ಬೆಂಗಳೂರು | ಬೆಂಕಿ ಅವಘಡ: ಸುಟ್ಟು ಕರಕಲಾದ 40ಕ್ಕೂ ಹೆಚ್ಚು ವಾಹನಗಳು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಗರದ ನಾಯಂಡಹಳ್ಳಿ ಬಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಗೆ ಆಹುತಿಯಾಗಿದೆ. ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿ ಆಗಿವೆ.

ಫೆ. 22ರ ತಡರಾತ್ರಿ 12 ಗಂಟೆ ಸುಮಾರಿಗೆ ಬೆಂಕಿ ಬಿದ್ದಿದ್ದು, ಬೆಂಕಿಯ ಕೆನ್ನಾಲಿಗೆಗೆ ಗೋಡೌನ್ ಪಕ್ಕ ಇರಿಸಿದ್ದ 40ಕ್ಕೂ ಹೆಚ್ಚು ಆಟೋಗಳು, ಸರಕುಗಳನ್ನು ಸಾಗಿಸುವ ವಾಹನಗಳು ಸುಟ್ಟು ಹೋಗಿದೆ.

30 ರಿಂದ 40 ಆಟೋಗಳು ಅಗ್ನಿಗಾಹುತಿ ಆಗಿವೆ. ಮನೆ ಮುಂದೆ ವಾಹನಗಳನ್ನು ನಿಲ್ಲಿಸಲು ಜಾಗ ಇಲ್ಲದ ಕಾರಣ ಜನರು ಶೆಡ್​ನಲ್ಲಿ ಪಾರ್ಕಿಂಗ್‌ ಮಾಡಲು ಹಣ ಕೊಟ್ಟು ವಾಹನ ನಿಲ್ಲಿಸುತ್ತಿದ್ದರು. ಇದೀಗ, ಈ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳದಲ್ಲಿದ್ದ ಎಲ್ಲ ಆಟೋಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಆಟೋ ಮಾಲೀಕರು ಕಂಗಾಲಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ರಿಜ್ವಾನ್ ಎಂಬುವವರ ಮಾಲೀಕತ್ವದ ಗೋಡೌನ್‌ನ ಒಂದು ಭಾಗದ ಖಾಲಿ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಬಾಡಿಗೆಗೆ ಪಡೆದು ಪಾರ್ಕಿಂಗ್ ನಡೆಸುತ್ತಿದ್ದರು. ಅಕ್ಕಪಕ್ಕದಲ್ಲೂ ಹತ್ತಾರು ಪ್ಲಾಸ್ಟಿಕ್ ಗೋಡೌನ್ ಇದ್ದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ವೇಗದ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನೆ ಬಳಿಕ ಗೋಡೌನ್ ಬಳಿ ಬಂದು ಕಣ್ಣೀರು ಹಾಕಿದ್ದಾರೆ. ಪ್ರತಿ ದಿನ ವಾಹನಕ್ಕೆ 30 ರೂಪಾಯಿ ಚಾರ್ಜ್ ಮಾಡುತ್ತಿದ್ದರು. ಪಾರ್ಕಿಂಗ್ ಸ್ಥಳದ ಪಕ್ಕದಲ್ಲೇ ಪ್ಲಾಸ್ಟಿಕ್ ಗೋಡೌನ್ ಕೂಡ ಇತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಾಲಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ; ಬಾಲಕನ ವಿರುದ್ಧವೂ ಪ್ರಕರಣ ದಾಖಲು

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಮೂರು ಗಂಟೆಗಳ ಕಾಲ ಹರಸಾಹಸ ಮಾಡಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದರು. ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಕೂಡ ಕೈ ಜೋಡಿಸಿದ್ದು, ಬೆಂಕಿ ಹತೋಟಿಗೆ ತಂದಿದ್ದಾರೆ.

ಜೀವನಕ್ಕೆ ಆಧಾರವಾಗಿದ್ದ ಆಟೋಗಳನ್ನು ಕಳೆದುಕೊಂಡ ಚಾಲಕರು ಕಂಗಾಲಾಗಿದ್ದು, ಈಗ ಏನು ಮಾಡೋದು ಅಂತ ಆಟೋ ಮಾಲೀಕರು ಕಣ್ಣೀರಿಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಗತ್ ಸಿಂಗ್ ಹೆಸರಿಡಲು ಆಗ್ರಹಿಸಿ ಸಾವರ್ಕರ್ ಫ್ಲೈ ಓವರ್‌ಗೆ ಮಸಿ ಬಳಿದ NSUI ಕಾರ್ಯಕರ್ತರು: ಮೂವರ ಬಂಧನ

ಬೆಂಗಳೂರು ನಗರದ ಹೊರವಲಯದ ಯಲಹಂಕದಲ್ಲಿರುವ ಫ್ಲೈ ಓವರ್‌ಗೆ ಇಟ್ಟಿರುವ ಸಾವರ್ಕರ್ ಹೆಸರನ್ನು...

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ...

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...

ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು...