ಬೆಂಗಳೂರು | ‘ಡಿಹೈಡ್ರೇಶನ್’ ಪ್ರಕರಣಗಳಲ್ಲಿ ಹೆಚ್ಚಳ; ಓಆರ್‌ಎಸ್‌ ಮಾರಾಟದಲ್ಲಿ ಶೇ.60 ಏರಿಕೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರು ತನ್ನದೇ ಆದ ವಾತಾವರಣಕ್ಕೆ ಹೆಸರುವಾಸಿಯಾಗಿದೆ. ಈ ನಗರದಲ್ಲಿ ಮೂಲ ಬೆಂಗಳೂರಿಗರಿಗಿಂತ ವಲಸೆ ಬಂದು ನೆಲೆಸಿದವರನ್ನೆ ಹೆಚ್ಚಾಗಿ ಕಾಣಬಹುದು. ಏಕೆಂದರೆ, ಬೆಂಗಳೂರಿನ ವಾತಾವರಣ ಎಲ್ಲರನ್ನು ಸೆಳೆಯುತ್ತದೆ. ಆದರೆ, ಈಗ ನಗರವು ಗರಿಷ್ಠ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ. ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಲೇ ಇದ್ದು, ಜನರು ಬಿಸಿಲ ಝಳಕ್ಕೆ ಕಂಗಾಲಾಗಿದ್ದಾರೆ. ನಡುವೆ ನೀರಿನ ಸಮಸ್ಯೆ ಕೂಡ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

ತಾಪಮಾನ ಏರಿಕೆಯಾಗುತ್ತಿದ್ದಂತೆಯೇ ಸಾಕಷ್ಟು ಜನರು ನಿರ್ಜಲೀಕರಣ (ಡಿಹೈಡ್ರೇಶನ್) ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ನಗರದ ಹಲವು ಆಸ್ಪತ್ರೆಗಳಿಗೆ ವಾಂತಿ ಮತ್ತು ಅತಿಸಾರ ರೋಗ ಲಕ್ಷಣಗಳೊಂದಿಗೆ ಹಲವು ಜನರು ದಾಖಲಾಗುತ್ತಿದ್ದಾರೆ. ನಡುವೆಆರ್‌ಎಸ್‌ (ORS)ಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಜನರು ಔಷಧಾಲಯಗಳಿಂದಷ್ಟೇ ಅಲ್ಲದೆ, ಆನ್ಲೈನ್ ಪ್ಲಾಟ್ಫಾರ್ಮ್ಗಳ ಮೂಲಕವೂ ಒಆರ್‌ಎಸ್‌ಗಳನ್ನು ಖರೀದಿ ಮಾಡುತ್ತಿದ್ದಾರೆ.

ಮಕ್ಕಳ ತಜ್ಞ ಮತ್ತು ಆತ್ರೇಯಾ ಆಸ್ಪತ್ರೆಯ ಸಂಸ್ಥಾಪಕ ಡಾ.ನಾರಾಯಣಸ್ವಾಮಿ ಮಾತನಾಡಿ, “ಕಳೆದ ಕೆಲವು ವಾರಗಳಿಂದ ಸಾಕಷ್ಟು ಜನರು ನಿರ್ಜಲೀಕರಣದಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. 23 ಮಕ್ಕಳು ಮತ್ತು 20 ವಯಸ್ಕರು ದಾಖಲಾಗಿದ್ದಾರೆ. ಸಮಸ್ಯೆಯು ಎಲ್ಲ ವಯೋಮಾನದವರಿಗೂ ಸಮಾನ್ಯವಾಗಿ ಪರಿಣಾಮ ಬೀರುತ್ತದೆ. ಆದರೆ, ಚಿಕ್ಕಮಕ್ಕಳು, ದೀರ್ಘಕಾಲಿಕ ರೋಗಳಿಂದ ಬಳಲುತ್ತಿರುವವರು ಹಾಗೂ ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ” ಎಂದಿದ್ದಾರೆ.

Advertisements

“ತಾಪಮಾನ ಹೆಚ್ಚಾದಂತೆ ಬೆವರುವಿಕೆ ಹೆಚ್ಚಾಗುತ್ತಿದೆ. ಇದರಿಂದ ನಿರ್ಜಲೀಕರಣ ಸಮಸ್ಯೆ ಎದುರಾಗುತ್ತದೆ. ಸಮಸ್ಯೆಯಿಂದ ದೂರ ಉಳಿಯಲು ಜನರು ಹೆಚ್ಚೆಚ್ಚು ನೀರು ಹಾಗೂ ದ್ರವ ಪದಾರ್ಥಗಳನ್ನು ಸೇವನೆ ಮಾಡುವುದು ಮುಖ್ಯ” ಎಂದು ತಿಳಿಸಿದ್ದಾರೆ.

ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ಸಲಹೆಗಾರ ಡಾ.ನಿಧಿನ್ ಮೋಹನ್, “ವಯಸ್ಸಾದ ವ್ಯಕ್ತಿಗಳು, ವಿಶೇಷವಾಗಿ ಬೆವರು ಸ್ರವಿಸುವಿಕೆಯನ್ನು ಕಡಿಮೆ ಮಾಡುವ ಔಷಧಿಗಳನ್ನು ಸೇವಿಸುವವರು ಹಾಗೂ ಆಗಾಗ್ಗೆ ಆಲ್ಕೊಹಾಲ್ ಸೇವಿಸುವವರು ಶಾಖದ ಹೊಡೆತಕ್ಕೆ ಹೆಚ್ಚು ಒಳಗಾಗುತ್ತಾರೆಎಂದು ಹೇಳಿದ್ದಾರೆ.

“ದೇಹದ ಉಷ್ಣತೆಯ ಹೆಚ್ಚಳ, ಹೆಚ್ಚಿದ ನಾಡಿ ಬಡಿತ ಮತ್ತು ಮಾನಸಿಕ ಗೊಂದಲದಂತಹ ರೋಗಲಕ್ಷಣಗಳನ್ನು ಇರುವ ರೋಗಿಗಳಿಗೆ ಕನಿಷ್ಠ 48 ಗಂಟೆಗಳ ಕಾಲ ಆಸ್ಪತ್ರೆಗೆ ದಾಖಲಾಗಬೇಕು. ಅವರು ತೀವ್ರ ನಿಗಾದಲ್ಲಿರುವ ಅಗತ್ಯವಿರುತ್ತದೆ. ಏಕೆಂದರೆ, ತೀವ್ರ ಶಾಖದ ಹೊಡೆತವು ಮೂತ್ರಪಿಂಡಗಳಿಗೆ ಹಾನಿ ಮತ್ತು ಇತರ ಪ್ರಮುಖ ಅಂಗಗಳಿಗೆ ಹಾನಿಗೆ ಕಾರಣವಾಗಬಹುದುಎಂದು ಡಾ. ಮೋಹನ್ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ : ಹಾಸ್ಟೆಲ್​​ನಲ್ಲಿ ಕನಿಷ್ಠ ಸ್ವಚ್ಛತೆಯ ಕೊರತೆ ಆರೋಪ

ಓಆರ್‌ಎಸ್‌ನ ಮಾರಾಟವು ನಗರದಲ್ಲಿ ಶೇ.60 ರಷ್ಟು ಏರಿಕೆಯಾಗಿದೆ. ಪ್ರತಿ ದಿನ ಕನಿಷ್ಠ ನಾಲ್ಕು ಸ್ಟಾಕ್ಗಳ ಪೈಕಿ 2 ಸ್ಟಾಕ್‌ಗಳು ಸಂಪೂರ್ಣವಾಗಿ ಮಾರಾಟವಾಗುತ್ತಿದೆ. ಇದಲ್ಲದೆ, ನಗರದಲ್ಲಿನ ಔಷಧಾಲಯಗಳು ಓಆರ್‌ಎಸ್‌ಮಾರಾಟದಲ್ಲಿ ಹೆಚ್ಚಳವನ್ನು ಕಂಡಿವೆ ಎಂದು ಆನ್ಲೈನ್ ವಿತರಣಾ ವೇದಿಕೆಗೆ ಸಂಬಂಧಿಸಿದ ಮಾರಾಟ ಕಾರ್ಯನಿರ್ವಾಹಕರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X