ಬೆಂಗಳೂರು | ಮೂರು ‘ಫೈವ್ ಸ್ಟಾರ್’ ಹೋಟೆಲ್‍ಗಳಿಗೆ ಬಾಂಬ್ ಬೆದರಿಕೆ; ಹೆಚ್ಚುತ್ತಿರುವ ಪ್ರಕರಣಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಇಮೇಲ್ ಬರುವುದು ಮುಂದುವರೆದಿದ್ದು, ಮತ್ತೆ ನಗರದ ಮೂರು ‘ಫೈವ್ ಸ್ಟಾರ್’ ಹೋಟೆಲ್​ಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಸಂದೇಶ ಬಂದಿದೆ ಎಂದು ವರದಿಯಾಗಿದೆ.

- Advertisement -

ಎಲೆಕ್ಟ್ರಾನಿಕ್ ಸಿಟಿ ಬಳಿಯ ಒಟೇರಾ ಹೋಟೆಲ್ ಸೇರಿ ಮೂರು ಹೋಟೆಲ್‌ಗಳಿಗೆ ಮೇಲ್ ಮೂಲಕ ಸಂದೇಶ ಬಂದಿದ್ದು, ಗುರುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಇಮೇಲ್‌ ಬಂದಿದ್ದು, ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲನೆ ಮಾಡಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬೆದರಿಕೆ ಇ-ಮೇಲ್ ಬರುತ್ತಿದ್ದಂತೆ ಹೋಟೆಲ್ ಮಾಲೀಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಾಂಬ್ ಸ್ಕ್ಯಾಡ್‍ಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿವೆ.

ಒಟೇರಾ ಹೋಟೆಲ್‌ಗೆ ಬಾಂಬ್ ಸ್ಕ್ವಾಡ್ ಮತ್ತು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಇದೊಂದು ಹುಸಿಬಾಂಬ್‌ ಬೆದರಿಕೆ ಅನ್ನೋದು ಬಯಲಾಗಿದೆ.

ಈ ಹಿಂದೆ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆಯ ಇಮೇಲ್‌ ಕಳುಹಿಸಲಾಗಿತ್ತು. ಈ ವೇಳೆಯೂ ಗಾಬರಿಗೊಂಡಿದ್ದ ಶಾಲಾ ಆಡಳಿತ ಮಂಡಳಿಗಳು ಮಕ್ಕಳನ್ನು ಮನೆಗೆ ಕಳುಹಿಸಿದ್ದವು. ಇತ್ತ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಬಂದು ಪರಿಶೀಲನೆ ನಡೆಸಿದಾಗ ಹುಸಿಬಾಂಬ್‌ ಕರೆ ಎಂದು ಬಯಲಾಗಿತ್ತು.

ಮೇ 13ರಂದು ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಅದರ ಮರುದಿನವೇ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಗ್ಗಲಿಪುರದ ಕನಕಪುರ ರಸ್ತೆ ಸೋಮನಹಳ್ಳಿ ಬಳಿಯ ಈಡಿಫೈ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ಪರಿಶೀಲನೆಯ ನಂತರ ಈ ಎರಡೂ ಬೆದರಿಕೆ ಸಂದೇಶಗಳು ಹುಸಿ ಎಂಬುದು ತಿಳಿದುಬಂದಿತ್ತು.

ಕಳೆದ ತಿಂಗಳು ಜಾಲಹಳ್ಳಿ ಠಾಣೆ ವ್ಯಾಪ್ತಿಯ ಎಚ್‌ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದ್ದು ಆತಂಕಕ್ಕೆ ಕಾರಣವಾಗಿತ್ತು. ನಂತರ ಅದು ಹುಸಿ ಬೆದರಿಕೆ ಎಂಬುದು ತಿಳಿದುಬಂದಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಡಬ್ಲೂಎಸ್‌ಎಸ್‌ಬಿ ಪೈಪ್‌ಲೈನ್ ಕಾಮಗಾರಿ; ಎಲ್ಲೆಲ್ಲಿ ಸಂಚಾರ ನಿರ್ಬಂಧ?

ನಾಲ್ಕು ತಿಂಗಳ ಅವಧಿಯಲ್ಲಿ ನಗರದ ನೂರಾರು ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ 19 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಮೇ 13 ಮತ್ತು 14 ರಂದು ಆರು ಆಸ್ಪತ್ರೆಗಳು ಮತ್ತು ಎಂಟು ಶಾಲೆಗಳಿಗೆ ಬೆದರಿಕೆ ಕರೆಗಳು ಬಂದಿವೆ. ಆದರೂ, ಯಾವುದೇ ಪ್ರಕರಣಗಳಲ್ಲಿ ಇದುವರೆಗೆ ಯಾವುದೇ ಶಂಕಿತರನ್ನು ಗುರುತಿಸಲಾಗಿಲ್ಲ.

ದೇಶದಾದ್ಯಂತ ಹುಸಿ ಬಾಂಬ್ ದಾಳಿ ಬೆದರಿಕೆ ಸಂದೇಶಗಳು ಕಳೆದ ಕೆಲವು ತಿಂಗಳುಗಳಲ್ಲಿ ವಿಪರೀತ ಹೆಚ್ಚಾಗಿದೆ. ಇದು ಪೊಲೀಸರನ್ನು ಹಾಗೂ ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...