ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

Date:

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ ಜೋರಾಗಿದೆ. ಇತ್ತೀಚೆಗೆ, ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಿದ ನಂತರ ಅವರ ಮಾನಸ ಪುತ್ರ ನಟ ದರ್ಶನ್ ಅವರ ನಡೆ ಆಶ್ಚರ್ಯಕರವಾಗಿದೆ.

- Advertisement -

ಹೌದು, ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಿದ ನಂತರ ದರ್ಶನ್ ಅವರು ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಪರವಾಗಿ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದ್ದರು. ಈ ವೇಳೆ, ನಾನು ವ್ಯಕ್ತಿಯ ಪರವಾಗಿ ಪ್ರಚಾರಕ್ಕೆ ಬರುತ್ತೇನೆ. ಬದಲಾಗಿ ಯಾವುದೇ ಪಕ್ಷದ ಪರವಾಗಿ ಇಲ್ಲ ಎಂದಿದ್ದರು. ಇದೀಗ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರವಾಗಿ ನಟ ದರ್ಶನ್ ಶನಿವಾರ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ದೇಶದ ಗಮನ ಸೆಳೆದಿದೆ. 15 ವರ್ಷಗಳ ಹಿಂದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವು ರಚನೆಯಾದ ಬಳಿಕ ನಡೆಯುತ್ತಿರುವ 5ನೇ ಲೋಕಸಭಾ ಚುನಾವಣೆ ಇದಾಗಿದೆ. ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ಕಣದಲ್ಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹಾಲಿ ಸಂಸದ ಡಿ.ಕೆ.ಸುರೇಶ್‌ ಈ ಬಾರಿಯೂ ಗೆದ್ದು ಬೀಗುವ ಹುಮ್ಮಸ್ಸಿನಲ್ಲಿದ್ದಾರೆ.

ಇಂದಿನ ರೋಡ್‌ ಶೋ ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಯಶವಂತರ ಪುರ ಮಾರ್ಕೆಟ್, ಲಗ್ಗೆರೆ ಸರ್ಕಲ್, ಕೊಟ್ಟಿಗೆ ಪಾಳ್ಯ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉತ್ತರಹಳ್ಳಿ, ವೀವರ್ಸ್ ಕಾಲೋನಿ, ಗೊಟ್ಟಿಗೆರೆ ವಾರ್ಡ್‌ಗಳಲ್ಲಿ ನಡೆಯಲಿದೆ. ನಟ ದರ್ಶನ್ ಈ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ.

ಈಗಾಗಲೇ ಡಿ.ಕೆ.ಸುರೇಶ್ ಅವರು ಪ್ರಚಾರ ಆರಂಭಿಸಿದ್ದಾರೆ. ಶನಿವಾರ ನಟ ದರ್ಶನ್ ಮತಯಾಚನೆಗೆ ಕೈ ಜೋಡಿಸಲಿದ್ದಾರೆ. ಆರ್‌.ಆರ್‌ ನಗರ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಭಾಗಗಳಲ್ಲೇ ನಟ ದರ್ಶನ್ ಪ್ರಚಾರಕ್ಕೆ ಮುಂದಾಗಿದ್ದಾರೆ. ರೋಡ್ ಶೋ ಮೂಲಕ ದರ್ಶನ್ ಮತಯಾಚಿಸಲಿದ್ದಾರೆ. ಸಂಜೆ 4 ಗಂಟೆಗೆ ಯಶವಂತಪುರ ಮಾರ್ಕೆಟ್, 5 ಗಂಟೆಗೆ ಲಗ್ಗೆರೆ ಸರ್ಕಲ್, 6 ಗಂಟೆಗೆ ಕೊಟ್ಟಿಗೆಪಾಳ್ಯದಲ್ಲಿ ದರ್ಶನ್ ಪ್ರಚಾರದ ಭರಾಟೆ ಇರಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಸಂಜೆ 7 ಗಂಟೆಗೆ ಉತ್ತರಹಳ್ಳಿ, 8 ಗಂಟೆ ವೇಳೆಗೆ ವೀವರ್ಸ್ ಕಾಲೋನಿ, ಗೊಟ್ಟಿಗೆರೆ ವಾರ್ಡ್‌ಗಳಲ್ಲಿ ನಟ ದರ್ಶನ್ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕನಕಪುರ, ಕುಣಿಗಲ್, ಆನೇಕಲ್, ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಬೆಂಗಳೂರು ದಕ್ಷಿಣ ಸೇರಿ ಎಂಟು ವಿಧಾನಸಭೆ ಕ್ಷೇತ್ರಗಳಿವೆ. ಸದ್ಯ ಆರ್‌.ಆರ್‌ ನಗರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಈ ಕ್ಷೇತ್ರಗಳು ಲೋಕಸಭೆ ಚುನಾವಣೆಯಲ್ಲಿ ಮಹತ್ವದ ಪಾತ್ರ ವಹಿಸಲಿವೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ನಟ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿದ್ದರು. ಇದೀಗ ಮತ್ತೋರ್ವ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ದರ್ಶನ್ ಮುಂದಾಗಿದ್ದಾರೆ. ಅಮ್ಮನ ಆಜ್ಞೆಯಂತೆ ನಡೆಯುತ್ತೇನೆ ಎಂದಿದ್ದ ನಟ ದರ್ಶನ್ ಅವರ ಈ ನಡೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...