ಬೆಂಗಳೂರು | ಬಿಎಂಟಿಸಿ ಬಸ್‌ಗೆ ಅಡ್ಡ ಬಂದ ಪಾದಚಾರಿ; ಸಾವು

Date:

ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಪಾದಚಾರಿಯೊಬ್ಬರು ಇದ್ದಕ್ಕಿದ್ದಂತೆ ಬಿಎಂಟಿಸಿ ಬಸ್‌ಗೆ ಅಡ್ಡ ಬಂದಿದ್ದು, ಆತನ ಮೇಲೆ ಬಸ್‌ ಹರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚೇತನ್ (35) ಮೃತಪಟ್ಟ ವ್ಯಕ್ತಿ. ಇವರು ಮೂಲತಃ ಆಂಧ್ರಪ್ರದೇಶದವರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮಾರ್ಚ್‌ 14ರಂದು ಕೆಂಪೇಗೌಡ ಬಸ್ ನಿಲ್ದಾಣದಿಂದ ಜನಪ್ರಿಯ ಅಪಾರ್ಟ್‌ಮೆಂಟ್‌ ಕಡೆಗೆ ಬಿಎಂಟಿಸಿ ಬಸ್‌ ತೆರಳುತ್ತಿತ್ತು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಿಂದ ಸ್ವಲ್ಪ ಮುಂದೆ ಬಸ್‌ ಚಲಿಸುತ್ತಿದ್ದಾಗ ಪಾದಚಾರಿ ಚೇತನ್ ಓಡಿ ಬಂದು ರಸ್ತೆಗೆ ಬಿದ್ದಿದ್ದಾರೆ” ಎಂದು ಬಿಎಂಟಿಸಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಜೈಲಿನಲ್ಲಿದ್ದ ಮಾಜ್ ಮುನೀರ್​ ಎನ್ಐಎ ವಶಕ್ಕೆ

“ಆತ ಬಸ್‌ಗೆ ಅಡ್ಡಬಂದದ್ದನ್ನು ಗಮನಿಸಿದ ಚಾಲಕ ತಕ್ಷಣವೇ ಬ್ರೇಕ್ ಹಾಕಿ ಬಸ್‌ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೂ, ಪಾದಚಾರಿ ಬಸ್‌ನ ಎಡ ಮಧ್ಯೆ ಭಾಗದಲ್ಲಿ ಬಂದ ಕಾರಣ, ಬಸ್‌ನ ಹಿಂದಿನ ಚಕ್ರ ಪಾದಚಾರಿಯ ಎಡಗೈಗೆ ಮತ್ತು ಎಡಗಾಲಿಗೆ ತಾಗಿದೆ. ತೀವ್ರ ಗಾಯವಾಗಿದ್ದ ಆತನನ್ನು, ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್‌ 14ರ ಮಧ್ಯರಾತ್ರಿ 12.30ಕ್ಕೆ ಸಾವನ್ನಪ್ಪಿದ್ದಾರೆ” ಎಂದು ಹೇಳಿದೆ.

ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಸ್ ಚಾಲಕ ಶಿವಕುಮಾರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...