ಬೆಂಗಳೂರು | ಉಚಿತ ನೀರನ್ನೂ ಮಾರಾಟ; ಖಾಸಗಿ ಟ್ಯಾಂಕರ್ ಚಾಲಕನ ವಿರುದ್ಧ ದೂರು ದಾಖಲು

Date:

ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ಇದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಟ್ಯಾಂಕರ್ ಮಾಲೀಕರು ದುಪ್ಪಟ್ಟು ದರ ನಿಗದಿ ಮಾಡಿ ಜನರಿಂದ ಹಣ ವಸೂಲಿ ಮಾಡುತ್ತಿದ್ದರು. ಇದಕ್ಕೆ ಜಲಮಂಡಳಿ ಟ್ಯಾಂಕರ್ ನಿಯಮ ತಂದು ಟ್ಯಾಂಕರ್‌ ನೀರಿಗೆ ದರ ನಿಗದಿ ಮಾಡಿತ್ತು. ಆದರೂ, ಸಾರ್ವಜನಿಕರಿಗೆ ಉಚಿತವಾಗಿ ಪೂರೈಕೆ ಮಾಡಲು ಉದ್ದೇಶಿಸಿದ್ದ ಕುಡಿಯುವ ನೀರನ್ನು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಖಾಸಗಿ ಟ್ಯಾಂಕರ್‌ ಚಾಲಕನೊಬ್ಬನ ವಿರುದ್ಧ ದೂರು ದಾಖಲಾಗಿದೆ.

ಚಾಲಕ ಸುನೀಲ್ ಎಂಬುವವರ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕರಿಗೆ ಕುಡಿಯುವ ನೀರನ್ನು ಪೂರೈಸಲು ಸುನೀಲ್ ‌ಎಂಬುವವರಿಗೆ ಸೇರಿದ ಖಾಸಗಿ ಟ್ಯಾಂಕರ್ ಕೆಎ-52 ಸಿ-0204 ಪಡೆದುಕೊಳ್ಳಲಾಗಿತ್ತು.

ವಾರ್ಡ್ ನಂ 130ರಲ್ಲಿರುವ ಸಾರ್ವಜನಿಕರಿಗೆ ವಿತರಿಸಲು ಸೂಚನೆ ನೀಡಲಾಗಿತ್ತು. ಆದರೆ, ಖಾಸಗಿ ಟ್ಯಾಂಕರ್ ಮಾಲೀಕ‌ ಸುನೀಲ್ ಅವರು ಶೆಟ್ಟಿಹಳ್ಳಿ ಮುಖ್ಯ ರಸ್ತೆಯ ಮಲ್ಲಸಂದ್ರ ವಾರ್ಡ್ ಸಂ 14ರಲ್ಲಿ ವಾಣಿಜ್ಯ ಉದ್ದೇಶಕ್ಕೆ ನೀರು ವಿತರಣೆ ಮಾಡಿದ್ದಾರೆ. ಈ ವಿಚಾರ ಮಾ.24ರಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೀಗಾಗಿ,  ಖಾಸಗಿ ಟ್ಯಾಂಕರ್‌ನ ಸುನೀಲ್ ಎನ್ನುವವರ ವಿರುದ್ಧ ಬಿಡಬ್ಲ್ಯೂಎಸ್ಎಸ್‌ಬಿ ಸಹಾಯಕ ಎಂಜನಿಯರ್ ಕಾರ್ತಿಕ್ ಮಂಜು ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ಬೆಂಗಳೂರು ಜಲಮಂಡಳಿ ಹಾಗೂ ಬಿಬಿಎಂಪಿ ವತಿಯಿಂದ ಸಾರ್ವಜನಿಕರಿಗೆ ಕುಡಿಯುವ ನೀರನ್ನು‌ ಪೂರೈಸಲು ಖಾಸಗಿ ಟ್ಯಾಂಕರ್‌ಗಳನ್ನು ಪಡೆದುಕೊಳ್ಳಲಾಗಿದ್ದು, ಈ ಖಾಸಗಿ ಟ್ಯಾಂಕರ್‌ಗಳ ಮೂಲಕ‌ ಅಗತ್ಯವಿರುವ ಕಡೆಗಳಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕುಡಿಯುವ ನೀರನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಉಚಿತವಾಗಿ ಕುಡಿಯುವ ನೀರು ಒದಗಿಸಬೇಕಾದ ನೀರನ್ನು ಅನ್ಯ ಉದ್ದೇಶಗಳಿಗೆ ಮಾರಾಟ ಮಾಡಿದ್ದು ಕಂಡುಬಂದರೇ ಮಂಡಳಿಯಿಂದ ಕಠಿಣ ಕ್ರಮಕೈಗೊಳ್ಳಲಾಗುವುದು” ಎಂದು ಬೆಂಗಳೂರು ‌ಜಲಮಂಡಳಿ‌ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್ ಮನೋಹರ್ ಅವರು ಎಚ್ಚರಿಕೆ ನೀಡಿದ್ದಾರೆ.

“ಸಾರ್ವಜನಿಕರಿಗೆ ಕುಡಿಯುವ ನೀರನ್ನು‌ ಪೂರೈಸಲು ಪಡೆದುಕೊಳ್ಳಲಾದ ಖಾಸಗಿ ಟ್ಯಾಂಕರ್‌ಗಳ ಚಾಲಕರು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡಿದರೆ, ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಖಾಸಗಿ ಟ್ಯಾಂಕರ್‌ ಅವರಿಗೆ ‌ಸೂಚಿಸಲಾದ ಸ್ಥಳಗಳಿಗೆ ಸರಬರಾಜು ಮಾಡಬೇಕು. ನಿಯಮಗಳನ್ನು ಉಲ್ಲಂಘಿಸಿದರೆ, ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೆರೆಗಳಿಗೆ ಬಿಡುತ್ತಿರುವ ಸಂಸ್ಕರಿಸಿದ ನೀರನ್ನು ಬಳಸಬೇಡಿ: ಬೆಂಗಳೂರು ಜನತೆಗೆ ಜಲಮಂಡಳಿ ಸೂಚನೆ

“ಬೆಂಗಳೂರಿನಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಮಂಡಳಿ ಕೈಗೊಳ್ಳುತ್ತಿದೆ” ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಕ್ಕೆ ನೀಡಿರುವ ಆದೇಶ ಹಿಂಪಡೆಯಲು ಒತ್ತಾಯಿಸಿ; ಜೂ.3ರಂದು ಪ್ರತಿಭಟನೆ

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ...

ಪ್ರತಿ ತಿಂಗಳು ನಾನು ಮತ್ತು ಸಿಎಂ ಸೇರಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ: ಡಿ ಕೆ ಶಿವಕುಮಾರ್

ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ “ಕಾಂಗ್ರೆಸ್ ಕುಟುಂಬ” ಕಾರ್ಯಕ್ರಮ ರೂಪಿಸಲಾಗುವುದು....

ಬೆಂಗಳೂರು | ಮಾಲ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸೂಚನೆ ನೀಡಿದ ಡಿಸಿಎಂ

ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಗೇಮಿಂಗ್ ಜೋನ್‌ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ...