ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

Date:

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಅಲ್ಲದೇ, ಕಳೆದೆರಡು ದಿನಗಳ ಹಿಂದೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ₹3 ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ, ಇದೀಗ ನೀರಿನ ದರ ಏರಿಕೆಗೆ ಬೆಂಗಳೂರು ಜಲಮಂಡಳಿ ಪ್ರಸ್ತಾವಣೆ ಸಲ್ಲಿಸಿದ್ದು, “ನೀರಿನ ದರ ಏರಿಕೆ ಅನಿವಾರ್ಯ” ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಜೂನ್ 18ರಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಈಗಾಗಲೇ ನೀರಿನ ದರ ಏರಿಕೆ ಬಗ್ಗೆ ಬೆಂಗಳೂರು ಜಲಮಂಡಳಿ ಪ್ರಸ್ತಾವನೆ ಸಲ್ಲಿಸಿದೆ. 14 ವರ್ಷದಿಂದ ಬೆಂಗಳೂರಿನಲ್ಲಿ ನೀರಿನದರಏರಿಕೆ ಆಗಿಲ್ಲ‌. ಹಿನ್ನಲೆ ಬೆಂಗಳೂರು ಜಲಮಂಡಳಿ ಸಿಬ್ಬಂದಿಗೆ ವೇತನ ನೀಡಲು ಸಮಸ್ಯೆ ಆಗುತ್ತಿದೆ. ನೀರಿನ ಬಳಕೆಯ ವಿದ್ಯುತ್ ವೆಚ್ಚ ಸಹ ಪಾವತಿಸಲು ಆಗುತ್ತಿಲ್ಲ. ಹೀಗಾಗಿ, ನೀರಿನ ದರ ಏರಿಕೆ ಅನಿವಾರ್ಯ” ಎಂದಿದ್ದಾರೆ.

ಜಲಮಂಡಳಿ ಸಿಬ್ಬಂದಿಗೆ ವೇತನ ನೀಡಲು ಹಣ ಇಲ್ಲ. ಹಾಗಾಗಿ, ನೀರಿನ ಬಿಲ್ ಹೆಚ್ಚಿಸಬೇಕೋ, ಬೇಡವೋ ಎಂದು ನೀವೇ ಹೇಳಿ ಎಂದು ನೀರಿನ ದರ ಏರಿಕೆಯ ಮುನ್ಸೂಚನೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

“2014 ಬಳಿಕ ಕುಡಿಯುವ ನೀರಿನ ದರ ಏರಿಕೆ ಮಾಡಿಲ್ಲ. ವಿದ್ಯುತ್ದರವೂ ಏರಿಕೆ ಆಗಿದೆ. ಜಲಮಂಡಳಿಗೆ ಪ್ರತಿ ವರ್ಷ ನಷ್ಟ ಆಗುತ್ತಲೇ ಇದೆ. ಆದರೆ, ಬೆಂಗಳೂರಿಗೆ ಕುಡಿಯುವ ನೀರು ಬೇಕು. ಬಿಜೆಪಿಯವರು ಇದ್ದಾಗ ವಿದ್ಯುತ್ದರ ಜಾಸ್ತಿ ಮಾಡಿದರು. ನಾವು ಬಂದು ಕಡಿಮೆ ಮಾಡಿದೆವು. ಕಡಿಮೆ ಮಾಡಿದ್ದಕ್ಕೆ ಪ್ರಶಂಸೆ ಮಾಡುವುದಿಲ್ಲ. ದರ ಹೆಚ್ಚಿಸಿದರೆ ಮಾತನಾಡುತ್ತೀರಿ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ವೈದ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಪಿಸಿಆರ್‌ನಿಂದ ದೂರು

ಸಾಮಾಜಿಕ ಜಾಲತಾಣ ‘ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ...

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ...

ಚಿಕ್ಕನಾಯಕನಹಳ್ಳಿ | ವೆಲ್ಡಿಂಗ್ ಮಾಲೀಕರ-ಕೆಲಸಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದ ಮತಿಘಟ್ಟ ಗೇಟ್ ಬಳಿಯಿರುವ ವೀರಭದ್ರೇಶ್ವರ ಇಂಜಿನಿಯರಿಂಗ್ ವರ್ಕ್ಸ್ ಆವರಣದಲ್ಲಿ...

ಶಿವಮೊಗ್ಗ | ವ್ಯಾಪಕ ಮಳೆ ಹಿನ್ನೆಲೆ: ಜು.16ರಂದು ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ...