ಎರಡು ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಫ್ಲೈಓವರ್ ಮೇಲೆ ನಡೆದಿದೆ.
ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್ನಲ್ಲಿ ತೆರಳುತ್ತಿದ್ದರು. ಈ ಅಪಘಾತದಲ್ಲಿ ತಂದೆ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸರ ಸಮ್ಮುಖದಲ್ಲಿಯೇ ಕೊಲೆ ಆರೋಪಿಯ ಮನೆಗೆ ಬೆಂಕಿ
ಸಂಕ್ರಾಂತಿ ಹಬ್ಬವನ್ನು ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭಿಸಿಲ್ಲ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.