ಬೆಂಗಳೂರು | ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ ಖರೀದಿ; ವಿದೇಶಕ್ಕೆ ಸಿಮ್ ರವಾನೆ ಮಾಡುತ್ತಿದ್ದವನ ಬಂಧನ

Date:

ಸೈಬರ್ ಕ್ರೈಂಗಾಗಿ ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ವಿದೇಶಕ್ಕೆ ರವಾನೆ ಮಾಡುತ್ತಿದ್ದ ಆರೋಪಿಯನ್ನು ಸದ್ಯ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

- Advertisement -

ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣದವನು. ಬಂಧಿತ ಆರೋಪಿ ಭಾರತದ ಸಿಮ್‌ಗಳನ್ನು ಖರೀದಿ ಮಾಡಿ ಪಾರ್ಸಲ್ ಮುಖಾಂತರ ಅಕ್ರಮವಾಗಿ ವಿದೇಶಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಈ ವೇಳೆ, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸಿಮ್‌ಗಳು ಪತ್ತೆಯಾಗಿದ್ದು, ಸೈಬರ್‌ ಕ್ರೈಂ ಮಾಡುವ ಜಾಲದ ಬಗ್ಗೆ ಕಂಡು ಹಿಡಿದಿದ್ದಾರೆ.

ಒಂದು ಪಾರ್ಸಲ್​ನಲ್ಲಿ 24, ಮತ್ತೊಂದರಲ್ಲಿ 111 ಸಿಮ್​​ಗಳನ್ನು ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿತ್ತು. ಚೆನ್ನೈನ ಸೈಯದ್​​​​​ ಎಂಬಾತನಿಗೆ ಸೇರಿದ ಕೊರಿಯರ್​​ ಕಂಪನಿ ಮೂಲಕ ಪಾರ್ಸಲ್ ಬುಕ್ ಆಗಿತ್ತು.

ಏನಿದು ಸಿಮ್‌ ಅಕ್ರಮ ಸಾಗಾಟ?

ಆರೋಪಿಗಳು ಭಾರತೀಯ ಸಿಮ್‌ಗಳನ್ನು ಖರೀದಿ ಮಾಡಿ ಅಕ್ರಮವಾಗಿ ತೈವಾನ್ ಮತ್ತು ಕಾಂಬೋಡಿಯಾ ಸೇರಿದಂತೆ ಇನ್ನಿತರ ದೇಶಗಳಿಗೆ ಸಾಗಾಟ ಮಾಡುತ್ತಾರೆ.

ವಿದೇಶದಲ್ಲಿ ಕುಳಿತು ಈ ಸಿಮ್‌ಗಳನ್ನು ಬಳಸಿ ಬ್ಯಾಂಕ್‌ ಖಾತೆ, ವಾಟ್ಸ್‌ಆಪ್ ಅಕೌಂಟ್ ಓಪನ್ ಮಾಡಿಕೊಳ್ಳುತ್ತಾರೆ. ಬಳಿಕ, ಭಾರತದಲ್ಲಿನ ಜನರಿಗೆ ಪಾರ್ಟ್ ಟೈಂ ಕೆಲಸ ಕೊಡಿಸುವುದಾಗಿ ಹೇಳಿ ಜನರಿಂದ ಹಣ ಲೂಟಿ ಮಾಡುತ್ತಾರೆ. ಇಲ್ಲದಿದ್ದರೇ, ಷೇರು ಮಾರ್ಕೆಟ್​ನಲ್ಲಿ ಹೂಡಿಕೆ ಮಾಡಿ ಅಂತ ಆಫರ್ ಕೊಟ್ಟು ವಂಚನೆ ಮಾಡುತ್ತಿದ್ದಾರೆ.

ಈ ದಂಧೆಯ ಮುಖ್ಯ ಕಿಂಗ್‌ಪಿನ್ ಹೈದರಾಬಾದ್​ ಮೂಲದ ವ್ಯಕ್ತಿ. ಈತ ವಿಯೆಟ್ನಾಂನಲ್ಲಿ ಕುಳಿತುಕೊಂಡು ಎಲ್ಲವನ್ನು ನೋಡಿಕೊಳ್ಳುತ್ತಿದ್ದನು. ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಒಂದು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮಳೆ ಅಬ್ಬರ; ಹಲವೆಡೆ ಮಳೆ ಅವಾಂತರ

ಅಕ್ರಮ ಚಿನ್ನ ಸಾಗಾಟ; ನಾಲ್ವರು ವಶಕ್ಕೆ

ಬಟ್ಟೆಗಳಲ್ಲಿ ಅಡಗಿಸಿಟ್ಟುಕೊಂಡು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬರೋಬ್ಬರಿ ₹1.96 ಕೋಟಿ ಮೌಲ್ಯದ 2.814 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರು ಬ್ಯಾಗ್​​ನಲ್ಲಿನ ಜೀನ್ಸ್ ಪ್ಯಾಂಟ್, ಟೀ ಶರ್ಟ್​​​ಗಳಲ್ಲಿ ಪೌಡರ್​ ರೂಪದ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದರು. ಆದರೆ, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.

ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ; ತುರ್ತು ಭೂಸ್ಪರ್ಶ

ಕೊಚ್ಚಿಗೆ ತೆರಳುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶವಾಗಿದೆ. ​

AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ, ವಿಮಾನದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.

ಕೂಡಲೇ, ಎಚ್ಚೆತ್ತ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರೀ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಪಟ್ಟದಕಲ್ಲಿನಲ್ಲಿ ಎರಡು ದಿನಗಳ ‘ಕಲಾಧಾರ’ ಸಂಗೀತೋತ್ಸವ

ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಐತಿಹಾಸಿಕ ಪಟ್ಟದಕಲ್ಲಿನಲ್ಲಿ ಇಂದು ಮತ್ತು ನಾಳೆ...

ಬಾಗಲಕೋಟೆ |ಗ್ರಾಮೀಣ ಆಸ್ತಿ ಮಾಲೀಕರಿಗೆ ಭೂ ಗ್ಯಾರಂಟಿ ಅಭಿಯಾನ: ನ. 2ರಿಂದ ಜಾರಿ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರಿಗೆ ಅಧಿಕೃತ ದಾಖಲೆ ಒದಗಿಸಿ ಆಸ್ತಿ ಹಕ್ಕುಗಳನ್ನು...

ಬಾಗಲಕೋಟೆ |ಕಲ್ಲಿನಿಂದ ದಂಪತಿಗಳ ಮೇಲೆ ಹಲ್ಲೆ; ಆರೋಪಿಗೆ 2 ವರ್ಷ ಜೈಲು, ₹25 ಸಾವಿರ ದಂಡ

ಪತಿ-ಪತ್ನಿಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ...

ವಿಜಯಪುರ |ಆಲಮಟ್ಟಿ ಜಲಾಶಯದ ನೀರಿನ ಹಂಚಿಕೆ ಲೆಕ್ಕಪತ್ರ ನೀಡಿ;ರೈತ ಸಂಘ ಆಗ್ರಹ

ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ...