ಬೆಂಗಳೂರು | ತರಕಾರಿಗಳಲ್ಲಿ ಭಾರ ಲೋಹಗಳ ಅಂಶ ಪತ್ತೆ; ಸರ್ಕಾರದ ನಿಷ್ಕಾಳಜಿ ದುರದೃಷ್ಟಕರ ಎಂದ ಕೆಆರ್‌ಎಸ್‌

Date:

Advertisements

ಬೆಂಗಳೂರಿಗೆ ಸರಬರಾಜಾಗುವ ತರಕಾರಿಗಳಲ್ಲಿ ಅಪಾಯಕಾರಿ ಮಟ್ಟದಲ್ಲಿ ಭಾರ ಲೋಹಗಳ ಅಂಶ ಇರುವುದನ್ನು ರಾಜ್ಯ ಸರ್ಕಾರದ ಸಂಸ್ಥೆಯಾದ ಎಂಪ್ರಿ – ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI – Environmental Management and Policy Research Institute) ವತಿಯಿಂದ ಕೈಗೊಂಡಿದ್ದ ಅಧ್ಯಯನದಿಂದ ತಿಳಿದು ಬಂದಿದೆ. ಈ ಬಗ್ಗೆ ಇತ್ತೀಚೆಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಗಂಭೀರ ವಿಚಾರವಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ಹೇಳಿದೆ.

“ದೀರ್ಘ ಕಾಲದಲ್ಲಿ ಜನರ ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುವ ಈ ವಿಚಾರದ ಬಗ್ಗೆ ಸರ್ಕಾರ ಮತ್ತು ಜನಪ್ರತಿನಿಧಿಗಳು ನಿಷ್ಕಾಳಜಿ ತೋರುತ್ತಿರುವುದು ದುರದೃಷ್ಟಕರ. ಆದರೆ, ಈ ಪರಿಸ್ಥಿತಿಗೆ ಕಳೆದ ಎರಡು ದಶಕಗಳ ಕಾಲ ಆಡಳಿತ ನಡೆಸಿರುವ ಸರ್ಕಾರಗಳೇ ನೇರ ಕಾರಣವಾಗಿದ್ದು, ಅವುಗಳನ್ನು ತಕ್ಷಣದಲ್ಲೆ ಸರಿಪಡಿಸಿಕೊಳ್ಳುವ ಕ್ರಮಗಳನ್ನು ಕೈಗೊಳ್ಳಲು ಈಗಿನ ಸರ್ಕಾರ ಮುಂದಾಗದೆ, ಎಲ್ಲವೂ ಸರಿಯಿದೆ ಎಂದು ತಿಪ್ಪೆ ಸಾರಿಸುವ ಕೆಲಸವನ್ನು ಮಾಡಿದೆ” ಎಂದು ಆರೋಪಿಸಿದೆ.

“ಇಲ್ಲಿ ಗಮನಿಸಬೇಕಾದ ಗಂಭೀರ ವಿಚಾರವೆಂದರೆ, ಬೆಂಗಳೂರಿಗೆ ಸರಬರಾಜಾಗುವ ತರಕಾರಿಯಲ್ಲಿ ಬಹುಪಾಲು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಿಂದ ಬರುತ್ತಿದ್ದು, ಈ ಜಿಲ್ಲೆಗಳು ನೀರಾವರಿಯಿಂದ ವಂಚಿತವಾಗಿವೆ. ರಾಮನಗರ ಜಿಲ್ಲೆ ಹೊರತುಪಡಿಸಿ, ಉಳಿದ ಮೂರು ಜಿಲ್ಲೆಗಳಿಗೆ ಕೊಳಚೆ ನೀರು ಸಂಸ್ಕರಿಸಿ, ಅದರಿಂದ ಕೆರೆಗಳನ್ನು ತುಂಬಿಸಲಾಗುತ್ತಿದೆ. ನೀರಾವರಿಯಿಂದ ವಂಚಿತವಾಗಿರುವ ಈ ಜಿಲ್ಲೆಗಳಲ್ಲಿನ ಬಹುಪಾಲು ರೈತರು ಅರೆಬರೆ ಸಂಸ್ಕರಿಸಿದ ಬೆಂಗಳೂರಿನ ಕೊಳಚೆ ನೀರು ಬಳಸಿ ತರಕಾರಿಗಳನ್ನು ಬೆಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದೆ.

Advertisements

“ಎಂಪ್ರಿಯ ಈ ಅಧ್ಯಯನವು 2022ರ ನವೆಂಬರ್‌ನಲ್ಲಿ ಪ್ರಕಟಣೆಯಾಗಿದೆ. ಆದರೆ, ಇದರ ಬಗ್ಗೆ ಸರ್ಕಾರದ ಗಮನವೇ ಇಲ್ಲ, ಗಮನಕ್ಕೆ ಬಂದಿದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೆ, ತನ್ನ ಅರಿವಿಗೆ ಬಂದಿಲ್ಲದಂತೆ ಹೊಣೆಗೇಡಿತನ ತೋರಿಸುತ್ತಿದೆ” ಎಂದು ಆರೋಪಿಸಿದೆ.

“ಈ ಪರಿಸ್ಥಿತಿಗೆ ಕಾರಣವಾಗಿರುವ ಬೆಂಗಳೂರು ಜಲ ಮಂಡಳಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಮೊದಲು ಕ್ರಮ ಕೈಗೊಳ್ಳಬೇಕು. ಜನರ ಆರೋಗ್ಯ ಮತ್ತು ಪರಿಸರವನ್ನು ಕಾಪಾಡುವ ಬದ್ಧತೆಯಿಲ್ಲದ ಸರ್ಕಾರವು 2018ರಲ್ಲಿ ಚುನಾವಣೆಗಳಿಗೆ ಮುನ್ನ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರು ನೀಡಿದ್ದೇವೆ ಎಂದು ಹೇಳಿಕೊಳ್ಳಲು ತರಾತುರಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಿರುವುದು ಕೂಡ ಈ ಪರಿಸ್ಥಿತಿಗೆ ಕಾರಣವಾಗಿದೆ” ಎಂದು ದೂಷಿಸಿದೆ.

“ರಾಜ್ಯ ಸರ್ಕಾರವು, ಬೆಂಗಳೂರಿನ ಕೋರಮಂಗಲ-ಚಲ್ಲಘಟ್ಟ, ಹೆಬ್ಬಾಳ-ನಾಗವಾರ ಕಣಿವೆಯ ಕೊಳಚೆ ನೀರನ್ನು ಅರೆ ಬರೆಯಾಗಿ ಸಂಸ್ಕರಿಸಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸುವ ಕೆಲಸವನ್ನು ಮಾಡುತ್ತಿದೆ. ಮಳೆಯಾಶ್ರಿತ ಬಯಲು ಪ್ರದೇಶದ ಈ ಜಿಲ್ಲೆಗಳ ರೈತರು, ನೀರಾವರಿ ಮತ್ತು ಕಡಿಮೆ ಮಳೆಯಿಂದಾಗಿ ಪಾಲಿಗೆ ಬಂದದ್ದು ಪಂಚಾಮೃತ ಎಂದು ವಿಧಿಯಿಲ್ಲದೆ ಇದೇ ಕೊಳಚೆ ನೀರನ್ನು ಬಳಸಿ ಕೃಷಿಯಲ್ಲಿ ತೊಡಗಿದ್ದಾರೆ” ಎಂದಿದೆ.

ಈ ಸುದ್ದಿ ಓದಿದ್ದೀರಾ? ಅಧಿಕಾರಿ ಪ್ರತಿಮಾ ಹತ್ಯೆ | ನ.15 ರವರೆಗೆ ಆರೋಪಿ ಕಿರಣ್ ಪೊಲೀಸ್‌ ಕಸ್ಟಡಿಗೆ

“ಈ ಎಸ್‌ಟಿಪಿಗಳ ನಿರ್ಮಾಣ ಮತ್ತು ಕಾರ್ಯನಿರ್ವಹಣೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅಕ್ರಮ ಮತ್ತು ಅವ್ಯವಹಾರಗಳ ಬಗ್ಗೆ ತನಿಖೆಯಾಗಬೇಕು. ತೃತೀಯ ಹಂತದ ಸಂಸ್ಕರಣೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು, ತಕ್ಷಣವೇ ಈಗಿನ ಸಂಸ್ಕರಣಾ ಘಟಕಗಳು ಮಾನದಂಡಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ಬಗ್ಗೆ ನಿರಂತರವಾಗಿ ಖಾತ್ರಿ ಮಾಡಿಕೊಳ್ಳಬೇಕು. ಇದು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರಬೇಕು. ಹಾಗೆಯೇ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆ ಅಭಿವೃದ್ಧಿ ಹೆಸರಿನಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆಯಾಗಬೇಕು. ತಕ್ಷಣವೇ ಪಾರದರ್ಶಕ ರೀತಿಯಲ್ಲಿ ಈ ಭಾಗದ ಕೆರೆಗಳ ಹೂಳೆತ್ತುವ ಮತ್ತು ಅಭಿವೃದ್ಧಿಪಡಿಸುವ ಕೆಲಸ ಮಾಡಬೇಕು” ಎಂದು ಕೆ.ಆರ್.ಎಸ್. ಪಕ್ಷ ಆಗ್ರಹಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X