ಬೆಂಗಳೂರು | ಖಾಸಗಿ ಟ್ಯಾಂಕರ್​​​​ಗಳಿಗೆ ದರ ನಿಗದಿಗೆ ಮುಂದಾದ ಬಿಬಿಎಂಪಿ

Date:

ಸಕಾಲಕ್ಕೆ ಮಳೆಯಾಗದ ಕಾರಣ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದ್ದು, ಜನರು ನೀರಿಲ್ಲದೇ ಪರದಾಡುವಂತಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಇದೀಗ ನಗರದಲ್ಲಿ ನೀರಿನ ಕೊರತೆ ಹೆಚ್ಚಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಟ್ಯಾಂಕರ್ ಮಾಲೀಕರು ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

- Advertisement -

ಬೆಂಗಳೂರಿನ ಹಲವೆಡೆ ಅಂತರ್ಜಲ ಮಟ್ಟ ಕುಸಿದ ಕಾರಣ ನೀರಿನ ಸಮಸ್ಯೆ ಎದುರಾಗಿದೆ. ಇನ್ನು ಕೆ.ಆರ್‌ಪುರಂ ಸೇರಿದಂತೆ ಹಲವೆಡೆ ಜಲಮಂಡಳಿ ಕಾವೇರಿ ನೀರನ್ನು 15 ದಿನಕ್ಕೊಮ್ಮೆ ಬಿಡುತ್ತಿದೆ. ಇದರಿಂದ ಜನರು ನೀರಿಲ್ಲದೇ, ಎರಡು ದಿನಕ್ಕೊಮ್ಮೆ ಟ್ಯಾಂಕರ್ ನೀರು ಹಾಕಿಸಿಕೊಳ್ಳುವಂತಾಗಿದೆ. ಈ ಹಿಂದೆ ₹500-₹600 ಇದ್ದ ಟ್ಯಾಂಕರ್ ನೀರಿನ ದರ ಇದೀಗ ₹900 ಗೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇಂದಿರಾನಗರ, ರಾಜಾಜಿನಗರ, ಸುಂಕದಕಟ್ಟೆಯಲ್ಲಿ ಹೆಚ್ಚು ಬೆಲೆಗೆ ನೀರು ಮಾರಾಟ ಮಾಡಲಾಗುತ್ತಿದೆ. 20 ಸಾವಿರ ಲೀಟರ್ ನೀರಿಗೆ ₹6,500 ಪಡೆಯುತ್ತಿದ್ದಾರೆ. 5 ಸಾವಿರ ಲೀಟರ್ ನೀರಿಗೆ 1000 ದಿಂದ 6 ಸಾವಿರ ವರೆಗೆ ಟ್ಯಾಂಕರ್ ನೀರು ಮಾರಾಟ ಮಾಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಂಗಿಯ ಎಂಗೇಜ್ಮೆಂಟ್‌ಗೆ ಬರಲಿಲ್ಲವೆಂದು ಪತ್ನಿಗೆ ಚಾಕು ಇರಿದ ದುಷ್ಟ ಪತಿ

ಈ ಹಿಂದೆ ಬಿಬಿಎಂಪಿ 5 ಸಾವಿರ ಲೀಟರ್ ಟ್ಯಾಂಕರ್​ಗೆ ₹540, 12 ಸಾವಿರ ಲೀಟರ್ ನೀರಿಗೆ ₹1,000 ನಿಗದಿ ಮಾಡಿತ್ತು. ಆದರೆ, ಬೇಸಿಗೆ ಆರಂಭಕ್ಕೂ ಮುನ್ನವೇ ಟ್ಯಾಂಕರ್ ಮಾಲೀಕರು ಜನರಿಂದ ಹಣ ವಸೂಲಿಗೆ ಮುಂದಾಗಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ ಪಾಲಿಕೆಗೆ ದೂರು ಬಂದ ಹಿನ್ನೆಲೆ, ನೀರು ಪೂರೈಸುವ ಖಾಸಗಿ ಟ್ಯಾಂಕರ್ ಮಾಲೀಕರಿಗೆ ದರ ನಿಗದಿ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ. ದರ ನಿಗದಿ ಮಾಡಲು ಆಯಾ ವಲಯಗಳ ವಲಯ ಆಯುಕ್ತರಿಗೆ ಈ ಬಗ್ಗೆ ಸೂಚನೆ ನೀಡಿದೆ. ಜತೆಗೆ, ಜನರಿಂದ ಹೆಚ್ಚಿನ ಹಣ ವಸೂಲಿ ಮಾಡಿದರೇ ಅಂತಹವರ ಟ್ರೇಡ್ ಲೈಸೆನ್ಸ್‌ ರದ್ದು ಮಾಡಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...