ಬೆಂಗಳೂರು | 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಇನ್ನುಮುಂದೆ ಹೆಲ್ಮೆಟ್​ ಕಡ್ಡಾಯ

Date:

ರಾಜ್ಯ ರಾಜಧಾನಿ ಬೆಂಗಳೂರು ವಾಹನ ಸಂಚಾರ ದಟ್ಟಣೆಗೆ ವಿಶ್ವದಲ್ಲಿ ಕುಖ್ಯಾತಿ ಪಡೆದಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಕೂಡ ಸಂಚಾರ ದಟ್ಟಣೆಗೆ ಕಾರಣವಾಗಿದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸಮರ ಸಾರಿರುವ ಬೆಂಗಳೂರು ಸಂಚಾರ ಪೊಲೀಸರು ಕಟ್ಟುನಿಟ್ಟಿನ ನಿಯಮ ಹಾಗೂ ಕ್ರಮಗಳನ್ನು ಜಾರಿಗೆ ತರುತ್ತಿದ್ದಾರೆ. ಇದೀಗ, 6 ವರ್ಷದ ಮೇಲ್ಪಟ್ಟ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಅವರು ಕೂಡ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಕಾರ್ಯಾಚರಣೆ ಆರಂಭಿಸಿರುವ ಬೆಂಗಳೂರು ಸಂಚಾರ ಪೊಲೀಸರು ಆಟೋ, ಸ್ಕೂಲ್ ವ್ಯಾನ್, ಟ್ರಕ್ ಸೇರಿದಂತೆ ನಾನಾ ವಾಹನಗಳ ಪರಿಶೀಲನೆ ನಡೆಸಿ ನಿಯಮ ಪಾಲನೆ ಮಾಡದೇ ಇರುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಹಾಗೆಯೇ, ಶಾಲೆಗಳ ಬಳಿ ಕಾರ್ಯಾಚರಣೆ ನಡೆಸುವಾಗ ಶಾಲೆಗೆ ಬರುವ ಪುಟ್ಟ ಮಕ್ಕಳು ಹೆಲ್ಮೆಟ್‌ ಧರಿಸದೇ ಇರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇದೀಗ ಸಂಚಾರ ಪೊಲೀಸರು 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಆದೇಶಿಸಿದ್ದಾರೆ.

ಪೋಷಕರು ಮಕ್ಕಳನ್ನು ಶಾಲೆಗೆ ಬಿಡುವಾಗ ಅವರನ್ನು ವಾಪಸ್ ಮನೆಗೆ ಕರೆದುಕೊಂಡು ಹೋಗುವಾಗ ಮಕ್ಕಳಿಗೆ ಹೆಲ್ಮೆಟ್​ ಕಡ್ಡಾಯವಾಗಿ ಹಾಕಬೇಕು. ಇನ್ನು ವಾಹನದಲ್ಲಿ ಮೂರಕ್ಕೂ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ. ನಿಯಮ ಮೀರಿದ ಪೋಷಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಆಟೋ, ಒಮ್ನಿ, ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವುದು ಸರಿಯಲ್ಲ. ಅಂತಹ ವಾಹನಗಳ ವಿರುದ್ದವೂ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಯಲಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊದುಕೊಂಡು ಹೋಗುವವರ ವಿರುದ್ಧವೂ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 50,000ಕ್ಕೂ ಅಧಿಕ ದಂಡ ಬಾಕಿ ಇದ್ದರೆ, ಮನೆ ಬಾಗಿಲಿಗೆ ಬರ್ತಾರೆ ಸಂಚಾರ ಪೊಲೀಸರು!

ಮನೆಮನೆಗೆ ತೆರಳಿ ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡಿದೇ ತಪ್ಪಿಸಿಕೊಂಡು ಓಡಾಡುವವರ ಮನೆಗೆ ತೆರಳಿ ದಂಡ ಸಂಗ್ರಹ ಮಾಡಲು ಸಂಚಾರ ಪೊಲೀಸ್ ಇಲಾಖೆ ಮುಂದಾಗಿದೆ. 50 ಸಾವಿರಕ್ಕೂ ಅಧಿಕ ದಂಡ ಬಾಕಿ ಉಳಿಸಿಕೊಂಡಿದ್ದವರ ಮನೆಗೆ ಸಂಚಾರ ಪೊಲೀಸರು ತೆರಳಿ ದಂಡ ವಸೂಲಿ ಮಾಡುತ್ತಿದ್ದಾರೆ.

ಬೆಂಗಳೂರಲ್ಲಿ ಪ್ರತಿ ದಿನ 1.2 ಕೋಟಿ ವಾಹನಗಳು ಸಂಚರಿಸುತ್ತವೆ. ಜತೆಗೆ 2,300 ಹೊಸ ವಾಹನಗಳು ಸೇರ್ಪಡೆಯಾಗುತ್ತಿವೆ. ನಿತ್ಯ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಅಲ್ಲದೇ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ, ತಪ್ಪಿಸಿಕೊಂಡು ಓಡಾಡುವರು ಹೆಚ್ಚಳವಾಗಿದ್ದಾರೆ. ಇದೀಗ ನಗರದಲ್ಲಿ 2,681ಕ್ಕೂ ಅಧಿಕ ವಾಹನಗಳು 50 ಸಾವಿರಕ್ಕೂ ಅಧಿಕ ದಂಡ ಬಾಕಿ ಉಳಿಸಿಕೊಂಡಿವೆ.

ದಂಡ ಹೊಂದಿರುವ ವಾಹನ ಸವಾರರನ್ನು ಪತ್ತೆ ಮಾಡಿ ಸಂಚಾರ ಪೊಲೀಸರು ಅವರ ಮನೆಗೆ ತೆರಳಿ ದಂಡ ವಸೂಲಿ‌ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ 50 ಸಾವಿರಕ್ಕೂ ಅಧಿಕ ದಂಡ ಹೊಂದಿರುವ 2681 ವಾಹನಗಳು ಇವೆ. ದಂಡ ವಸೂಲಿ ಪ್ರಕ್ರಿಯೆ ಕೂಡ ಆರಂಭವಾಗಿದೆ. ಇದುವರೆಗೆ 120 ಜನರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟದಿದ್ದರೆ ಅಂತಹ ವಾಹನ ಸವಾರರ ವಿರುದ್ಧ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲಿದ್ದು, ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...