ಬೆಂಗಳೂರು | 3800ಕ್ಕೂ ಹೆಚ್ಚು ಅನಧಿಕೃತ ಫ್ಲೆಕ್ಸ್‌ಗಳ ತೆರವು; 48 ಎಫ್‌ಐಆರ್ ದಾಖಲು

Date:

ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು‌ ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಾಲಿಕೆ ಹೇಳಿದೆ.

- Advertisement -

ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಅದರಂತೆ ಮುಖ್ಯ ಆಯುಕ್ತರು ಸೂಚನೆ ಮೇರೆಗೆ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಎಲ್ಲ 8 ವಲಯಗಳ ಅಧಿಕಾರಿಗಳ ಜೊತೆ ಪ್ರತಿನಿತ್ಯ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ ಸೂಚನೆ ನೀಡುವ ಜೊತೆಗೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕುವವರ ಮೇಲೆ ಎಫ್‌ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಗರದಾದ್ಯಂತ ಜೂನ್ 1ರಿಂದ ನಿನ್ನೆಯವರೆಗೆ 3,843 ಫ್ಲೆಕ್ಸ್, ಬ್ಯಾನರ್, ಎಲ್‌ಇಡಿ ಹಾಗೂ ಹೋರ್ಡಿಂಗ್ಸ್‌ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 48 ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ₹75,000 ದಂಡ ವಿಧಿಸಲಾಗಿದೆ ಎಂದು ಹೇಳಿದೆ.

ಅನಧಿಕೃತ ಜಾಹೀರಾತು ಅಳವಡಿಸದಿರಲು ಕೋರಿಕೆ

ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018’ರಲ್ಲಿ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು, ಎಲ್‌ಇಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು, ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಯಾರೊಬ್ಬರೂ ಕೂಡಾ ಅನಧಿಕೃತವಾಗಿ ಜಾಹೀರಾತು ಅಳವಡಿಸದಿರಲು ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಮತ್ತೆ 5 ದಿನ ಪೊಲೀಸ್ ಕಸ್ಟಡಿ ವಿಸ್ತರಣೆ

ಅನಧಿಕೃತ ಜಾಹೀರಾತುಗಳಿಂದ ನಗರದ ಸೌಂದರ್ಯ ಹಾಳು

ನಗರದ ರಸ್ತೆ ಬದಿ, ಪಾದಚಾರಿ ಮಾರ್ಗ, ಮೇಲುಸೇತುವೆ ಸೇರಿದಂತೆ ಇನ್ನಿತರೆ ಕಡೆ ಅನಧಿಕೃತವಾಗಿ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದರಿಂದ ನಾಗರೀಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದರ ಜತೆಗೆ ನಗರದ ಸೌಂದರ್ಯ ಹಾಳಾಗುತ್ತಿದೆ. ಅಲ್ಲದೆ ಪರಿಸರಕ್ಕೆ ಮಾರಕವಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳ ಕುರಿತು ನಾಗರಿಕರು ಪಾಲಿಕೆ ಸಹಾಯವಾಣಿ ಸಂಖ್ಯೆಯಾದ 1533 ಅಥವಾ ಜಾಹೀರಾತು ವಿಭಾಗದ ವ್ಯಾಟ್ಸಪ್ ಸಂಖ್ಯೆ 9480683939ಗೆ ಛಾಯಾಚಿತ್ರ ಅಥವಾ ವೀಡಿಯೋ ಮಾಡಿ ವಿಳಾಸ ಸಹಿತ ಕಳುಹಿಸಿದಲ್ಲಿ ಪಾಲಿಕೆ ವತಿಯಿಂದ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...