ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂ ಬಳಿಯ ಟೈರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಟೈಯರ್, ಪೈಪ್‌ಗಳು, ಪ್ಲೇವುಡ್ ಸಂಗ್ರಹಿಸಿಟ್ಟಿದ್ದ ಗೋಡೌನ್‌ಗಳಿಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹಾನಿಯಾಗಿದೆ.
ಚಾಮರಾಜಪೇಟೆಯ ಗವಿಪುರಂ ಬಳಿಯ ಟಿಆರ್‌ಮಿಲ್ ಆವರಣದಲ್ಲಿ ಈ ಘಟನೆ ನಡೆದಿದೆ. ಇನ್ನು ಟೈರ್, ಪೈಪ್ ಹಾಗೂ ಪ್ಲೆವುಡ್ಗಳನ್ನು ಇರಿಸಿರುವ ಸುಮಾರು 3 ಗೋದಾಮಿಗೂ ಬೆಂಕಿ ಆವರಿಸಿದೆ. ಮುಂಜಾನೆ 4 ಗಂಟೆ ಸಮಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ.
ಇದು ರಾಜೇಶ್ ಅಗರ್ವಾಲ್ ಮಾಲೀಕತ್ವದ ಗೋಡೌನ್ ಆಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. 15 ಸಾವಿರಕ್ಕೂ ಅಧಿಕ ಟೈರ್ ಗೋಡೌನ್ನಲ್ಲಿತ್ತು. 60 ಸಾವಿರಕ್ಕೂ ಹೆಚ್ಚು ಟ್ಯೂಬ್ ಮತ್ತು ಆಯಿಲ್ ಬೆಂಕಿಗಾಹುತಿ ಆಗಿದೆ.
ಈ ಸುದ್ದಿ ಓದಿದ್ದೀರಾ? 47 ಮೆಡಿಕಲ್ ವಿದ್ಯಾರ್ಥಿನಿಯರು ಅಸ್ವಸ್ಥ | ಇಬ್ಬರಲ್ಲಿ ಕಾಲರಾ ಪತ್ತೆ; ಸುಮೋಟೋ ಕೇಸ್ ದಾಖಲು
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ನಾಲ್ಕು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.