ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಬ್ಯಾಂಕ್‌ನಿಂದ ಸಾಲ ಪಡೆದು ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರ ಮಗ ವೆಂಕಟೇಶ್ ಅಭಿಲಾಷ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ನಕಲಿ ಕಾಗದ ಪತ್ರಗಳನ್ನು ಸೃಷ್ಟಿ ಮಾಡಿ ಬ್ಯಾಂಕ್‌ನಲ್ಲಿ ವಂಚಿಸಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪೈಕಿ ವೆಂಕಟೇಶ್ ಅಭಿಲಾಷ್ ಅವರು ಒಬ್ಬರು ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆ, ಅಭಿಲಾಷ್ ಅವರನ್ನು ಸಿಸಿಬಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಅಭಿಲಾಷ್ ವಿಚಾರಣೆ ನಡೆಸುವಾಗ ಹಣ ವರ್ಗಾವಣೆ ಆಗಿರುವ ಸಂಗತಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ₹3 ಕೋಟಿ ಸಾಲ ಪಡೆದ ವಂಚಕರು: ಬಂಧನ
ರಾಕ್‌ಲೈನ್ ವೆಂಕಟೇಶ್ ಅವರು ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಹಲವಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ.