ಬೆಂಗಳೂರು | ಮಳೆನೀರು ಮರುಬಳಕೆಗಾಗಿ ಇಂಗುಗುಂಡಿ ನಿರ್ಮಾಣಕ್ಕೆ ಮುಂದಾದ ಬಿಬಿಎಂಪಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರು ನಗರೀಕರಣದತ್ತ ದಾಪುಗಾಲಿಡುತ್ತ ಸಾಗಿದೆ. ನಗರ ಸಂಪೂರ್ಣ ಕಾಂಕ್ರೀಟ್‌ ಮಯವಾಗಿದ್ದು, ಮಣ್ಣು ಸಿಗುವುದೇ ಕಷ್ಟಕರವಾಗಿದೆ. ಮಳೆಯಾದರೂ ನೀರು ಇಂಗಲು ಜಾಗವಿಲ್ಲದಂತಾಗಿದೆ. ಇದರಿಂದ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇದೀಗ, ನಗರದಲ್ಲಿರುವ ಉದ್ಯಾನವನಗಳ ನಿರ್ವಹಣೆಗೆ ಮಳೆನೀರು ಬಳಕೆ ಮಾಡಿಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಬೆಂಗಳೂರಿನ 115 ಪಾರ್ಕ್‌ಗಳಲ್ಲಿ ಇಂಗುಗುಂಡಿ ನಿರ್ಮಾಣ ಮಾಡುವುದಕ್ಕೆ ಪಾಲಿಕೆ ಸಜ್ಜಾಗಿದೆ. ಉದ್ಯಾನವನದಲ್ಲಿರುವ ಮರ ಗಿಡಗಳ ಪೋಷಣೆ ಮಾಡುವುದಕ್ಕೆ ಸಜ್ಜಾಗಿರುವ ಪಾಲಿಕೆ ಸಿಎಸ್‌ಆರ್‌ ಫಂಡ್ ಬಳಕೆ ಮಾಡಿ ಮಳೆ ನೀರಿನ ಮರು ಬಳಕೆ ಮಾಡುವುದಕ್ಕೆ ಯೋಜನೆ ರೂಪಿಸಿದೆ. ಮಳೆನೀರಿನ ಸಂರಕ್ಷಣೆ ಜೊತೆಗೆ ಮರುಬಳಕೆ ಮಾಡೋದಕ್ಕೆ ಯೋಜನೆ ರೂಪಿಸಿದೆ.

ಮುಂದಿನ ಮಾನ್ಸೂನ್ ಒಳಗಾಗಿ ಬೆಂಗಳೂರಿನ 115 ಪಾರ್ಕ್‌ಗಳಲ್ಲಿ 1 ಸಾವಿರ ಇಂಗುಗುಂಡಿಗಳನ್ನು ಪಾಲಿಕೆ ನಿರ್ಮಾಣ ಮಾಡಲಿದೆ. ಈಗಾಗಲೇ, ದಾಸರಹಳ್ಳಿ, ಯಲಹಂಕ, ದಕ್ಷಿಣ ವಲಯದಲ್ಲಿ ಇಂಗುಗುಂಡಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ವರ್ಷದೊಳಗೆ ಸಾಧ್ಯವಾದಷ್ಟು ಇಂಗುಗುಂಡಿ ನಿರ್ಮಾಣ ಮಾಡುವುದಕ್ಕೆ ಪಾಲಿಕೆ ಮುಂದಾಗಿದೆ.

Advertisements

ಸದ್ಯ ಬೆಂಗಳೂರಿನಲ್ಲಿರುವ ಪಾರ್ಕ್‌ಗಳ ನಿರ್ವಹಣೆಯನ್ನು ಪಾಲಿಕೆ ಖಾಸಗಿಯವರಿಗೆ ವಹಿಸಿದೆ. ಈ ಹಿಂದೆ ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಪಾಲಿಕೆ ಲಾಲ್ ಬಾಗ್, ಚಾಮರಾಜಪೇಟೆಯ ಜಿಂಕೆವನ ಸೇರಿದಂತೆ ಹಲವೆಡೆ ಇಂಗುಗುಂಡಿ ನಿರ್ಮಾಣ ಮಾಡಿದೆ. ಆದರೆ, ಇದೀಗ ನಿರ್ಮಾಣ ಮಾಡುತ್ತಿರುವ ಇಂಗುಗುಂಡಿಗಳು 20 ಅಡಿ ಆಳ, 4 ಅಡಿ ಅಗಲ ಇರಲಿವೆ.

ಕಳೆದ ಬಾರಿಗಿಂತ ಈ ಬಾರಿಯ ಇಂಗುಗುಂಡಿಗಳ ಗಾತ್ರ ದೊಡ್ಡದಾಗಿದೆ. ಒಂದು ಇಂಗುಗುಂಡಿ ನಿರ್ಮಾಣಕ್ಕೆ ₹40 ಸಾವಿರ ವೆಚ್ಚವಾಗಲಿದೆ. ಈ ವೆಚ್ಚವನ್ನ ಸಿಎಸ್‌ಆರ್‌ ಫಂಡ್ ಮೂಲಕ ಪಾಲಿಕೆ ಭರಿಸಲಿದೆ. ಒಂದು ಇಂಗುಗುಂಡಿ ಸುಮಾರು 4 ಸಾವಿರ ಲೀಟರ್ ನೀರು ಸಂಗ್ರಹಿಸುವಂತೆ ನಿರ್ಮಾಣ ಮಾಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ದಟ್ಟಣೆ ನಿವಾರಣೆಗೆ ಡ್ರೋನ್‌ಗಳ ಹಾರಾಟ

ಮಳೆ ನೀರು ಭೂಮಿಯ ಮೇಲೆ ಹರಿದು ಚರಂಡಿಗಳನ್ನು ಸೇರುವುದಕ್ಕಿಂತ ಇಂಗುವ ಪ್ರಕ್ರಿಯೆಯಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗುತ್ತದೆ. ವ್ಯರ್ಥವಾಗಿ ಚರಂಡಿಗೆ ಹರಿದು ಹೋಗುತ್ತಿರುವ ಮಳೆ ನೀರು ಪೋಷಣೆ ಮಾಡುವ ಈ ಯೋಜನೆ ಉತ್ತಮವಾಗಿದ್ದು, ಇದು ಜಾರಿಯಾದ ಮೇಲೆ ಬಳಕೆ ಹೇಗೆ ಆಗುತ್ತದೆ ಎಂದು ಕಾದುನೋಡಬೇಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X