ಬೆಂಗಳೂರು | ಸಾಮಾನ್ಯ ಸ್ಥಿತಿಗೆ ಮರಳಿದ ಹಸಿರು ಮಾರ್ಗದ ಮೆಟ್ರೋ ಸಂಚಾರ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ತಡೆಯುವಲ್ಲಿ ನಮ್ಮ ಮೆಟ್ರೋ ಪ್ರಮುಖ ಪಾತ್ರ ವಹಿಸಿದೆ. ನಿತ್ಯ ಕೆಲಸಕ್ಕೆ ತೆರಳುವವರಿಗೆ ಮೆಟ್ರೋ ಅತ್ಯಂತ ಸಹಕಾರಿಯಾಗಿದೆ. ಮೆಟ್ರೋ ಹೊರಡುವ ಸಮಯದಲ್ಲಿ ಸ್ವಲ್ಪ ಏರುಪೇರಾದರೆ, ಸಾವಿರಾರು ಜನ ಪರದಾಡುವಂತಾಗುತ್ತದೆ. ಇದೀಗ, ಡಿ.15 ರಂದು ತಾಂತ್ರಿಕ ಸಮಸ್ಯೆಯಿಂದ ಹಸಿರು ಮಾರ್ಗದ ಮೆಟ್ರೋ ಸಂಚಾರ ಬರೋಬ್ಬರಿ ಒಂದು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಬಳಿಕ 10:50 ರಿಂದ ಸಾಮಾನ್ಯ ಸ್ಥಿತಿಗೆ ಮರಳಿದೆ.

“ಹಸಿರು ಮಾರ್ಗದ ಮೆಟ್ರೋ ಸೇವೆಗಳನ್ನು ಡಿ.15 ರಂದು ಬೆಳಗ್ಗೆ 10.50 ರಿಂದ ಸಾಮಾನ್ಯ ಸ್ಥಿತಿಗೆ ತರಲಾಗಿದೆ” ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಯಶವಂತಪುರ-ನಾಗಸಂದ್ರ ಹಾಗೂ ನಾಗಸಂದ್ರ-ಯಶವಂತಪುರ ಕಡೆಗೆ ಹೋಗುವ ಹಸಿರು ಮಾರ್ಗದ ಮೆಟ್ರೋ ಸಂಚಾರ ತಾಂತ್ರಿಕ ಸಮಸ್ಯೆಯಿಂದಾಗಿ ಒಂದು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಮೆಟ್ರೋ ನಿಲ್ದಾಣಕ್ಕೆ ಬಂದು ವಾಪಸ್​ ಹೋಗುತ್ತಿದ್ದರು. ಕೆಲಕಾಲ ಪ್ರಯಾಣಿಕರು ಪರದಾಡುವಂತಾಯಿತು. ಜನರು ಬಸ್, ಆಟೋ ಹತ್ತುವಂತಾಯಿತು. ನಾಗಸಂದ್ರದಿಂದ ಸಿಲ್ಕ್ ಇನ್​​ಸ್ಟಿಟ್ಯೂಟ್​ಗೆ​ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ಇದಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಜೆ ತೆಗೆದುಕೊಂಡಿದ್ದಕ್ಕೆ ಕಂಪನಿ ಮ್ಯಾನೇಜರ್ ಕಿರುಕುಳ: ಕಾರ್ಮಿಕ ಆತ್ಮಹತ್ಯೆ

ಇನ್ನು ಈಗಾಗಲೇ ಹಣ ಕೊಟ್ಟು ಟೋಕನ್ ಪಡೆದ ಪ್ರಯಾಣಿಕರು ಪರದಾಡುವಂತಾಯಿತು. ಮೆಟ್ರೋ ಬೇಗ ಬರದ ಕಾರಣಕ್ಕೆ ವಾಪಸ್ ಹೋಗಲೂ ಸಾಧ್ಯವಾಗದೇ ಕೆಲಕಾಲ ಒದ್ದಾಡಿದರು. ಆಫೀಸ್‌ಗೆ ತೆರಳಲು ತಡವಾದ ಕಾರಣ ಅನಿವಾರ್ಯವಾಗಿ ಟೋಕನ್ ಬಳಸದೆ ಆಟೋ ಹತ್ತಿ ಹೊರಟಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X