ಬೆಂಗಳೂರು | ಮತ್ತೊಂದು ವಿದ್ಯಾಸಂಸ್ಥೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ!

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಸಂಸ್ಥೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬರುವುದು ಮುಂದುವರೆದಿದೆ. ಇದೀಗ ಮತ್ತೆ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

[email protected] ಎಂಬ ಇ-ಮೇಲ್ ಮೂಲಕ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಸದ್ಯ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ.

ನಗರದ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಯ ಒಳಗೆ ಬಾಂಬ್ ಇಟ್ಟಿದ್ದೇವೆ. ಬೆಳಗ್ಗೆ 10.20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಇ-ಮೇಲ್‌ನಲ್ಲಿ ಬೆದರಿಕೆ ಸಂದೇಶ ಕಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಾಲಾ ಆಡಳಿತ ಮಂಡಳಿ ಮೇಲ್ ಬಂದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು, ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಹೇಳಿದ್ದಾರೆ.

ಸದ್ಯ ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆಗಳು

2023ರ ಡಿಸೆಂಬರ್​ನಲ್ಲಿ ಇದೇ ರೀತಿ ಬೆಂಗಳೂರಿನ 60 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶವನ್ನು ಕೆಲ ಕಿಡಿಗೇಡಿಗಳು ಕಳಿಸಿ ಭಯದ ವಾತಾವರಣ ಸೃಷ್ಟಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್ ಢಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು; ಚಾಲಕನ ಬಂಧನ

ಇ ಮೇಲ್‌ನಲ್ಲಿ ಶಾಲಾ ಕ್ರೀಡಾಂಗಣ, ಆವರಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಬರೆಯಲಾಗಿತ್ತು. ಇದು ಭಾರೀ ಸುದ್ದಿ ಮಾಡಿತ್ತು. ಇದೀಗ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಇಮೇಲ್ ಮೂಲಕ ಬೆದರಿಕೆಯೊಡ್ಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಸರ್ಕಾರಕ್ಕೆ ಪ್ರತಿಯಾಗಿ ಅಧಿವೇಶನದಲ್ಲಿ ನಿರ್ಣಯ ಮಂಡಿಸಿದ ಬಿಜೆಪಿ

ತೆರಿಗೆ ಅನ್ಯಾಯ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಖಂಡನಾ...

ಇಂಡಿಯಾ ಒಕ್ಕೂಟಕ್ಕೆ ಹೆದರಿ ಅರವಿಂದ್ ಕೇಜ್ರಿವಾಲ್‌ ಬಂಧಿಸಲು ಕೇಂದ್ರದಿಂದ ಸಂಚು: ಮೋಹನ್ ದಾಸರಿ

"ಇಂಡಿಯಾ ಒಕ್ಕೂಟದಲ್ಲಿ ಎಎಪಿ-ಕಾಂಗ್ರೆಸ್ ನಡುವೆ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ...

ಮಂಡ್ಯ | ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ: ಸುಮಲತಾ ಅಂಬರೀಶ್

ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...