ಬೆಂಗಳೂರು | ಕಂಪನಿಯಲ್ಲಿ ಹೆಚ್ಚಿಗೆ ಕೆಲಸ ನೀಡಿದ್ದಕ್ಕೆ ದ್ವೇಷ; ಸಹೋದ್ಯೋಗಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ

Date:

Advertisements

ಕಂಪನಿಯೊಂದರಲ್ಲಿ ಜಾಸ್ತಿ ಕೆಲಸ ಮತ್ತು ಒತ್ತಡ ಹೇರುತ್ತಿದ್ದಾರೆ ಎಂದು ಸಹೋದ್ಯೋಗಿಗಳು ಆಡಿಟರ್‌ ಮೇಲೆ ನಡುರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಹೊರವರ್ತುಲ ರಸ್ತೆಯ ಕಲ್ಯಾಣ್ ನಗರದ ಬಳಿ ನಡೆದಿದೆ.

ಸುರೇಶ್​ ಹಲ್ಲೆಗೊಳಗಾದ ವ್ಯಕ್ತಿ. ಇವರು ಹೆರಿಟೇಜ್ ಮಿಲ್ಕ್ ಪ್ರಾಡಕ್ಟ್ ಕಂಪನಿಯಲ್ಲಿ ಆಡಿಟರ್​ ಆಗಿದ್ದಾರೆ. ಈ ಘಟನೆ ಮಾರ್ಚ್‌ 31ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಕಾರ್‌ವೊಂದರ ಡ್ಯಾಶ್‌ಬೋರ್ಡ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಾರ್ಚ್‌ 31ರಂದು ಸಾಯಂಕಾಲ 6 ಗಂಟೆಗೆ ಸುಮಾರಿಗೆ ಹೊರವರ್ತುಲ ರಸ್ತೆಯ ಕಲ್ಯಾಣ್ ನಗರದ ಬಳಿ ನಡುರಸ್ತೆಯಲ್ಲಿ ಸುರೇಶ್ ಎಂಬುವವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೇ, ಕಬ್ಬಿಣದ ರಾಡ್‌ನಿಂದ ಇಬ್ಬರು ಮನಸೋ ಇಚ್ಛೆ ಹಲ್ಲೆ ಮಾಡಿರುವ ದೃಶ್ಯ ಡ್ಯಾಶ್‌ಬೋರ್ಡ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

Advertisements


ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿಯೇ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದೆ. ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಬೆಂಗಳೂರು ನಗರ ಪೊಲೀಸರಿಗೆ ಈ ವಿಡಿಯೋ ಟ್ಯಾಗ್ ಮಾಡಿ, ಆರೋಪಿಗಳ ವಿರುದ್ಧ ಕ್ರ ಕೈಗೊಳ್ಳುವಂತೆ ಕೋರಿದ್ದಾರೆ. ಈ ಬಗ್ಗೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಏಪ್ರಿಲ್ 5 ರಂದು ಐವರನ್ನು ಬಂಧಿಸಿದ್ದಾರೆ. ಬಂಧಿತ ಐವರ ಪೈಕಿ ಇಬ್ಬರು ಹಲ್ಲೆಗೊಳಗಾದ ಸುರೇಶ್‌ ಅವರ ಸಹೋದ್ಯೋಗಿಗಳು ಎಂದು ಹೇಳಲಾಗಿದೆ.

ಜಾಸ್ತಿ ಕೆಲಸ ಮತ್ತು ಒತ್ತಡ ನೀಡಿದ್ದಕ್ಕೆ ಆಡಿಟರ್ ಮೇಲೆ ಹಲ್ಲೆ ಮಾಡಲು ಸಹೋದ್ಯೋಗಿಗಳು ಗುಂಡಾಗಳಿಗೆ ಸುಪಾರಿ ನೀಡಿದ್ದರು ಎಂಬ ವಿಚಾರ ತನಿಖೆಯಿಂದ ಹೊರಬಿದ್ದಿದೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ

ಉಮಾಶಂಕರ್, ವಿನೇಶ್, ಸಂದೀಪ್ ಮತ್ತು ಇತರೆ ಇಬ್ಬರ ಬಂಧಿತರು. ಹಲ್ಲೆಗೊಳಗಾದ ಸುರೇಶ್ ಹೆರಿಟೇಜ್ ಮಿಲ್ಕ್ ಪ್ರಾಡಕ್ಟ್ ಕಂಪನಿಯಲ್ಲಿ ಆಡಿಟರ್ ಆಗಿದ್ದಾರೆ. ಉಮಾಶಂಕರ್ ಮತ್ತು ವಿನೇಶ್ ಕೂಡ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X