ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಬಡಾವಣೆಗೆ ಹೊಂದಿಕೊಂಡಿರುವ ಬಂಗಾರಪ್ಪ ನಗರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು, ಜನರು ನೀರಿಗಾಗಿ ಕಿಲೋಮೀಟರ್ ಗಟ್ಟಲೆ ನಡೆಯಬೇಕಾಗಿದೆ. ನೀರಿಲ್ಲದೇ ಜನರು ಹೈರಾಣಾಗಿದ್ದಾರೆ.
ಬಂಗಾರಪ್ಪನಗರದಲ್ಲಿ 1,500ಕ್ಕೂ ಹೆಚ್ಚು ಮನೆಗಳಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೊರೆಸಿರುವ ಆರು ಕೊಳವೆಬಾವಿಗಳಲ್ಲಿ ಇದೀಗ, ನೀರು ಬತ್ತಿಹೋಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.
ಕಳೆದ ಎರಡು-ಮೂರು ದಿನಕ್ಕೊಮ್ಮೆ ಟ್ಯಾಂಕರ್ ಬಂದರೂ ಕೂಡ ನೀರು ಸಿಗದೇ ಜನರು ಹೈರಾಣಾಗಿದ್ದಾರೆ. ಮನೆಗಳ ಮುಂದೆ ದೊಡ್ಡ ದೊಡ್ಡ ಡ್ರಮ್‌ಗಳು, ಖಾಲಿ ಬಿಂದಿಗೆ, ಬಕೆಟ್‌ಗಳು ಕಾಣ ಸಿಗುತ್ತಿವೆ. ಟ್ಯಾಂಕರ್ ನೀರು ಕೂಡ ಜನರಿಗೆ ಸರಿಯಾಗಿ ತಲುಪುತ್ತಿಲ್ಲ. ಇದರಿಂದ ಮಹಿಳೆಯರು ಬೀದಿಯಲ್ಲಿ ನೀರಿಗಾಗಿ ಕಚ್ಚಾಡುವ ಸ್ಥಿತಿ ಎದುರಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯಕರನೊಂದಿಗೆ ಸೇರಿ ಎರಡು ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ
ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿ ಜನರಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ ಒಂದು ತಿಂಗಳಾಗಿದೆ. ಇದರಿಂದ ಆಟೊಗಳಲ್ಲಿ ಬಕೆಟ್, ದೊಡ್ಡ ಪಾತ್ರೆಗಳಲ್ಲಿ ನೀರು ತುಂಬಿಕೊಂಡು ತಂದು ಜನ ಜೀವನ ಸಾಗಿಸಬೇಕಾಗಿದೆ ಎಂದೆನ್ನುತ್ತಾರೆ ಸ್ಥಳೀಯರು.