ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ಬಳಿಯ ಬನ್ನೇರುಘಟ್ಟದ ಸುದರ್ಶನ್ ಲೇಔಟ್ನಲ್ಲಿ ನಡೆದಿದೆ.
ರಾಜೇಂದ್ರ ಎಂಬುವವರಿಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಜೇಂದ್ರ ಅವರು ಎಂದಿನಂತೆ ನ.3ರಂದು ಬೆಳಗ್ಗೆ 5 ಗಂಟೆಗೆ ಸಿಲಿಂಡರ್ ಆನ್ ಮಾಡಲು ಅಡುಗೆ ಮನೆಗೆ ಹೋಗಿದ್ದರು. ಈ ವೇಳೆ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದಿಂದಾಗಿ ರಾಜೇಂದ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಸ್ಪೋಟ ಸಂಭವಿಸಿದಾಗ ಮನೆಯಲ್ಲಿ ರಾಜೇಂದ್ರ ಹಾಗೂ ಅವರ ಮಗಳು ಇದ್ದರು ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿಷ್ಠಿತ ಐಸ್ ಕ್ರೀಂ ಕಂಪನಿ ಮಾಲೀಕರ ಸೊಸೆ ಆತ್ಮಹತ್ಯೆ ಪ್ರಕರಣ; ವಾರದ ಬಳಿಕ ಹೊರಬಿದ್ದ ಸತ್ಯ
ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮೂರ್ನಾಲ್ಕು ಮನೆಗಳಿಗೂ ಹಾನಿಯಾಗಿದೆ. ಅಕ್ಕಪಕ್ಕ ಮನೆಯ ಬಾಗಿಲು, ಡೋರ್ ಹಾಗೂ ಮನೆಯಲ್ಲಿದ್ದ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರು ಹಾಗೂ ಬೈಕ್ಗಳಿಗೂ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ, ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.