ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

Date:

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್‌ ವಿತರಣೆ ಮಾಡುತ್ತಿದ್ದು, ಮೇ 29ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕರಿಸಲು ಪ್ರಾರಂಭಿಸಿದೆ. ಜೂನ್ 1ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆ ಮೂಲಕ ತಿಳಿಸಿದೆ.

ಬಸ್ ಪಾಸ್​​​ಗೆ ಅರ್ಜಿಗಳನ್ನು https://sevasindhu.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

2024-25ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸ್‌ನ ಆನ್‌ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸ್‌ಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿದ್ಯಾರ್ಥಿ ಪಾಸ್‌ಗಳನ್ನು ಬೆಳಿಗ್ಗೆ 8 ಗಂಟೆಯಿಂದ ಸಂಜೆ 6.30 ಗಂಟೆಯವರೆಗೆ ವಾರದ ಎಲ್ಲ ದಿನಗಳಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬಿಎಂಟಿಸಿ ಸಂಸ್ಥೆಯ ಕೆಂಪೇಗೌಡ ಬಸ್‌ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ, ಕರಾರಸಾ ನಿಗಮದ ಆನೇಕಲ್ ಬಸ್ ನಿಲ್ದಾಣ ವಿತರಿಸಲಾಗುವುದು ಎಂದು ಹೇಳಿದೆ.

ಮುಂದುವರೆದು, ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಅದರಂತೆ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದು ಎಂದಿದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಾಲ್‌ಸೆಂಟರ್‌ ಸಂಖ್ಯೆ – 08022483777ಗೆ ಸಂಪರ್ಕಿಸಬಹುದಾಗಿದೆ ಹಾಗೂ ಸಂಸ್ಥೆಯ ವೆಬ್‌ಸೈಟ್‌ ಮೂಲಕವೂ ಮಾಹಿತಿ ಪಡೆಯಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಯುವತಿಯರ ಫೋಟೋ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ

ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸುವವರು ರಾಜ್ಯದಲ್ಲಿ ಶಾಶ್ವತ ನಿವಾಸವನ್ನು ಹೊಂದಿರಬೇಕು. ಇತರ ಪರ್ಯಾಯಗಳ ಜತೆಗೆ ವಿದ್ಯಾರ್ಥಿಯು ಪದವಿ, ತಾಂತ್ರಿಕ, ವೃತ್ತಿಪರ, ವೈದ್ಯಕೀಯ ಅಥವಾ ಡಾಕ್ಟರೇಟ್ ಕೋರ್ಸ್‌ಗಳಿಗೆ ದಾಖಲಾಗಬೇಕು ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಸಲ್ಲಿಸುವಾಗ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಅರ್ಜಿದಾರರ ಆಧಾರ್ ಕಾರ್ಡ್, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಹಾಗೂ ಮೊಬೈಲ್ ಸಂಖ್ಯೆ ನೀಡಬೇಕಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....