ಬೆಂಗಳೂರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಡಿ.30ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿ ಪ್ರಕಟ ಮಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಯ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಈಗಾಗಲೇ ನವೆಂಬರ್ 23 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ನವೆಂಬರ್ 23 ರಿಂದ ಡಿಸೆಂಬರ್ 9ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ ? ಬಿಎಂಟಿಸಿ | ಮೃತ ಸಿಬ್ಬಂದಿಯ ಅವಲಂಬಿತರಿಗೆ ₹50 ಲಕ್ಷ ವಿಮಾ ಪರಿಹಾರ
ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಡಿ.30 ರಂದು ಪ್ರಕಟಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಪದವೀಧರರ ಕ್ಷೇತ್ರ ಚುನಾವಣೆಗೆ ಒಟ್ಟು 66,213 ಮತದಾರರಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 11,763 ಮತದಾರರಿದ್ದಾರೆ.