ಬೆಂಗಳೂರು | ಕೆಂಪೇಗೌಡ ಬಡಾವಣೆಯಲ್ಲಿ ₹25 ಕೋಟಿ ಆಸ್ತಿ ವಶಪಡಿಸಿಕೊಂಡ ಬಿಡಿಎ

Date:

Advertisements

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತವಾಗಿ ನಿರ್ಮಾಣ ಮಾಡುತ್ತಿರುವ ಕಟ್ಟಡಗಳನ್ನು ತೆರವು ಮಾಡುವ ಕಾರ್ಯಾಚರಣೆ ಮುಂದುವರೆಸಿದ್ದು, ಇದೀಗ ನಗರದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿದ್ದ ಕಟ್ಟಡಗಳನ್ನು ತೆರವುಗೊಳಿಸಿ, ಬರೋಬ್ಬರಿ ₹25 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಸೂಚನೆಯಂತೆ ಈ ಕಾರ್ಯಾಚರಣೆ ನಡೆದಿದೆ. ಪ್ರಾಧಿಕಾರದ ಆರಕ್ಷಕ ಅಧೀಕ್ಷಕ ಕೆ. ನಂಜುಂಡೇಗೌಡ ಅವರ ನೇತೃತ್ವದಲ್ಲಿ ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಶೋಕ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ತಾವರೆಕೆರೆಯ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಬಿಡಿಎ ಮಾಹಿತಿ ನೀಡಿದೆ.

ಅ.17 ರಂದು ಬೆಳ್ಳಂಬೆಳಗ್ಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿದ್ದ ಕಟ್ಟಡಗಳನ್ನು ಬಿಡಿಎ ತೆರವುಗೊಳಿಸಿ ಆಸ್ತಿಯನ್ನು ಮರುವಶ ಪಡಿಸಿಕೊಂಡಿದೆ.

Advertisements

ಕೊಡಿಗೇಹಳ್ಳಿ ಗ್ರಾಮದ ಸರ್ವೆ ನಂ.108ರಲ್ಲಿನ 5 ಎಕರೆ ಪ್ರದೇಶವನ್ನು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನಪಡಿಸಿಕೊಂಡಿದ್ದು, ಈ ಪ್ರದೇಶದ ಪೈಕಿ 3 ಎಕರೆ 35 ಗುಂಟೆಯಲ್ಲಿ ರೆವಿನ್ಯೂ ನಿವೇಶನಗಳನ್ನು ರಚಿಸಲಾಗುತ್ತಿತ್ತು. ಇದಕ್ಕೆ ಸಂಬಂಧಪಟ್ಟಂತೆ ಅನೇಕ ಬಾರಿ ನೋಟಿಸ್ ಗಳನ್ನು ನೀಡಿದ್ದರೂ ಸಹ ಅನಧಿಕೃತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿತ್ತು” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ದಸರಾ ಹಬ್ಬದ ಪ್ರಯುಕ್ತ ಬೆಂಗಳೂರು-ವಾಸ್ಕೋ ಡ ಗಾಮಾ ನಡುವೆ ವಿಶೇಷ ರೈಲು ಸೇವೆ

“ಹಾಗಾಗಿ, ಅ.17ರಂದು ಬೆಳಗ್ಗೆ 3 ಎಕರೆ 35 ಗುಂಟೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 7 ಶೆಡ್ ಹಾಗೂ 3 ಕಾಂಕ್ರೀಟ್ ಕಟ್ಟಡವನ್ನು ತೆರವುಗೊಳಿಸಿ, ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕ್ಕೊಳ್ಳಲಾಗಿದೆ. ಅಲ್ಲದೇ, ಇವರ ವಿರುದ್ಧ ಭೂಕಬಳಿಕೆ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X