ಕೆಐಡಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಬೆಂಗಳೂರಿನ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಎಂಜಿನಿಯರ್ ಗಂಗಾಧರ್ನನ್ನು ಬೆಂಗಳೂರಿನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಗಂಗಾಧರ್ ಪೊಲೀಸ್ ಇನ್ಸ್‌ಪೆಕ್ಟರ್ ಎಂದು ನಂಬಿಸಿ ವಂಚನೆ ಮಾಡುತ್ತಿದ್ದ. ಜತೆಗೆ, ತನ್ನ ಕಾರಿಗೆ ಪೊಲೀಸ್ ಜಾಗೃತದಳದ ಬೋರ್ಡ್ ಅಳವಡಿಕೆ ಮಾಡಿಕೊಂಡಿದ್ದ. ಇದರಿಂದ ಆತನಿಗೆ ಹೆದ್ದಾರಿ ಟೋಲ್ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು.
ಇನ್ನು ಬಂಧಿತ ಆರೋಪಿ ಗಂಗಾಧರನನ್ನು ಯಾರಾದರೂ ಪ್ರಶ್ನೆ ಮಾಡಿದರೇ, ಆತ ಪೊಲೀಸ್ ಇನ್ಸ್‌ಪೆಕ್ಟರ್ ಐಡಿ ತೋರಿಸುತ್ತಿದ್ದನು. ಅಲ್ಲದೇ, ಆತನ ಮೇಲೆ ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪವೂ ಇದೆ.
ಈ ಸುದ್ದಿ ಓದಿದ್ದೀರಾ? ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬಂಧಿತ ಆರೋಪಿ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದನು. ಈ ಹಿನ್ನಲೆ, ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.