ಬೆಂಗಳೂರು | ₹5 ಕೋಟಿ ವೆಚ್ಚದಲ್ಲಿ ಫ್ರೀಡಂ ಪಾರ್ಕ್ ನವೀಕರಣ

Date:

ಪ್ರತಿಭಟನೆಗಳಿಗೆಂದೆ ಸೀಮಿತವಾಗಿರುವ ಬೆಂಗಳೂರಿನ ಹೃದಯಭಾಗದಲ್ಲಿರುವ ಫ್ರೀಡಂಪಾರ್ಕ್‌ ಅನ್ನು ನವೀಕರಿಸಿ ಪ್ರೇಕ್ಷಣೀಯ ಸ್ಥಳ ಹಾಗೂ ಹೆರಿಟೇಜ್ ಹಬ್ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಜತೆಗೆ, ಇದರಿಂದ ಬಿಬಿಎಂಪಿಗೆ ಆದಾಯ ಬರುವಂತೆ ಮಾಡಿಕೊಳ್ಳಲು ಯೋಜಿಸಿದೆ.

- Advertisement -

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸದ್ಯ ಪ್ರತಿಭಟನೆಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಸ್ಥಳ ಪ್ರತಿಭಟನೆ ನಡೆಯಲು ಮಾತ್ರ ಸೀಮಿತವಾಗಿದೆ ಎನ್ನುವಂತಾಗಿದೆ. ಇದೀಗ, 21 ಎಕರೆಯಲ್ಲಿರುವ ಈ ಫ್ರೀಡಂ ಪಾರ್ಕ್ ಅನ್ನು ನವೀಕರಣಗೊಳಿಸಲು ಬಿಬಿಎಂಪಿ ₹5 ಕೋಟಿ ಮೀಸಲಿಟ್ಟಿದ್ದು, ನವೀಕರಣ ಮಾಡಿ ಪ್ರೇಕ್ಷಣೀಯ ಸ್ಥಳದ ಜತೆಗೆ, ಹೆರಿಟೇಜ್ ಹಬ್ ಮಾಡಲು ಬಿಬಿಎಂಪಿ ಯೋಜಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೀಗ, ಫ್ರೀಡಂ ಪಾರ್ಕ್‌ನಲ್ಲಿ ಅಸ್ತಿತ್ವದಲ್ಲಿರುವ ಕಟ್ಟಡಗಳ ನವೀಕರಣ, ಹಳೆಯ ಸೆಂಟ್ರಲ್ ಜೈಲ್ ರಚನೆಗಳು, ವಿದ್ಯುತೀಕರಣ ಹಾಗೂ ದುರಸ್ತಿಗಾಗಿ ಬಿಬಿಎಂಪಿ ಯೋಜನೆ ರೂಪಿಸಿದೆ. ಜತೆಗೆ, ಕಟ್ಟಡಗಳಿಗೆ ಹಾನಿ ಸೇರಿದಂತೆ ನಾನಾ ಕಾಮಗಾರಿಯೊಂದಿಗೆ ರಾಮಚಂದ್ರ ರಸ್ತೆಯಿಂದ ಫ್ರೀಡಂ ಪಾರ್ಕ್​ಗೆ ಎರಡನೇ ಪ್ರವೇಶ ದ್ವಾರ ನಿರ್ಮಾಣಕ್ಕೆ ಯೋಜನೆ ನಡೆದಿದೆ.

ಫ್ರೀಡಂ ಪಾರ್ಕ್ ಅನ್ನು 2008ರಲ್ಲಿ ಸಾರ್ವಜನಿಕರಿಗೆ ತೆರೆಯಲಾಯಿತು. ಈ ಫ್ರೀಡಂ ಪಾರ್ಕ್‌ನಲ್ಲಿ ಈ ಹಿಂದಿನ ಕೇಂದ್ರ ಕಾರಾಗೃಹ ಒಳಗೊಂಡಿದೆ. ಕಾಲಾನಂತರದಲ್ಲಿ, ಫ್ರೀಡಂ ಪಾರ್ಕ್ ಹದಗೆಟ್ಟಿದೆ. ವಿಶೇಷವಾಗಿ ಕೇಂದ್ರ ಕಾರಾಗೃಹ ಭಾಗ ಸಂಪೂರ್ಣವಾಗಿ ಹದಗೆಟ್ಟಿದೆ. ಸದ್ಯ ಫ್ರೀಡಂ ಪಾರ್ಕ್ ಒಳಗಡೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಮುಂದಿನ ದಿನಗಳಲ್ಲಿ ಪಾರ್ಕ್‌ ನವೀಕರಣ ಮಾಡಿ ವಾಣಿಜ್ಯ ಆದಾಯ ಬರುವಂತೆ ಮಾಡಲು ಪಾಲಿಕೆ ಯೋಜಿಸಿದೆ.

ಈಗ ಬಿಬಿಎಂಪಿಯು ಫ್ರೀಡಂ ಪಾರ್ಕ್‌ನ ಅಸ್ತಿತ್ವದಲ್ಲಿರುವ ರಚನೆಗಳ ನವೀಕರಣ, ಅಕೌಸ್ಟಿಕ್ಸ್ ಮತ್ತು ವಿದ್ಯುದ್ದೀಕರಣಕ್ಕಾಗಿ ಟೆಂಡರ್ ಕರೆದಿದೆ. ಸಂಪೂರ್ಣ ಕಾಮಗಾರಿಗೆ ₹5 ಕೋಟಿ ವೆಚ್ಚವಾಗಬಹುದು ಎಂದು ಬಿಬಿಎಂಪಿ ಬಜೆಟ್‌ ನೀಡಿದೆ. ಕೋವಿಡ್ ಕಾಲದಲ್ಲಿ ₹2 ಕೋಟಿ ವೆಚ್ಚದಲ್ಲಿ ಬಿಬಿಎಂಪಿ ಫ್ರೀಡಂ ಪಾರ್ಕ್‌ ಅನ್ನು ನವೀಕರಿಸಿದೆ. ಈ ಸಮಯದಲ್ಲಿ ಖಾಲಿ ಇದ್ದ ಸ್ಥಳದಲ್ಲಿ ಆಂಫಿ ಥಿಯೇಟರ್​​​, ಹೊರ ಸಭಾಂಗಣ ಹಾಗೂ ಗಾರ್ಡನ್ ಅನ್ನು ಹೊಸದಾಗಿ ನಿರ್ಮಿಸಲಾಗಿತ್ತು. ಆದರೆ, ಕಳಪೆ ಕಾಮಗಾರಿಯಿಂದ ಎಲ್ಲವೂ ಸಂಪೂರ್ಣ ಹಾಳಾಗಿದೆ. ಜತೆಗೆ, ಪಾರ್ಕ್‌ ಒಳಗಿರುವ ಹಳೆಯ ಜೈಲು ಕುಸಿಯುವ ಹಂತದಲ್ಲಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ತಾಂತ್ರಿಕ ದೋಷದಿಂದ ನೇರಳೆ ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ನಿಲ್ದಾಣಗಳಲ್ಲಿ ಜನಸಂದಣಿ

ಪಾರ್ಕ್‌ ನವೀಕರಿಸಲು ಬಿಬಿಎಂಪಿ ₹8 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಿತ್ತು. ಆದರೀಗ, ನವೀಕರಣಕ್ಕೆ ₹5 ಕೋಟಿ ಬಜೆಟ್‌ ಇದೆ. ಈ ಹಿನ್ನೆಲೆ, ಆಂಫಿಥಿಯೇಟರ್ ಒಳಗೆ ಹವಾನಿಯಂತ್ರಣ ಮತ್ತು ಅಕೌಸ್ಟಿಕ್ಸ್ ಯೋಜನೆಗಳನ್ನು ಬಿಬಿಎಂಪಿ ಕೈಬಿಟ್ಟಿದೆ ಎನ್ನಲಾಗಿದೆ.

60 ಆಸನಗಳ ಆಂಫಿಥಿಯೇಟರ್ ಅನ್ನು ನವೀಕರಿಸುವ ಯೋಜನೆಯನ್ನು ಪಾಲಿಕೆ ಕೈಬಿಟ್ಟಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ. ಪ್ರಸ್ತುತ, ಬಿಬಿಎಂಪಿಯು ಪ್ರವೇಶ ಶುಲ್ಕವಿಲ್ಲದೆ ಫ್ರೀಡಂ ಪಾರ್ಕ್ ಒಳಗೆ ಪ್ರವಾಸಿಗರಿಗೆ ಅವಕಾಶ ನೀಡುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...