಕೆಯನ್ನು ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ದಕ್ಷಿಣ ವಲಯದಲ್ಲಿ ಘನತ್ಯಾಜ್ಯ ವಿಲೇವಾರಿ, ಹಸಿ ಕಸ, ಒಣ ಕಸ ಹಾಗೂ ಸ್ಯಾನಿಟರಿ ಕಸ ವಿಂಗಡಣೆ, ಮೂಲದಲ್ಲಿಯೆ ತ್ಯಾಜ್ಯವನ್ನು ಸಂಸ್ಕರಿಸುವ, ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಷೇಧ, ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡದಿರುವುದು, ಖಾಲಿ ನಿವೇಶನಗಳಲ್ಲಿ ಕಸ ಹಾಕದಿರುವುದು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಪ್ರತಿನಿತ್ಯ ಆಟೋ ಟಿಪ್ಪರ್‌ಗಳ ಮೂಲಕ ಮನೆ ಮನೆಗೆ ತರಳಿ ಹಸಿ ಕಸ ಸಂಗ್ರಹಿಸಲಾಗುತ್ತದೆ. ಇನ್ನು ವಾರಕ್ಕೆ ಎರಡು ದಿನಗಳ ಕಾಲ ಒಣ ಕಸವನ್ನು ಸಂಗ್ರಹಿಸಲಾಗುತ್ತದೆ. ಎಲ್ಲ ನಾಗರಿಕರು ರಸ್ತೆ, ಬೀದಿ ಬದಿ ಹಾಗೂ ಖಾಲಿ ನಿವೇಶನಗಳಲ್ಲಿ ಕಸವನ್ನು ಬಿಸಾಡದೆ ಆಟೋ ಟಿಪ್ಪರ್‌ಗಳಿಗೆ ಕಸವನ್ನು ನೀಡಿ ನಗರವನ್ನು ಸ್ವಚ್ಛ – ಸುಂದರ ನಗರವನ್ನಾಗಿಸುವ ಪಣವನ್ನು ಎಲ್ಲರೂ ತೊಡೋಣ ಎಂದು ಅರಿವು ಮೂಡಿಸಲಾಯಿತು.

ಘನತ್ಯಾಜ್ಯ ಸಮರ್ಪಕ ನಿರ್ವಹಣೆಯ ಕುರಿತು ಭಿತ್ತಿ ಪತ್ರ ಹಂಚುತ್ತಾ, ರಸ್ತೆಯುದ್ದಕ್ಕೂ ಜಾಗೃತಿ ಘೋಷಣೆ ಕೂಗುತ್ತಾ ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಯಿತು.

ಬೀದಿ ನಾಟಕದ ಮೂಲಕ ಅರಿವು

ಘನತ್ಯಾಜ್ಯ ನಿರ್ವಹಣೆ ಕುರಿತಂತೆ ನಾನಾ ಸ್ಥಳಗಳಲ್ಲಿ ಬೀದಿ ನಾಟಕಗಳನ್ನು ಆಯೋಜಿಸಿ ನಾಟಕದ ಮೂಲಕ ಕಸ ವಿಂಗಡಣೆ, ಪ್ಲಾಸ್ಟಿಕ್ ನಿಷೇಧ ಸೇರಿದಂತೆ ಇನ್ನಿತರೆ ವಿಚಾರಗಳ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.

ಮಡಿವಾಳ ಹಾಗೂ ಸಾರಕ್ಕಿ ಮಾರುಕಟ್ಟೆಯಲ್ಲಿ ಬಟ್ಟೆ ಬ್ಯಾಗ್ ಹಂಚುವ ಮೂಲಕ ಜಾಗೃತಿ

ನಗರದ ಮಡಿವಾಳ ಹಾಗೂ ಸಾರಕ್ಕಿ ಮಾರುಕಟ್ಟೆಗೆ ಬಂದಂತಹ ನಾಗರಿಕರಿಗೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಮಾರಕವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ದುಷ್ಪರಿಣಾಮ ಬೀರಲಿದೆ. ಆದ್ದರಿಂದ ಬಟ್ಟೆಯಿಂದ, ನಾರಿನಿಂದ ಹಾಗೂ ಪೇಪರ್‌ನಿಂದ ತಯಾರಿಸಿದ ಬ್ಯಾಗ್‌ಗಳನ್ನು ಮಾತ್ರ ಬಳಸಲು ಅರಿವು ಮೂಡಿಸಲಾಯಿತು.

ಜೊತೆಗೆ ಪಾಲಿಕೆ ವತಿಯಿಂದಲೇ ಬಟ್ಟೆಯಿಂದ ತಯಾರಿಸಿರುವ ಬ್ಯಾಗ್‌ಗಳನ್ನು ನಾಗರಿಕರಿಗೆ ವಿತರಿಸಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಕೈಚೀಲಗಳನ್ನು ಬಳಸದಂತೆ ಅರಿವು ಮೂಡಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹20 ಲಕ್ಷ ವಶಕ್ಕೆ

ಪದ್ಮನಾಭನಗರ ವಿಭಾಗದ ಗಣೇಶ ಮಂದಿರ ವಾರ್ಡ್ ಸುತ್ತಮುತ್ತಲಿನ ಪ್ರದೇಶ, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶ, ಬಿಟಿಎಂ ಬಡಾವಣೆಯ ಸುತ್ತಮುತ್ತಲಿನ ಪ್ರದೇಶ ಹಾಗೂ ಮಡಿವಾಳ ಮಾರುಕಟ್ಟೆ, ಬಸವನಗುಡಿ ಕತ್ರಿಗುಪ್ಪೆ ವ್ಯಾಪ್ತಿಯ ಸ್ಮಾರ್ಟ್ ಬಜಾರ್, ವಿಜಯ ನಗರದ ಜಿಟಿ ಮಾಲ್, ಜಯನಗರ ಸಾರಕ್ಕಿ ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶ, ಚಿಕ್ಕಪೇಟೆಯ ಲಾಲ್ ಬಾಗ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಜಾಗೃತಿ ಅರಿವು ಮೂಡಿಸಲಾಯಿತು.

ಜಾಗೃತಿ ಕಾರ್ಯದಲ್ಲಿ ಘನತ್ಯಾಜ್ಯ ವಿಭಾಗದ ಅಧಿಕಾರಿಗಳು, ಕಿರಿಯ ಆರೋಗ್ಯ ಪರಿವೀಕ್ಷಕರು, ಲಿಂಕ್ ವರ್ಕರ್ಸ್‌ಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿನಿಧಿಗಳು, ನಾನಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮಾರ್ಷಲ್‌ಗಳು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...