ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

Date:

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಹಾಗೂ ಸಮರ್ಪಕವಾಗಿ ನೀರು ಪೂರೈಸಲು ಮಂಡಳಿ ಬದ್ಧವಾಗಿದೆ” ಎಂದು ಬೆಂಗಳೂರು ಜಲ ಮಂಡಳಿ‌ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

ಔಟರ್ ರಿಂಗ್ ರೋಡ್ ಕಂಪನೀಸ್ ಅಸೊಸಿಯೇಶನ್ (ಆರ್ಕಾ) ಪದಾಧಿಕಾರಿಗಳೊಂದಿಗೆ ಗುರುವಾರ ವೇಬಿನಾರ್ ಮೂಲಕ ಸಭೆ ನಡೆಸಿದ ಅವರು, “ಬೆಂಗಳೂರಿನಲ್ಲಿ ನೀರಿನ ಕೊರತೆಯನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿದೆ. ಇದೆ ರೀತಿ ಐಟಿ, ಬಿಟಿ ಕಂಪನಿಗಳಿಗೂ ಸಮರ್ಪಕವಾಗಿ ನೀರು ಪೂರೈಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.

“ಕಾವೇರಿ 5ನೇ ಹಂತ ಪೂರ್ಣಗೊಂಡರೆ, ನಗರಕ್ಕೆ ಪ್ರತಿದಿನ ಹೆಚ್ಚುವರಿ 775 ಎಮ್‌ಎಲ್‌ಡಿ ನೀರು ಸಿಗಲಿದೆ. ಇದರಿಂದ ನೀರಿನ ಕೊರತೆ ಕಡಿಮೆಯಾಗಲಿದೆ. ಅಂತರ್ಜಲ ಕುಸಿತದಿಂದ ಕುಡಿಯುವ ನೀರಿನ ಕೊರತೆಯಾಗಿದೆ. ಈ ಹಂತದಲ್ಲಿ ಅನಾವಶ್ಯಕವಾಗಿ ನೀರು ಪೋಲಾಗದಂತೆ ನೋಡಿಕೊಳ್ಳುವುದು ಪ್ರಮುಖವಾಗಿದೆ. ಅನಾವಶ್ಯಕವಾಗಿ ನೀರನ್ನು ಪೋಲು ಮಾಡುವವರಿಗೆ ದಂಡ ವಿಧಿಸುವುದರಿಂದ ನೀರಿನ ಮೌಲ್ಯದ ಬಗ್ಗೆ ಅರಿವಾಗುತ್ತದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಿತವಾಗಿ ನೀರನ್ನು ಬಳಸುವಂತೆ ಕಂಪನಿಯ ಮೂಲಕ ನೌಕರರಲ್ಲಿ ಜಾಗೃತಿ ಮೂಡಿಸಬೇಕು. ನೀರಿನ ಸದ್ಬಳಕೆ ಹಾಗೂ ಅದರ ಸೂಕ್ತ ಬಳಕೆಗಾಗಿ ಜಲಮಂಡಳಿ ವತಿಯಿಂದ ಮೂರು ಸೂತ್ರಗಳ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ. ನೀರು ಸಂರಕ್ಷಣೆ, ಸಂಸ್ಕರಿಸಿದ ನೀರು ಬಳಕೆ, ಮಳೆ ನೀರು ಸಂರಕ್ಷಣೆ ಹಾಗೂ ಮರುಪುರಣದ ಬಗ್ಗೆ ಜಾಗೃತಿ ಮೂಡಿಸಿ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಮಾಷೆ ಮಾಡಲು ಗುದನಾಳಕ್ಕೆ ‘ಏರ್‌ಪ್ರೆಶರ್‌’ನಿಂದ ಗಾಳಿ ಬಿಟ್ಟ ಸ್ನೇಹಿತ: ಕರುಳು ಛಿದ್ರವಾಗಿ ಯುವಕ ಸಾವು

“ಅಗತ್ಯವಿರುವ ಕಂಪನಿಗಳು ಹಾಗೂ ಸಂಸ್ಥೆಗಳಿಗೆ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲು ಜಲಮಂಡಳಿ ಸಿದ್ಧವಿದೆ. ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಕಟ್ಟಡಗಳು, ಕೈಗಾರಿಕಾ ಪ್ರದೇಶಗಳು, ರೆಸ್ಟೋರೆಂಟ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ನೀರು ಪೋಲಾಗುವುದನ್ನ ತಡೆಯಲು ಏರಿಯೇಟರ್‌ ಹಾಗೂ ಫ್ಲೋ ಕಂಟ್ರೋಲರ್‌ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಮಂಡಳಿ ಕ್ರಮವಹಿಸಲಾಗುತ್ತಿದೆ. ಇದಕ್ಕೆ ತಾವು ಕೂಡ ಸಾಥ್ ನೀಡಬೇಕು” ಎಂದು ವಿವರಿಸಿದ್ದಾರೆ.

“ನೀರಿನ ಸಮಸ್ಯೆಗೆ ಪಂಚ ಸೂತ್ರ ಸಿದ್ಧಗೊಳಿಸಿದ್ದು, ಕಂಪನಿಗಳು ಈ ಐದು ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಗ್ರೀನ್ ಸ್ಟಾರ್ ಚಾಲೆಂಜ್‌ಗೆ ಮುಂದಾಗಬೇಕು” ಎಂದು ಕರೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...