ಬೆಂಗಳೂರು | ಅನಧಿಕೃತವಾಗಿ ಜಾಹೀರಾತು ಅಳವಡಿಸಿದವರ ವಿರುದ್ಧ ಕ್ರಮ; ಹೈಕೋರ್ಟ್‌ಗೆ ವರದಿ ನೀಡಿದ ಬಿಬಿಎಂಪಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತವಾಗಿ ಅಳವಡಿಸಿದ ಜಾಹೀರಾತು ಫಲಕಗಳ ತೆರವು ಹಾಗೂ ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವರದಿ ಸಲ್ಲಿಸಿದೆ.

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ಬಗ್ಗೆ ಆಕ್ಷೇಪಿಸಿ ನಗರದ ಸರಸ್ವತಿಪುರ ನಿವಾಸಿ ಮಾಯಿಗೇಗೌಡ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ ಮತ್ತು ಟಿ.ಜಿ.ಶಿವಶಂಕರೇಗೌಡ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿದೆ.

ನ್ಯಾಯಪೀಠಕ್ಕೆ ಬಿಬಿಎಂಪಿ ವಕೀಲರು ವರದಿ ಸಲ್ಲಿಸಿದರು. ಈ ವರದಿಯನ್ನು ಪರಿಶೀಲಿಸಿ, ಅದರಲ್ಲಿನ ಆಕ್ಷೇಪಣೆಗಳಿದ್ದರೆ, ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ನ್ಯಾಯಪೀಠ ತಿಳಿಸಿದೆ. ವಿಚಾರಣೆ ಮುಂದೂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2024ರ ಜನವರಿ 19ರಿಂದ ಫೆಬ್ರವರಿ 10ರ ವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಅಳವಡಿಸಿರುವ ಜಾಹೀರಾತು ಫಲಕಗಳ ತೆರವು ಮಾಡುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಗಿದೆ.

ಈಗ ನಡೆಸಿದ ಸಮೀಕ್ಷೆಯಲ್ಲಿ ನಗರದಲ್ಲಿ 402 ಜಾಹೀರಾತು ಫಲಕ ಗುರುತು ಮಾಡಲಾಗಿದೆ. ಅವುಗಳ ಪೈಕಿ 150 ಅಧಿಕೃತ ಹಾಗೂ 251 ಅನಧಿಕೃತವಾಗಿದೆ. ಇನ್ನು 40 ಜಾಹೀರಾತುಗಳ ಅಳವಡಿಕೆ ಕುರಿತಂತೆ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿಯಿದೆ.

203 ಜಾಹೀರಾತು ಅಳವಡಿಕೆದಾರರ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ. ಈ ಪೈಕಿ 73 ಅಳವಡಿಕೆದಾರರೇ ಸ್ವಯಂ ಪ್ರೇರಿತವಾಗಿ ಜಾಹೀರಾತು ತೆರುವು ಮಾಡಿದ್ದರೇ, 123 ಜಾಹೀರಾತುಗಳನ್ನು ಬಿಬಿಎಂಪಿ ತೆರವುಗೊಳಿಸಿದೆ. ಇನ್ನು 12 ಜಾಹೀರಾತು ಫಲಕಗಳ ತೆರವುಗೊಳಿಸುವ ಕಾರ್ಯ ಬಾಕಿಯಿದೆ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ; ರಾಜ್ಯ ಸರ್ಕಾರದ ಸುತ್ತೋಲೆ

ಬಿಬಿಎಂಪಿಯಿಂದ ಅನುಮತಿ ಪಡಿಯದೇ ಅನಧಿಕೃತವಾಗಿ ಜಾಹೀರಾತು ಹೋರ್ಡಿಂಗ್ ಹಾಕಿದವರ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ಇನ್ನು ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿಗೊಳಿಸಲಾಗುತ್ತಿದೆ ಎಂದು ಬಿಬಿಎಂಪಿ ವರದಿಯಲ್ಲಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಗತ್ ಸಿಂಗ್ ಹೆಸರಿಡಲು ಆಗ್ರಹಿಸಿ ಸಾವರ್ಕರ್ ಫ್ಲೈ ಓವರ್‌ಗೆ ಮಸಿ ಬಳಿದ NSUI ಕಾರ್ಯಕರ್ತರು: ಮೂವರ ಬಂಧನ

ಬೆಂಗಳೂರು ನಗರದ ಹೊರವಲಯದ ಯಲಹಂಕದಲ್ಲಿರುವ ಫ್ಲೈ ಓವರ್‌ಗೆ ಇಟ್ಟಿರುವ ಸಾವರ್ಕರ್ ಹೆಸರನ್ನು...

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ...

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...

ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು...