ಬೆಂಗಳೂರು | ಬೆಸ್ಕಾಂನಲ್ಲಿ ಅಕ್ರಮ, ಭ್ರಷ್ಟಾಚಾರ, ನಿರ್ಲಕ್ಷತೆ ಮತ್ತು ದುರಾಡಳಿತ ಸರ್ವೇ ಸಾಮಾನ್ಯ: ಕೆಆರ್‌ಎಸ್‌

Date:

Advertisements

ಜೀವನೋಪಾಯಕ್ಕಾಗಿ ಬೆಂಗಳೂರನ್ನು ಆಶ್ರಯಿಸಿ ಬರುವ ಬಡ ಜನತೆಯನ್ನು ನಮ್ಮ ಆಡಳಿತ ವರ್ಗ ಹೇಗೆಲ್ಲ ಹಿಂಸಿಸಿ, ಮೃತ್ಯುಕೂಪಕ್ಕೆ ತಳ್ಳುತ್ತದೆ ಎಂಬುದಕ್ಕೆ ಇತ್ತೀಚೆಗಷ್ಟೆ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ಅಪ್ಪನ ಎದುರೇ ಮಗು ಹಾಗೂ ಮಗುವಿನ ತಾಯಿ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ದುರ್ಘಟನೆಯೇ ಸಾಕ್ಷಿ. ಇದು ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಕೃತ್ಯವಾಗಿದೆ. ಬೆಂಗಳೂರು ನಗರದ ವೈಟ್‌ಫೀಲ್ಡ್ ಪ್ರದೇಶದಲ್ಲಿ ವಿದ್ಯುತ್ ತಂತಿಯೊಂದು ನೆಲಕ್ಕೆ ಬಿದ್ದು, ಅದರಿಂದ ಬೆಂಕಿ ಕಾಣಿಸಿಕೊಳ್ಳುತ್ತಿದೆ ಎಂದು ಸಾರ್ವಜನಿಕರು ಅವಘಡವಾದ, ಅಂದರೆ ನವೆಂಬರ್ 19ರ ಮುಂಜಾವು 3.58ರ ಸುಮಾರಿಗೆ ಫೋನ್ ಮಾಡಿ ಎಚ್ಚರಿಸಿದ್ದರು. ಆದರೆ, ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ ಪರಿಣಾಮ ಎರಡು ಅಮಾಯಕ ಜೀವಗಳು ಬಲಿಯಾದವು.

ಬೆಸ್ಕಾಂನಲ್ಲಿ ಅಕ್ರಮ, ಭ್ರಷ್ಟಾಚಾರ, ನಿರ್ಲಕ್ಷತೆ ಮತ್ತು ದುರಾಡಳಿತ ಸರ್ವೇ ಸಾಮಾನ್ಯವಾಗಿದೆ. ಈ ಮೇಲಿನ ವಿಚಾರ ಬೆಸ್ಕಾಂನ ನಿರ್ಲಕ್ಷಕ್ಕೆ ಮತ್ತು ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ. ಕರ್ನಾಟಕ ರಾಷ್ಟ್ರ ಸಮಿತಿ (ಕರಾಸ) ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು 2020ರಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಿಗೆ, ಇಂಧನ ಇಲಾಖೆಯ ಕಾರ್ಯದರ್ಶಿಗಳಿಗೆ ಹಾಗೂ ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಬೆಸ್ಕಾಂ ಟೆಂಡರ್‌ನಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಪತ್ರವನ್ನು ಬರೆದಿದ್ದರು.

“ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಕಾಮಗಾರಿಗಳಿಂದಾಗಿ ವಿದ್ಯುತ್ ಕಂಬಗಳಿಗೆ ಹಾಗೂ ವಿದ್ಯುತ್ ಲೈನ್‌ಗಳಿಗೆ ಆಗುತ್ತಿರುವ ಹಾನಿ, ಅದರಿಂದ ಎದುರಾಗಬಹುದಾದ ಅಪಾಯಗಳ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕಳೆದ ಒಂದು ವರ್ಷ ಎಚ್ಚರಿಸಿತ್ತು. ಆವಾಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಸಾವು-ನೋವುಗಳನ್ನು ತಪ್ಪಿಸಬಹುದಿತ್ತು” ಎಂದು ಹೇಳಿದೆ.

Advertisements

ಬೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ ದಿವ್ಯ ನಿರ್ಲಕ್ಷ್ಯ, ಕರ್ತವ್ಯ ಲೋಪದ ಪರಿಣಾಮವಾಗಿ ಪದೇಪದೆ ವಿದ್ಯುತ್ ಅವಘಡಗಳು ಸಂಭವಿಸುತ್ತಿವೆ. ಆದರೂ ಅಧಿಕಾರಿಗಳು ಮೈಚಳಿ ಬಿಟ್ಟು ಮೇಲೇಳುತ್ತಿಲ್ಲ. ಅದರಲ್ಲೂ ರಾತ್ರಿ ಪಾಳೆಯದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಜರಿ ಪುಸ್ತಕದಲ್ಲಿ ಕೇವಲ ತಮ್ಮ ಸಹಿ ಮಾತ್ರ ಇರುತ್ತದೆ ಅಷ್ಟೆ. ಉಳಿದಂತೆ ವಿದ್ಯುತ್‌ಗೆ ಸಂಬಂಧಿಸಿದಂತೆ ಏನೇ ನಡೆದರು ತಮಗೂ ಅದಕ್ಕೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಅಧಿಕಾರಿಗಳ ಮತ್ತು ಆಡಳಿತದ ಈ ದುರಾಡಳಿತದಿಂದ ಕೇವಲ ಸಾರ್ವಜನಿಕರು ಮಾತ್ರ ತೊಂದರೆ ಅನುಭವಿಸದೆ, ಕಾರ್ಮಿಕರು ಮತ್ತು ಲೈನ್‌ಮನ್‌ಗಳ ಸಾವು ನೋವು ನಿರಂತರವಾಗಿ ನಡೆಯುತ್ತಿವೆ. ಆದರೆ, ಈ ವಿಚಾರಗಳು ಜನರ ಗಮನಕ್ಕೆ ಬರುತ್ತಿಲ್ಲವಷ್ಟೆ” ಎಂದು ತಿಳಿಸಿದೆ.

“ಜನರ ಯೋಗ ಕ್ಷೇಮಗಳನ್ನು ವಿಚಾರಿಸಬೇಕಾಗಿದ್ದ ನಮ್ಮ ಜನಪ್ರತಿನಿಧಿಗಳು ಅವಘಡಗಳು ಸಂಭವಿಸಿದಾಗ ಕೇವಲ ಹೇಳಿಕೆಗೆ ಮಾತ್ರ ಸೀಮಿತವಾಗಿದ್ದಾರೆ. ಜನಪ್ರತಿನಿಧಿಗಳು ನಿರ್ಲಕ್ಷವನ್ನು ನಮ್ಮ ಅಧಿಕಾರಿಗಳು ಚೆನ್ನಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ಹೀಗೆಯೇ ಮುಂದವರೆದರೆ ಬೆಂಗಳೂರು ನಗರಕ್ಕೆ ಮತ್ತು ರಾಜ್ಯಕ್ಕೆ ಅಪಾಯ ತಪ್ಪಿದಲ್ಲ” ಎಂದು ಹೇಳಿದೆ.

“ಬೆಸ್ಕಾಂ ಬಿಳಿ ಆನೆಯಂತಾಗಿದ್ದು, ಒಂದು ಕೆಲಸ ಮಾಡಲು ಮೂರು ಪಟ್ಟು ಹೆಚ್ಚು ಅಧಿಕಾರಿಗಳು ಇದ್ದಾರೆ. ಇದರಿಂದ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ, ಕೈಗಾರಿಕೋದ್ಯಮಗಳಿಗೆ ತೊಂದರೆ ಮತ್ತು ಹೊರೆಯಾಗಿದೆ. ಬೆಸ್ಕಾಂನಲ್ಲಿ ನಿರಂತರವಾಗಿ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ದೊಡ್ಡ ಉದಾಹರಣೆ ಎಂದರೆ, ಇತ್ತೀಚಿನ ದಿನಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವುದು. ಒಂದು ಟ್ರಾಪ್‌ನಲ್ಲಿ ಚೀಫ್ ಜನರಲ್ ಮ್ಯಾನೇಜರ್ ₹7.50 ಲಕ್ಷ ಹಣ ಸ್ವೀಕರಿಸುವ ಸಂದರ್ಭದಲ್ಲಿ ಸಿಕ್ಕಿಬಿದ್ದಿರೋದು, ತದನಂತರ ಲೋಕಾಯುಕ್ತ ದಾಳಿಯಲ್ಲಿ ಮತ್ತೊಬ್ಬ ಇಂಜಿನಿಯರ್ ಕೋಟ್ಯಂತರ ಅಕ್ರಮ ಆಸ್ತಿ ಪತ್ತೆಯಾಗಿರುವುದು. ಈ ಪ್ರಮಾಣದಲ್ಲಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವುದನ್ನು ಗಮನಿಸಿದರೆ, ಬೆಸ್ಕಾಂನಲ್ಲಿನ ಅಕ್ರಮ ಮತ್ತು ಭ್ರಷ್ಟಾಚಾರ ಯಾವ ಮಟ್ಟದಲ್ಲಿದೆ ಎಂದು ನಾವು ಊಹಿಸಬಹುದು” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಪ್ರತಾಪ್‌ ಸಿಂಹರನ್ನು ಉಚ್ಚಾಟನೆ ಮಾಡಲಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ ಒತ್ತಾಯ

ಹಕ್ಕೊತ್ತಾಯಗಳು

  • ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಸಂಬಂಧಿಸಿದಂತೆ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಬೇಕು
  • ಕರ್ತವ್ಯಲೋಪ‌ ಎಸಗುವ ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.
  • ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರಂ ಬಳಿ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು
  • ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಬೆಸ್ಕಾಂ ಸಿಬ್ಬಂದಿ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು.

ಜನರ ಸುರಕ್ಷತೆಗಾಗಿ ಬೆಸ್ಕಾಂ ಹಾಗೂ ಜನಪ್ರತಿನಿಧಿಗಳು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಒತ್ತಾಯಿಸಿರುವ ಹಕ್ಕೊತ್ತಾಯಗಳನ್ನು ಶೀಘ್ರವಾಗಿ ಈಡೇರಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X