ಮಕ್ಕಳನ್ನು ಸುರಕ್ಷಿತವಾಗಿ ಶಾಲೆಯಿಂದ ಮನೆಗೆ, ಮನೆಯಿಂದ ಶಾಲೆಗೆ ತಲುಪಿಸಬೇಕಾದ ಶಾಲಾ ಬಸ್ ಚಾಲಕರು ವಾಹನ ಚಾಲನೆ ಮಾಡುವಾಗ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024 ರ ಅಂಗವಾಗಿ ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ 7ರಿಂದ 9.30ರವರೆಗೆ ಶಾಲಾ ವಾಹನಗಳ ತಪಾಸಣೆ ನಡೆಸಿದ್ದು, ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸುತ್ತಿದ್ದ ಚಾಲಕರು ಸಂಚಾರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದೀಗ ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುತ್ತಿದ್ದವರ ವಿರುದ್ಧ ದೂರು ದಾಖಲಾಗಿದೆ.
Today, a special drive was conducted between 7:00AM and 9:30AM, against school vehicle drivers for “drink and drive” violation. At total of 3414 vehicles were checked and 16 drivers were found driving under the influence of alcohol. Criminal cases have been registered against… pic.twitter.com/w9NHYevkTy
— Joint CP, Traffic, Bengaluru (@Jointcptraffic) January 23, 2024
“ಶಾಲಾ ವಾಹನ ಚಾಲಕರ ವಿರುದ್ಧ ಬೆಳಗ್ಗೆ 7 ರಿಂದ ಬೆಳಿಗ್ಗೆ 9:30ರ ನಡುವೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಒಟ್ಟು 3,414 ವಾಹನ ತಪಾಸಣೆ ನಡೆಸಲಾಗಿದ್ದು, 16 ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ. ಅಂತಹ ಚಾಲಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರ ಡಿಎಲ್ ಅನ್ನು ಅಮಾನತುಗೊಳಿಸಲು ಆರ್‌ಟಿಒಗೆ ಕಳುಹಿಸಲಾಗಿದೆ” ಎಂದು ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಅವರು ಟ್ವೀಟ್ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | 2024-25ನೇ ಸಾಲಿನ ಆಯವ್ಯಯಕ್ಕೆ ಸಾರ್ವಜನಿಕರು ಸಲಹೆ, ಸೂಚನೆ ಸಲ್ಲಿಸಲು ಅವಕಾಶ
ಇತ್ತೀಚೆಗೆ, ಶಿಕ್ಷಣ ಇಲಾಖೆ ಶಾಲಾ ಮಕ್ಕಳನ್ನು ಕರೆತರುವ ಎಲ್ಲ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರವನ್ನು ಶಾಲಾ ಆಡಳಿತ ಮಂಡಳಿಗಳಿಗೆ ಸಲ್ಲಿಸುವುದು ಕಡ್ಡಾಯ ಎಂದು ಹೇಳಿತ್ತು.
ಹಾಗೆಯೇ, ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಮಕ್ಕಳ ಸುರಕ್ಷತೆಯ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮಕ್ಕೆ ಈ ಹಿಂದೆ ಶಿಕ್ಷಣ ಇಲಾಖೆ ಮಕ್ಕಳ ಸುರಕ್ಷತೆ ನಿಟ್ಟಿನಲ್ಲಿ ಹೊಸ ಸುತ್ತೋಲೆ ಹೊರಡಿಸಿತ್ತು.