ಬೆಂಗಳೂರು | ಕೋವಿಡ್‌ ಶವ ಸಂಸ್ಕಾರಕ್ಕೆ 4 ಚಿತಾಗಾರ ಮೀಸಲಿಟ್ಟ ಬಿಬಿಎಂಪಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಈ ಹಿಂದೆ ಕೋವಿಡ್ ಸೋಂಕಿನಿಂದ ಸಾವಿರಾರು ಜನ ಸಾವನ್ನಪ್ಪಿದ್ದರು. ಈ ವೇಳೆ, ಮೃತಪಟ್ಟವರನ್ನು ಅಂತ್ಯಸಂಸ್ಕಾರ ಮಾಡಲು ಚಿತಾಗಾರದ ಸಮಸ್ಯೆ ಉಂಟಾಗಿತ್ತು. ಹೀಗಾಗಿ, ಮುಂಜಾಗೃತಾ ಕ್ರಮವಾಗಿ ಸೋಂಕಿನಿಂದ ಯಾರಾದರೂ ಮೃತಪಟ್ಟರೆ, ಅವರನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡಲು ಪಾಲಿಕೆ ತಯಾರಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಮೃತದೇಹ ಸಾಗಿಸಲು ಕೂಡ ಆ್ಯಂಬುಲೆನ್ಸ್‌ ಅಥವಾ ಬೇರೆ ವಾಹನ ಸಿಗದೆ ಜನರು ಪರದಾಡುವಂತಾಗಿತ್ತು. ಈ ಬಾರಿ ಅದನ್ನು ತಪ್ಪಿಸಲು ಮೃತದೇಹವನ್ನು ಚಿತಾಗಾರಗಳಿಗೆ ತೆಗೆದುಕೊಂಡು ಹೋಗಲು 8 ವಲಯಕ್ಕೆ ತಲಾ ಒಂದು ಆ್ಯಂಬುಲೆನ್ಸ್‌ ಮೀಸಲಿಡಲಾಗುತ್ತಿದೆ.

ಸದ್ಯ ಕೊರೋನಾ ಸೋಂಕಿನಿಂದ ಸಾವನಪ್ಪುವವರ ಸಂಖ್ಯೆ ಕಡಿಮೆಯಿರುವ ಕಾರಣ ವಲಯಕ್ಕೊಂದು ಆ್ಯಂಬುಲೆನ್ಸ್‌ ಮೀಸಲಿಡಲಾಗಿದೆ. ಮುಂದೆ ಪ್ರಮಾಣ ಹೆಚ್ಚಾದರೆ ಆ್ಯಂಬುಲೆನ್ಸ್‌ ಸಂಖ್ಯೆ ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

Advertisements

ಈ ಹಿಂದೆ ಅಂತ್ಯ ಸಂಸ್ಕಾರಕ್ಕೆ ಚಿತಾಗಾರಗಳಲ್ಲಿ ತೀವ್ರ ಸಮಸ್ಯೆ ಉಂಟಾಗಿತ್ತು. ಬೆಂಗಳೂರಿನಲ್ಲಿ 12 ವಿದ್ಯುತ್‌ ಚಿತಾಗಾರಗಳಿದ್ದು, ಈ ಪೈಕಿ ಸುಮನಹಳ್ಳಿ, ಮೇಟಿ ಅಗ್ರಹಾರ, ಬನಶಂಕರಿ, ಹೆಬ್ಬಾಳ ಚಿತಾಗಾರಗಳು ಸೇರಿದಂತೆ ಒಟ್ಟು ನಾಲ್ಕು ಚಿತಾಗಾರಗಳನ್ನು ಅಂತ್ಯಕ್ರಿಯೆಗೆ ಮೀಸಲಿಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜಿನೊಮಿಕ್ ಸೀಕ್ವೆನ್ಸ್​ಗೆ 45 ಸ್ಯಾಂಪಲ್ ಕಳಿಸಿದ ಆರೋಗ್ಯ ಇಲಾಖೆ

ರುದ್ರಭೂಮಿ ಹಾಗೂ ಚಿತಾಗಾರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಆರೋಗ್ಯ ಹಿತದೃಷ್ಟಿಯಿಂದ ಬಿಬಿಎಂಪಿ ಸುರಕ್ಷತೆ ಕ್ರಮ ಕೈಗೊಳ್ಳುತ್ತಿದೆ. ಬಿಬಿಎಂಪಿಯ ಎಲ್ಲ ಚಿತಾಗಾರ ಹಾಗೂ ರುದ್ರಭೂಮಿಗಳಲ್ಲಿ ಕಾರ್ಯನಿರ್ವಹಿಸುವ 148 ಮಂದಿಗೆ ಪಿಪಿಇ ಕಿಟ್‌ ನೀಡುವುದಕ್ಕೆ ಪಾಲಿಕೆ ಮುಂದಾಗಿದೆ. ಇದಕ್ಕೆ ಅನುಮತಿ ಕೋರಿ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X