ಸೆಲ್ಫಿ ಪ್ರಿಯರಿಗೆ ನಮ್ಮ ಮೆಟ್ರೋದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರಿಗಾಗಿ ರೈಲು ನಿಲ್ದಾಣಗಳಲ್ಲಿ ನೂತನ ಸೆಲ್ಫಿ ಪಾಯಿಂಟ್ ಓಪನ್ ಆಗಿದೆ.
ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಸೆಲ್ಫಿ ಪಾಯಿಂಟ್ಗಳ ನಿರ್ಮಾಣ ಮಾಡಿದ್ದು, ಗೋಡೆಯ ಮೇಲೆ ಹಸಿರು ಹೊದಿಕೆಯಂತೆ ಕಾಣುವ ಬೋರ್ಡ್ ರೀತಿಯ ಪರದೆ ಹಾಕಿ, ಅದರ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸೆಲ್ಫಿ ಪಾಯಿಂಟ್ಗಾಗಿ ಹೆಚ್ಚು ಸ್ಥಳ ಮೀಸಲು ಇಡಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಈ ಕ್ರಮ ಜಾರಿಗೆ ತಂದಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ.