ಬೆಂಗಳೂರು | ದೇಹದೊಳಗೆ ₹9.2 ಕೋಟಿ ಮೌಲ್ಯದ ಕೊಕೇನ್ ಮರೆಮಾಚಿ ಅಕ್ರಮ ಸಾಗಾಟ

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ತನ್ನ ದೇಹದೊಳಗೆ ಬರೊಬ್ಬರಿ ₹9.2 ಕೋಟಿ ಮೌಲ್ಯದ ಕೊಕೇನ್ ಅನ್ನು ಮರೆಮಾಚಿ ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ್ದನು. ಸದ್ಯ ಆತನನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ವೆನೆಜುವೆಲಾದ ಪ್ರಯಾಣಿಕ ದುಬೈನಿಂದ ಬೆಂಗಳೂರಿಗೆ ಬಂದಿದ್ದನು. ಆತ ತನ್ನ ದೇಹದೊಳಗೆ ಕೊಕೇನ್ ಮರೆ ಮಾಡಿ ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ವೇಳೆ, ಅನುಮಾನಗೊಂಡ ಡಿಆರ್‌ಐ ಅಧಿಕಾರಿಗಳು ಆರೋಪಿಯನ್ನು ತಪಾಸಣೆ ಮಾಡಿ, ಬಳಿಕ ಸ್ಕ್ಯಾನಿಂಗ್ ಮಾಡಿಸಿದ್ದರು.

ಸ್ಕ್ಯಾನಿಂಗ್ ಸಮಯದಲ್ಲಿ ಪ್ರಯಾಣಿಕನ ದೇಹದಲ್ಲಿ ಬರೊಬ್ಬರಿ ₹9.2 ಕೋಟಿ ಮೌಲ್ಯದ 920 ಗ್ರಾಂ ನಾರ್ಕೋಟಿಕ್ ಕ್ಯಾಪ್ಸುಲ್‌ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಲ್ಲೆಗೊಳಗಾದ ಕೇರಳದ ಇಬ್ಬರು ಮಾದಕ ವಸ್ತು ಮಾರಾಟಗಾರರು

ಸದ್ಯ ಕ್ಯಾಪ್ಸುಲ್‌ಗಳನ್ನು ಡಿಆರ್‌ಐ ಅಧಿಕಾರಿಗಳು ಹೊರ ತೆಗೆಸಿದ್ದಾರೆ. ಈ ಬಗ್ಗೆ ಎನ್‌ಡಿಪಿಎಸ್‌ ಕಾಯ್ದೆ 1985ರ ಅಡಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ...

ಧಾರವಾಡ | ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸಹಾಯಧನ ಪಾವತಿಸಲು ಕ್ರಮ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು...