ಬೆಂಗಳೂರು | ರೌಡಿಶೀಟರ್ ಕಾರ್ತಿಕೇಯನ್ ಬರ್ಬರ ಹತ್ಯೆ

Date:

ರೌಡಿಶೀಟರ್ ಕಾರ್ತಿಕೇಯನ್ (40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ನಡೆದಿದೆ.

- Advertisement -

ರಾಮಸ್ವಾಮಿ ಪಾಳ್ಯದ ನಡುರಸ್ತೆಯಲ್ಲಿ ಅಟ್ಟಾಡಿಸಿ ರೌಡಿಶೀಟರ್ ಕಾರ್ತಿಕೇಯನ್​ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಕಾರ್ತಿಕೇಯನ್ ಮೃತಪಟ್ಟಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹಳೇ ದ್ವೇಷ ಹಾಗೂ ರಿಯಲ್ಎಸ್ಟೇಟ್ ವ್ಯವಹಾರದಲ್ಲಿ ಜಗಳ ಆಗಿ ಹತ್ಯೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಈ ಕುರಿತು ಬಾಣಸವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾರ್ತಿಕೇಯನ್ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಕೇಯನ್ ಗಡಿಪಾರಾಗಿದ್ದನು. ನಂತರ ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದನು. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸಿಕ್ಕಿದ್ದ ಹೆಣ್ಣು ಭ್ರೂಣದ ತಾಯಿ ಪತ್ತೆ

ಕಾರ್ತಿಕೇಯನ್ ವಿವಾದಿತ ಜಾಗಗಳಿಗೆ ಬೇಲಿ ಹಾಕಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದನು. ಈತ ಮೈಕಲ್ ಮಂಜ ಹಾಗೂ ಸಹಚರರ ವಿರೋಧ ಕಟ್ಟಿಕೊಂಡಿದ್ದನು ಎಂದು ತಿಳಿದುಬಂದಿದೆ. ಸ್ನೇಹಿತರ ಬಳಿ ಇರುವ ಲೆಸೆನ್ಸ್ ಇರೋ ಗನ್ ಪಡೆದುಕೊಂಡು ಕೆಲವರಿಗೆ ತೋರಿಸಿ ಬೆದರಿಕೆ ಹಾಕುತ್ತಿದ್ದನು ಎಂಬ ಆರೋಪ ಕಾರ್ತಿಕೇಯನ್ ಮೇಲೆ ಇತ್ತು.

ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...