ಬೆಂಗಳೂರು | ಕೊಳವೆ ಬಾವಿ ಕುಸಿತ ತಡೆಗಟ್ಟಲು ಆಧುನಿಕ ತಂತ್ರಜ್ಞಾನ ಅಳವಡಿಕೆ: ಜಲಮಂಡಳಿ ಅಧ್ಯಕ್ಷ

Date:

“ಕೊಳವೆ ಬಾವಿಗಳು ಬತ್ತಿ ಹೋಗುವುದನ್ನು ತಡೆಯಲು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ” ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಹೇಳಿದರು.

ಮಾರ್ಚ್‌ 26ರಂದು ಬೆಂಗಳೂರಿನ ಚಿನ್ನಪ್ಪ ಗಾರ್ಡನ್‌ನಲ್ಲಿ ಎ ಐ ಮತ್ತು ಐಓಟಿ ತಂತ್ರಜ್ಞಾನ ಅಳವಡಿಸಲಾಗಿರುವ ಕೊಳವೆ ಬಾವಿಯ ಟ್ರಯಲ್ ರನ್ ಪರಿಶೀಲಿಸಿ ಮಾತನಾಡಿದರು.

“ನಗರದಲ್ಲಿ 14 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೊಳವೆ ಬಾವಿಗಳ ಪಂಪ್‌ ಸೆಟ್‌ಗಳನ್ನ ಹೆಚ್ಚಿನ ಸಮಯ ಬಳಸುವುದು. ನೀರು ಇಲ್ಲದೇ ಇರುವುದು ಗೊತ್ತಾಗದೆ ಮೋಟಾರ್‌ ಓಡಿಸುವುದರಿಂದ ಬಹಳಷ್ಟು ಕೊಳವೆ ಬಾವಿಗಳು ರಿಪೇರಿಗೆ ಬರುತ್ತಿವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕೊಳವೆಬಾವಿಗಳು ಪದೇಪದೆ ತಾಂತ್ರಿಕ ಸಮಸ್ಯೆಗೆ ಸಿಲುಕುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧುನಿಕ ಎ ಐ ಮತ್ತು ಐಓಟಿ ತಂತ್ರಜ್ಞಾನ ಅಳವಡಿಸಿರುವ ಕೊಳವೆ ಬಾವಿಯ ಟ್ರಯಲ್ ರನ್‌ನ ಕಾರ್ಯವನ್ನು ಪರಿಶೀಲಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೈದಾನದೊಳಗೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ ಯಾರು?: ದೂರು ದಾಖಲು

ಹೊಸ ತಂತ್ರಜ್ಞಾನದ ಅಳವಡಿಕೆಯ ಉಪಯೋಗಗಳು

  • ಈ ನೂತನ ತಂತ್ರಜ್ಞಾನದ ಅಳವಡಿಕೆಯಿಂದ ಕೊಳವೆ ಬಾವಿಗಳನ್ನು ಸಮರ್ಥವಾಗಿ ಹಾಗೂ ವೈಜ್ಞಾನಿಕವಾಗಿ ನಿರ್ವಹಿಸುವುದು.
  • ಕೊಳವೆ ಬಾವಿಗಳ ಅನಗತ್ಯ ಬಳಕೆಯನ್ನ ತಪ್ಪಿಸುವುದು ಸಾಧ್ಯವಾಗಲಿದೆ.
  • ಬಾವಿಯಲ್ಲಿ ನೀರಿಲ್ಲದೆ ಇರುವಂತಹ ಸಮಯದಲ್ಲಿ ಕೊಳವೆ ಬಾವಿಗಳ ಬಳಸುವುದನ್ನು ತಪ್ಪಿಸುವುದರ ಮೂಲಕ ಕೊಳವೆ ಬಾವಿಗಳು ನಿಷ್ಕ್ರಿಯವಾಗುವುದನ್ನ ತಪ್ಪಿಸಬಹುದಾಗಿದೆ.
  • ಕೊಳವೆ ಬಾವಿಗಳನ್ನು ಸುಸ್ಥಿರವಾಗಿ ಹಾಗೂ ತಾಂತ್ರಿಕವಾಗಿ ಬಳಸುವುದು ಅಲ್ಲದೆ, ಪದೇಪದೆ ಮೋಟಾರ್ ಸುಟ್ಟು ಹೋಗುವಂತಹ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗೆ ಸಿಲುಕುವುದನ್ನು ತಪ್ಪಿಸುವುದು.
  • ಅಲ್ಲದೆ ನಿರ್ವಹಣೆಯ ವೆಚ್ಚವನ್ನು ಕಡಿಮೆಗೊಳಿಸಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...

ಮಾಜಿ ಶಾಸಕ ಕೆ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ...