ಬೆಂಗಳೂರು | ಎರಡು ಕೈಗಳಿಲ್ಲದ ವ್ಯಕ್ತಿಗೆ ಪಾಸ್‌ಪೋರ್ಟ್ ಪಡೆಯಲು ಫಿಂಗರ್ ಬಯೋಮೆಟ್ರಿಕ್ ವಿನಾಯಿತಿ

Date:

ಪಾಸ್‌ಪೋರ್ಟ್‌ ಧೃಡಿಕರಣ ಮಾಡಲು ಬೆರಳಚ್ಚು ಅಗತ್ಯವಾಗಿದೆ. ಆದರೆ, ಹಿರಿಯ ನಾಗರಿಕರೊಬ್ಬರು ಅಪಘಾತವೊಂದರಲ್ಲಿ ತಮ್ಮ ಎರಡು ಕೈಗಳನ್ನು ಕಳೆದುಕೊಂಡ ಕಾರಣ, ರಾಜ್ಯದ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಅವರಿಗೆ ಕಡ್ಡಾಯ ಬೆರಳಚ್ಚು ಬಯೋಮೆಟ್ರಿಕ್‌ನಿಂದ ವಿನಾಯಿತಿ ನೀಡಿದೆ.

- Advertisement -

ಕೆ ಸುಂದರ ಮತ್ತು ಅವರ ಪತ್ನಿ ಹೆಚ್.ಕೆ ದೇವಕಿ ಅವರು ಫಿನ್‌ಲ್ಯಾಂಡ್‌ನಲ್ಲಿ ಉದ್ಯೋಗದಲ್ಲಿರುವ ತಮ್ಮ ಮಗನೊಂದಿಗೆ ವಾಸಿಸಲು ಶೀಘ್ರದಲ್ಲೇ ಫಿನ್‌ಲ್ಯಾಂಟ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ, ಅವರು ಮೊದಲ ಬಾರಿಗೆ ತಮ್ಮ ಪಾಸ್‌ಪೋರ್ಟ್‌ ಪಡೆಯಲು ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಕೆ. ಸುಂದರ ಅವರು ಮಂಗಳೂರಿನ ನಿವೃತ್ತ ಮುಖ್ಯೋಪಾಧ್ಯಾಯರು. ಇವರು ತಮ್ಮ ಪುತ್ರಿ ಕೆ.ಎಸ್.ಶಿಲ್ಪಾ ಅವರ ನಿಶ್ಚಿತಾರ್ಥದ ಸಮಾರಂಭದ ಹಿಂದಿನ ದಿನ ಸ್ಟೀಲ್ ರಾಡ್ ಬಳಸಿ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಕೈ ಕಳೆದುಕೊಂಡಿದ್ದರು.

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ ಕೆ ಕೃಷ್ಣ ಅವರು ಸುಂದರ ಅವರ ಪ್ರಸ್ತುತ ಸ್ಥಿತಿಯನ್ನು ಉಲ್ಲೇಖಿಸಿ, ಅವರಿಗೆ ಬಯೋಮೆಟ್ರಿಕ್‌ಗಳನ್ನು ಮನ್ನಾ ಮಾಡುವಂತೆ ಕೋರಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದರು.

“ಇತರಹದ ಅರ್ಜಿ ನೋಡುತ್ತಿರುವುದು ಇದೇ ಮೊದಲು. ಅಪ್ಲಿಕೇಶನ್‌ನಲ್ಲಿನ ಫೋಟೋದ ಕೆಳಗೆ ಅಗತ್ಯವಿರುವ ಸಹಿಯ ಬದಲಿಗೆ ಇಂಕ್ ಪ್ಯಾಡ್‌ನಲ್ಲಿ ಅವರ ಕಾಲ್ಬೆರಳ ಗುರುತನ್ನು ಬಳಸಲು ಸಚಿವಾಲಯ ಅನುಮತಿ ನೀಡಿದೆ. ಫೆಬ್ರವರಿ ಕೊನೆಯ ವಾರದಲ್ಲಿ ಮೈಸೂರು ಅಂಚೆ ಕಚೇರಿ ಪಾಸ್‌ಪೋರ್ಟ್ ಸೇವಾ ಕೇಂದ್ರದಲ್ಲಿ ಪಾಸ್‌ಪೋರ್ಟ್‌ಗಾಗಿ ಮರು ಅರ್ಜಿ ಸಲ್ಲಿಸಿದ ನಂತರ ಸುಂದರ ಅವರಿಗೆ ಆದ್ಯತೆ ನೀಡಲಾಯಿತು. ಅದನ್ನು ಈಗಾಗಲೇ ಅವರ ನಿವಾಸಕ್ಕೆ ಕಳುಹಿಸಲಾಗಿದೆ” ಎಂದು ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿ ಕೃಷ್ಣ ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ದುರ್ಬಳಕೆ ಮೇಲೆ ಕಣ್ಗಾವಲು; ₹5,000ವರೆಗೂ ದಂಡ

ದಕ್ಷಿಣ ಕನ್ನಡದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕೆಲಸ ನಿರ್ವಹಿಸಿ ಸುಂದರ ಅವರು ನಿವೃತ್ತರಾಗಿದ್ದಾರೆ. ಇವರು ಮೈಸೂರಿನಲ್ಲಿ ಮನೆ ಖರೀದಿಸಿ ಈಗ ಇಲ್ಲಿಯೇ ವಾಸವಾಗಿದ್ದಾರೆ. ಅವರು ಕೃತಕ ಕೈಗಳನ್ನು ಬಳಸುತ್ತಿದ್ದಾರೆ.

“ಮೈಸೂರಿನಿಂದ ಬೆಂಗಳೂರು ಮತ್ತು ದೆಹಲಿಯವರೆಗೆ ಎಲ್ಲರೂ ನನಗೆ ಸಹಾಯ ಮಾಡಲು ಹೊರಟಿರುವ ವಿಧಾನದ ಬಗ್ಗೆ ನನಗೆ ನಿಜವಾಗಿಯೂ ಸಂತೋಷವಾಗಿದೆ. ನನ್ನ ಹೆಂಡತಿ ಮತ್ತು ನಾನು ಇಬ್ಬರೂ ಜನವರಿ 30ರಂದು ಆರಂಭದಲ್ಲಿ ಅರ್ಜಿ ಸಲ್ಲಿಸಿದ್ದೇವು. ಅವಳು ಸ್ವಲ್ಪ ಸಮಯದ ನಂತರ ಅವಳ ಪಾಸ್‌ಪೋರ್ಟ್ ಪಡೆದಳು. ಆದರೆ, ನನ್ನ ಸಮಸ್ಯೆಯಿಂದಾಗಿ ನಾನು ಪಾಸ್‌ಪೋರ್ಟ್‌ ಪಡೆಯಲು ಸಾಧ್ಯವಾಗಿರಲಿಲ್ಲ” ಎಂದು ಸುಂದರ್ ಅವರು ಹೇಳಿದ್ದಾರೆ.

“ಫಿನ್‌ಲ್ಯಾಂಡ್‌ನ ನೋಕಿಯಾ ಸೀಮೆನ್ಸ್‌ನಲ್ಲಿ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿರುವ ನಮ್ಮ ಮಗ ಶಿವರಾಜ್ ಅವರನ್ನು ಭೇಟಿ ಮಾಡಲು ಅಲ್ಲಿಗೆ ತೆರಳಬೇಕು ಎಂದು ಯೋಚನೆ ಮಾಡಿದ್ದೇವೆ. ನನ್ನ ಕೈ ಸಮಸ್ಯೆಯಿಂದಾಗಿ ವಿಶೇಷ ಒಪ್ಪಿಗೆಯನ್ನು ಪಡೆಯಬೇಕಾಗಿರುವುದರಿಂದ ಸ್ವಲ್ಪ ಕಾಯಬೇಕು ಎಂದು ನನಗೆ ತಿಳಿಸಿದ್ದರು. ಎಂಟು ವರ್ಷಗಳ ಹಿಂದೆ ನನ್ನ ಕೈಗಳನ್ನು ಕಳೆದುಕೊಂಡ ನಂತರ ಪಾಸ್‌ಪೋರ್ಟ್ ಪಡೆಯಲು ಸಾಧ್ಯವಿಲ್ಲ ಎಂದು ನಾನು ಭಾವಿಸಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...