ಬೆಂಗಳೂರು | ಬಸ್​ನಲ್ಲಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಮುಂದಾದ ಬಿಎಂಟಿಸಿ ಅಧಿಕಾರಿಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಇತ್ತೀಚೆಗೆ 12 ವರ್ಷದ ಬಾಲಕ ತನ್ನ ಪೋಷಕರಿಗೆ ಮಾಹಿತಿ ನೀಡದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ ಮೂಲಕ ಪ್ರಯಾಣ ಮಾಡಿ ನಾಪತ್ತೆಯಾಗಿದ್ದನು. ಈತನನ್ನು ಹೈದರಾಬಾದ್​ನಲ್ಲಿ ಪತ್ತೆಹಚ್ಚಿ ಬೆಂಗಳೂರಿಗೆ ಕರೆತರಲಾಗಿತ್ತು. ಇದೀಗ, ಎಚ್ಚೆತ್ತ ಬಿಎಂಟಿಸಿ ಅಧಿಕಾರಿಗಳು ಬಸ್‌ನಲ್ಲಿ ಸಂಚರಿಸುವ ಅಪ್ರಾಪ್ತರ ಮೇಲೆ ನಿಗಾ ಇಡಲು ಮುಂದಾಗಿದ್ದಾರೆ.

- Advertisement -

ಈ ಪ್ರಕರಣದ ನಂತರ ಬಿಎಂಟಿಸಿ ಬಸ್‌ಗಳಲ್ಲಿ ಅಪ್ರಾಪ್ತ ಮಕ್ಕಳು ಅನುಮಾನಾಸ್ಪದವಾಗಿ ಪ್ರಯಾಣಿಸುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯವು ಬಿಎಂಟಿಸಿಗೆ ಸೂಚನೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಒಂಟಿಯಾಗಿ ಸಂಚರಿಸುವ ಅಪ್ರಾಪ್ತರ ಮೇಲೆ ನಿಗಾ ಇರಿಸಲು ಬಿಎಂಟಿಸಿ ಅಧಿಕಾರಿಗಳು ಮುಂದಾಗಿದ್ದಾರೆ. ಅನುಮಾನಾಸ್ಪದ ಓಡಾಟ ಕಂಡು ಬಂದರೆ ಮಕ್ಕಳ ಸಹಾಯವಾಣಿಗೆ ತಿಳಿಸುವಂತೆ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

“ತಮ್ಮ ಚಾಲಕ ಮತ್ತು ನಿರ್ವಾಹಕರಿಗೆ ಕೆಲವೊಂದು ಸೂಚನೆ ನೀಡಿದ್ದಾರೆ. ಅದರಂತೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಅಪ್ರಾಪ್ತ ಮಕ್ಕಳ ಮೇಲೆ ನಿಗಾವಹಿಸಬೇಕು. ಶಾಲಾ ಸಮವಸ್ತ್ರದಲ್ಲಿರುವ ಮಕ್ಕಳನ್ನ ಹೊರತು ಪಡಿಸಿ ಬಸ್​ಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿರುವ ಮಕ್ಕಳ ಮೇಲೆ ಹೆಚ್ಚಿನ ನಿಗಾ ಇರಿಸಬೇಕು” ಎಂದು ಹೇಳಿದ್ದಾರೆ.

“ಮಕ್ಕಳ ಹಾವ-ಭಾವದಲ್ಲಿ ಗೊಂದಲಗಳಿದ್ದಲ್ಲಿ ಅಥವಾ ಅನುಮಾನಾಸ್ಪದವಾಗಿ ಪ್ರಯಾಣಿಸುತ್ತಿರುವುದು ಕಂಡುಬಂದಲ್ಲಿ ಅಂತಹ ಮಕ್ಕಳನ್ನ ಗುರುತಿಸಿ ಅವರ ಬಳಿ ಮಾತನಾಡಿ ಪೋಷಕರ ಬಗ್ಗೆ ಮಾಹಿತಿಯನ್ನ ಪಡೆಯಬೇಕು. ಮಕ್ಕಳು ಗೊಂದಲದ ಉತ್ತರವನ್ನ ನೀಡಿದಲ್ಲಿ, ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಬೇಕು. ಹತ್ತಿರದ ಪೊಲೀಸ್ ಠಾಣೆಗೆ ಅಂತಹ ಮಕ್ಕಳ ಕರೆದೊಯ್ಯಬೇಕು” ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನದ ಧ್ಯೇಯವಾಕ್ಯ | ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’

ಇತ್ತೀಚೆಗೆ ವೈಟ್‌ಫೀಲ್ಡ್‌ನಲ್ಲಿ 12 ವರ್ಷದ ಬಾಲಕ ಪೋಷಕರಿಗೆ ತಿಳಿಸದೆ ಬಿಎಂಟಿಸಿ ಬಸ್‌ ಮೂಲಕ ಪ್ರಯಾಣಿಸಿ ನಾಪತ್ತೆಯಾಗಿದ್ದನು. ಈ ಕುರಿತಂತೆ ಬಾಲಕನ ಪೋಷಕರು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗೆ ಮಾಹಿತಿ ನೀಡಿದ್ದರು. ನಂತರ ಮುಖ್ಯಮಂತ್ರಿಗಳ ಕಾರ್ಯಾಲಯದ ಅಧಿಕಾರಿಗಳು ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ಬಾಲಕ ಹೈದರಾಬಾದ್‌ನಲ್ಲಿ ಇರುವುದನ್ನು ಪತ್ತೆ ಮಾಡಿ ವಾಪಸ್ ಕರೆತಂದಿದ್ದರು. ಈ ಪ್ರಕರಣದ ನಂತರ ಬಿಎಂಟಿಸಿ ಬಸ್‌ಗಳಲ್ಲಿ ಅಪ್ರಾಪ್ತ ಮಕ್ಕಳು ಅನುಮಾನಾಸ್ಪದವಾಗಿ ಪ್ರಯಾಣಿಸುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯವು ಬಿಎಂಟಿಸಿಗೆ ಸೂಚನೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...