ಲಾರಿ ಚಾಲಕ ತನ್ನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿ ತನಿಖೆ ಆರಂಭಿಸಿದ ಪೊಲೀಸರಿಗೆ ಪಾಷಾ ಅವರು ಸುಳ್ಳು ದೂರು ನೀಡಿದ್ದಾರೆ ಎಂಬುದು ಗೊತ್ತಾಗಿದೆ. ಇದೀಗ, ಆತನ ವಿರುದ್ಧವೇ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ವಾಟರ್ ಟ್ಯಾಂಕ್ ಲಾರಿ ಚಾಲಕ ಅತಿವೇಗವಾಗಿ ಬರ್ತಿದ್ದನ್ನ ಪ್ರಶ್ನಿಸಿದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷ ಎಲೆಕ್ಟ್ರಾನಿಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ವ್ಯಾಲಂಕೇಣಿ ಬ್ರಿಡ್ಜ್ ಬಳಿ ಘಟನೆ ನಡೆದಿರೋದಾಗಿ ದೂರು ದಾಖಲಿಸಿದ್ದರು. ಪಾಷಾ ಪ್ರಕರಣ ದಾಖಲು ಮಾಡುವ ವೇಳೆ, ರಾಂಗ್ ನಂಬರ್ ಕೊಟ್ಟಿದ್ದಾರೆ.
ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭ ಮಾಡಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಮೇಲೆ ಅನುಮಾನ ಮೂಡಿದೆ. ತನಿಖೆ ಚುರುಕುಗೊಳಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಪಾಷಾ ಕಳ್ಳಾಟ ಬಯಲಾಗಿದೆ. ಪಾಷಾ ತನ್ನ ಬಟ್ಟೆಗಳನ್ನು ತಾನೇ ಹರಿದುಕೊಂಡು ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೀಟರ್ ಬಡ್ಡಿ ದಂಧೆ; ಸೈಕಲ್ ರವಿ ಸಹಚರರ ಬಂಧನ
ಸುಳ್ಳು ಪ್ರಕರಣ ದಾಖಲಿಸಿದ ಆ್ಯಡಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಅಲ್ಲದೇ, ಸುಳ್ಳು ದೂರು ಕೊಟ್ಟ ಹಿನ್ನಲೆ ಆದಂ ಪಾಷಾ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.