ಬೆಂಗಳೂರು | ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು: ನಿವಾಸಿಗಳು ಆಕ್ರೋಶ

Date:

ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು ಬಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.

- Advertisement -

ಈ ಬಗ್ಗೆ ಧನಂಜಯ ಪದ್ಮನಾಭನಗರ ಎಂಬುವವರು ತಮ್ಮ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಂಡು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಶೋಭಾ ಅರೆನಾ ಅಪಾರ್ಟ್‌ಮೆಂಟ್‌ನಲ್ಲಿ ಕುಡಿಯಲು ನಮಗೆ ಸಿಗುತ್ತಿರುವ ನೀರಿನ ಗುಣಮಟ್ಟವನ್ನು ದಯವಿಟ್ಟು ನೋಡಿ. ದಯಮಾಡಿ ನಮಗೆ ನ್ಯಾಯಾಂಗ ಬಡಾವಣೆ, ತಲಘಟ್ಟಪುರ, ಕನಕಪುರ ಮುಖ್ಯರಸ್ತೆಯಲ್ಲಿ ಕಾವೇರಿ ನೀರು ಕೊಡಿ” ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

“ಇತರ ನಿವಾಸಿಗಳು ತಮ್ಮ ಮನೆಗೆ ಬರುತ್ತಿರುವ ಕಲುಷಿತ ನೀರಿನ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ನಮ್ಮ ಅಪಾರ್ಟ್‌ಮೆಂಟ್ ಶೋಭಾ ಅಖಾಡ, ನ್ಯಾಯಾಂಗ ಬಡಾವಣೆ, ತಲಘಟ್ಟಪುರ, ಕನಕಪುರ ಮುಖ್ಯ ರಸ್ತೆಗೆ ಕಾವೇರಿ ನೀರು ಬೇಕು” ಎಂದಿದ್ದಾರೆ.

ಅಲ್ಲದೇ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಲಮಂಡಳಿ ಮುಖ್ಯಸ್ಥರು, ಬೆಂಗಳೂರು ಪೊಲೀಸ್‌ ಸೇರಿದಂತೆ ಹಲವು ಅಧಿಕಾರಿಗಳನ್ನು ಟ್ಯಾಗ್ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ಫೆಬ್ರುವರಿ 7ರಂದು ಈ ವಿಡಿಯೋ ಶೇರ್ ಮಾಡಲಾಗಿದೆ. ಈ ವಿಡಿಯೋವನ್ನು ಸುಮಾರು 2 ಲಕ್ಷದ 76 ಸಾವಿರ ಜನರು ವಿಕ್ಷಣೆ ಮಾಡಿದ್ದಾರೆ.

ಈ ವಿಡಿಯೋಗೆ ಹಲವು ಜನ ಕಮೆಂಟ್ ಮಾಡಿದ್ದು, “ಇದು ಟ್ಯಾಂಕ್ ಸ್ವಚ್ಛಗೊಳಿಸಿದ ನಂತರದ ನೀರು. ಆದ್ದರಿಂದಲೇ ನೀರಿನ ಬಣ್ಣ ಕಂದು ಬಣ್ಣದಿಂದ ಬಿಳಿ ಬಣ್ಣಕ್ಕೆ ಬದಲಾಗುತ್ತಿತ್ತು. ವೀಡಿಯೊವನ್ನು ಸ್ವಲ್ಪ ಹೆಚ್ಚು ವಿಸ್ತರಿಸಿದ್ದರೆ, ನೀರಿನ ಬಣ್ಣವು ಸ್ಪಷ್ಟವಾಗುತ್ತಿತ್ತು” ಎಂದು ಅರ್ಬನ್ ಪಿಕ್ಸೆಲ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಏಪ್ರಿಲ್ ಬಳಿಕವೇ ಇಂದಿರಾ ಕ್ಯಾಂಟೀನ್‌ನಲ್ಲಿ ‘ಮುದ್ದೆ ಭಾಗ್ಯ’

“ಒಂದು ಕ್ಷಣ, ಅವರು ಮನೆಗೆ ಸಾಂಬಾರ್ ಅನ್ನು ನಲ್ಲಿಯ ಮೂಲಕ ಸರಬರಾಜು ಮಾಡುತ್ತಾರೆ ಎಂದು ನಾನು ಭಾವಿಸಿದೆ. ದುರದೃಷ್ಟಕರ” ಎಂದು ವಿನಯ್ ಎಂಬ ಹೆಸರಿನ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...