ಬೆಂಗಳೂರು | ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ ನಡೆಸಿದ ನಾಲ್ವರ ಬಂಧನ

Date:

ಡೆಲಿವರಿ ಬಾಯ್ ಮೇಲೆ ಬಿಯರ್ ಬಾಟಲ್ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಓರ್ವ ಲಿಂಗತ್ವ ಅಲ್ಪಸಂಖ್ಯಾತ ಸೇರಿದಂತೆ ನಾಲ್ವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಸಂಕೇತ್‌ ಹಲ್ಲೆಗೊಳಗಾದವರು. ದಾಮಿನಿ, ಮರಿಯನ್, ನಾಗೇಂದ್ರ ಹಾಗೂ ಕಿರಣ್ ಬಂಧಿತರು. ಮೊಬೈಲ್ ಫೋನ್‌ಗಳು ಅದಲು-ಬದಲಾದ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರು ಶಾಮೀಲಾಗಿ ಡೆಲಿವರಿ ಬಾಯ್ ಸಂಕೇತ್‌ನ ಮೇಲೆ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಏಪ್ರಿಲ್ 23 ರಂದು, ಕಂಠೀರವ ಸ್ಟುಡಿಯೋ ಬಳಿ ಸಂಕೇತ್ ಫುಡ್ ಡೆಲಿವರಿ ಮಾಡುತ್ತಿದ್ದರು. ಆ ಸಮಯದಲ್ಲಿ ಆಕಸ್ಮಿಕವಾಗಿ ದಾಮಿನಿ ಮತ್ತು ಸಂಕೇತ್ ಅವರ ಫೋನ್‌ಗಳು ಅದಲು-ಬದಲಾಗಿದ್ದವು. ಅದರ ಅರಿವಾಗದೇ ಇಬ್ಬರೂ ಆ ಸ್ಥಳದಿಂದ ತೆರಳಿದ್ದರು.

ಬಳಿಕ, ಫೋನ್‌ಗಳು ‘ಎಕ್ಸ್‌ಚೇಂಜ್’ ಆಗಿರುವ ಬಗ್ಗೆ ಅರಿತ ದಾಮಿನಿ ತಮ್ಮ ಫೋನ್‌ ವಾಪಸ್‌ ಕೊಡುವಂತೆ ಸಂಕೇತ್‌ಗೆ ಮನವಿ ಮಾಡಿದ್ದರು. ಕೆಲಸಗಳಲ್ಲಿ ನಿರತರಾಗಿದ್ದ ಸಂಕೇತ್, ಕೆಲ ಸಮಯದ ನಂತರ ಹಿಂದಿರುಗಿಸುವುದಾಗಿ ಹೇಳಿದ್ದರು. ಬಳಿಕ, ದಾಮಿನಿ ಫೋನ್‌ಗಾಗಿ ಮತ್ತೆ ಸಂಪರ್ಕ ಮಾಡಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸ ಕಾರಿನ ಮೇಲೆ ಬಿದ್ದ ದೊಡ್ಡ ಮರ; ಕಾರು ಸಂಪೂರ್ಣ ಜಖಂ

ಸಂಕೇತ್‌ನ ಪ್ರತಿಕ್ರಿಯೆಯಿಂದ ಕೋಪಗೊಂಡಿದ್ದ ದಾಮಿನಿ ಮತ್ತು ಇತರರು ಆತನಿಗಾಗಿ ಹುಡುಕಾಟ ಪ್ರಾರಂಭಿಸಿದ್ದರು. ಏಪ್ರಿಲ್ 28ರಂದು ನಾಗರಭಾವಿ ಸರ್ಕಲ್ ಬಳಿ ಸಂಕೇತ್‌ನನ್ನು ಕಂಡು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಗಾಯಗೊಳಿಸಿದ್ದಾರೆ.

ಸಂತ್ರಸ್ತ ಸಂಕೇತ್ ಈ ಬಗ್ಗೆ ನಗರದ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರು ಸದ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...