ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಜಲಮಂಡಳಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕ್ರಮ ಕೈಗೊಳ್ಳುತ್ತಿದೆ. ಇನ್ನೊಂದೆಡೆ, ಬಿಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ. ಅಲ್ಲದೇ, ನಗರದಲ್ಲಿ ಈ ಬಾರಿ ಎರಡರಿಂದ ಐದು ದಿನಗಳವರೆಗೆ ಬಿಸಿ ಗಾಳಿ ತಟ್ಟುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಏಪ್ರಿಲ್ನಲ್ಲಿ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿಯ ಪರಿಣಾಮ ತಟ್ಟುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಬಿಸಿಗಾಳಿ ಎಚ್ಚರಿಕೆ ನೀಡಿದೆ.
ಏಪ್ರಿಲ್ನಿಂದ ಬಿಸಿಗಾಳಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನ ಮಾತ್ರ ಅಲ್ಲದೇ, ಕನಿಷ್ಠ ತಾಪಮಾನದಲ್ಲಿಯೂ ಏರಿಕೆಯಾಗುವ ಸಾಧ್ಯತೆ ಇದೆ.
ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುಣಾವಣೆ | 17 ಚುನಾವಣೆಗಳಲ್ಲಿ ಕರ್ನಾಟಕದಲ್ಲಿ ಎಲ್ಲ ಸ್ಥಾನಗಳನ್ನೂ ಒಂದೇ ಪಕ್ಷ ಗೆದ್ದಿದ್ದು ಒಮ್ಮೆ ಮಾತ್ರ
ಬಿಸಿಗಾಳಿ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ ಎಂದಿದೆ.