ಬೆಂಗಳೂರು | ಚಿನ್ನಾಭರಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ಆರೋಪಿಯ ಬಂಧನ

Date:

ಚಿನ್ನಾಭರಣಕ್ಕಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. ಕೊಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಒಂದು ವಾರದ ಹಿಂದೆ ಮಹಿಳೆಯ ಕೊಲೆ ನಡೆದಿದೆ. ಯಾವುದೇ ಸಾಕ್ಷ್ಯ ಸಿಗದಂತೆ ಮಹಿಳೆಯನ್ನು ಕೊಲೆ ಮಾಡಿ ಪೆಟ್ರೋಲ್​ನಿಂದ ಸುಟ್ಟು ಹಾಕಲಾಗಿದೆ. ವಾರದ ಹಿಂದೆ ತಲೆ ಬುರುಡೆ, ಮೂಳೆಗಳು ಪತ್ತೆಯಾಗಿದ್ದವು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸುಕನ್ಯಾ (36) ಮೃತ ದುರ್ದೈವಿ. ಈಕೆ ಮೂಲತಃ ದೊಡ್ಡಕಮ್ಮನಹಳ್ಳಿ ನಿವಾಸಿ. ಅದೇ ಗ್ರಾಮದ ಜಶ್ವಂತ (20) ಕೊಲೆ ಮಾಡಿದ ಆರೋಪಿ. ಈತ ಸುಕನ್ಯಾಳ ಪತಿಯ ತಂಗಿ ಮಗ.

ಫೆಬ್ರುವರಿ 12ರಂದು ಸುಕನ್ಯಾ ನಾಪತ್ತೆಯಾಗಿದ್ದಾರೆ ಎಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಳಿಕ ಬಿಂಗೀಪುರ ಗ್ರಾಮದಲ್ಲಿ ಅಪರಿಚಿತ ಮಹಿಳೆಯ ತಲೆ ಬುರುಡೆ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ಅತ್ತೆ ಸುಕನ್ಯಾ ಅವರ ಜತೆಗೆ ಸಲುಗೆಯಿಂದ ಇದ್ದ ಜಶ್ವಂತ ಆಕೆ ಬಳಿ ಪದೇಪದೆ ಹಣಕ್ಕೆ ಬೇಡಿಕೆ ಇಡುತ್ತಿದ್ದನು. ಅಲ್ಲದೇ, ತನ್ನ ಕಾರು ರೀಪೇರಿಗೆ ದುಡ್ಡು ಕೇಳುತ್ತಿದ್ದನು. ಇನ್ನಿತರ ಖರ್ಚು ವೆಚ್ಚಗಳಿಗಾಗಿ ಪದೇಪದೆ ಹಣಕ್ಕೆ ಬೇಡಿಕೆ ಇಡುತ್ತಿದ್ದನು. ಮೃತ ಮಹಿಳೆ ಸುಕನ್ಯಾ ಹಣ ನೀಡದೆ ಇದ್ದಾಗ ಆಕೆಯ ಚಿನ್ನಾಭರಣ ನೀಡುವಂತೆ ಪೀಡಿಸುತ್ತಿದ್ದನು ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವ್ಹೀಲಿಂಗ್ ಮಾಡುವವರ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು

ಅತ್ತೆ ಸುಕನ್ಯಾಳನ್ನು ಜಶ್ವಂತ ತನ್ನ ಕಾರಿನಲ್ಲಿ ಒಂದು ದಿನ ಬಿಂಗೀಪುರದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿರುವ ಗುರುತು ಸಿಗಬಾರದು ಎಂದು ಆಕೆಯ ಕೂದಲನ್ನು ಕತ್ತರಿಸಿ, ಮೃತದೇಹವನ್ನ ನಿರ್ಜನ ಪ್ರದೇಶದ ಕಾಂಪೌಂಡ್​ ಬಳಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಬಳಿಕ ಆಕೆಯ ಚಿನ್ನಾಭರಣ ತೆಗೆದುಕೊಂಡು ಗೋವಾದಲ್ಲಿ ವ್ಯಾಲಂಟೈನ್ಸ್ ಡೇ ಸೆಲೆಬ್ರೆಷನ್ ಮಾಡಿದ್ದನು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....