ಸುಸ್ಥಿರ ನಗರಗಳ ಜಾಗತಿಕ ಸ್ಪರ್ಧೆಯಲ್ಲಿ ಬೆಂಗಳೂರು ಆಯ್ಕೆ

Date:

Advertisements

“ಟೊಯೋಟಾ ಮೊಬಿಲಿಟಿ ಫೌಂಡೇಶನ್ ಜಾಗತಿಕವಾಗಿ ನಡೆಸಿದ ಸುಸ್ಥಿರ ನಗರಗಳ ಸ್ಪರ್ಧೆಯಲ್ಲಿ ಬೆಂಗಳೂರು ಆಯ್ಕೆಯಾಗಿರುವುದು ನಮಗೆಲ್ಲ ಹೆಮ್ಮೆ ತರಿಸಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಬಿಎಂಪಿ, “ವಿಶ್ವದ  46 ನಾನಾ ದೇಶಗಳ 150 ನಗರಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಅದರಲ್ಲಿ ಬೆಂಗಳೂರು ಸೇರಿದಂತೆ 10 ನಗರಗಳನ್ನು ಈ ಸುಸ್ಥಿರ ನಗರಗಳ ಸ್ಪರ್ಧೆಯಲ್ಲಿ ಆಯ್ಕೆ ಮಾಡಲಾಗಿದೆ” ಎಂದು ಹೇಳಿದೆ.

“ಸಂಚಾರ ದಟ್ಟಣೆ ನಿರ್ವಹಣೆ, ಮೂಲಭೂತ ಸೌಕರ್ಯಗಳ ಆಧುನೀಕರಣ, ಅಪಘಾತಗಳ ತಡೆಗಟ್ಟುವ ಸಲುವಾಗಿ ಬ್ರ್ಯಾಂಡ್ ಬೆಂಗಳೂರು, ಸುಗಮ ಸಂಚಾರ ಬೆಂಗಳೂರು ವರದಿಯಂತೆ ಬೆಂಗಳೂರಿನ ಸಂಚಾರ ವ್ಯವಸ್ಥೆಯ ಆಧುನೀಕರಣಕ್ಕೆ ಟೊಯೋಟಾ ಮೊಬಿಲಿಟಿ ಫೌಂಡೇಶನ್ ಮುಂದಿನ 5 ವರ್ಷಗಳವರೆಗೆ ಸಹಾಯ ಮಾಡಲಿದೆ” ಎಂದು ಮಾಹಿತಿ ನೀಡಿದೆ.

Advertisements

“ಪಾದಚಾರಿಗಳಿಗೆ, ಸೈಕಲ್ ಬಳಕೆದಾರರಿಗೆ ಸುರಕ್ಷತೆ ಒದಗಿಸುವುದು ಮತ್ತು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಬಳಸಿಕೊಳ್ಳುವ ಮೂಲಕ ಸುಗಮ ಸಂಚಾರಕ್ಕೆ ಹೊಸ ವ್ಯವಸ್ಥೆ ಮಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರೆಷರ್ ಕುಕ್ಕರ್‌ನಲ್ಲಿ ಡ್ರಗ್ಸ್‌ ತಯಾರು ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

ಸ್ಪರ್ಧೆಯಲ್ಲಿ ಆಯ್ಕೆಗೊಂಡ 10 ನಗರಗಳು

  • ಡೆಟ್ರಾಯಿಟ್, ಯುನೈಟೆಡ್ ಸ್ಟೇಟ್ಸ್
  • ಫೋರ್ಟಲೆಜಾ, ಬ್ರೆಜಿಲ್
  • ಮೆಡೆಲಿನ್, ಕೊಲಂಬಿಯಾ
  • ಮೆಕ್ಸಿಕೋ ಸಿಟಿ, ಮೆಕ್ಸಿಕೋ
  • ನ್ಯೂ ಓರ್ಲಿಯನ್ಸ್, ಯುನೈಟೆಡ್ ಸ್ಟೇಟ್ಸ್
  • ಸೆಬೆರಾಂಗ್ ಪೆರೈ, ಮಲೇಷ್ಯಾ
  • ವಾರಣಾಸಿ, ಭಾರತ
  • ವೆನಿಸ್, ಇಟಲಿ
  • ಯಾರ್ಕ್, ಯುನೈಟೆಡ್ ಕಿಂಗ್ಡಮ್
  • ಬೆಂಗಳೂರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X