ಬೆಂಗಳೂರು | ಐಪಿಎಲ್ ಪಂದ್ಯ: ನಾಲ್ಕು ದಿನ ಮೆಟ್ರೋ ಅವಧಿ ವಿಸ್ತರಣೆ

Date:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಟಾಟಾ ಐಪಿಎಲ್‌ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. ಈ ಪಂದ್ಯಗಳ ವೀಕ್ಷಣೆಗಾಗಿ ಐಪಿಎಲ್‌ ಪ್ರಿಯರಿಗೆ ಅನುಕೂಲವಾಗುವ ದೃಷ್ಟಿಯಿಂದ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ತನ್ನ ಕೊನೆಯ ರೈಲು ಸೇವೆಯನ್ನು ರಾತ್ರಿ 11.30ಕ್ಕೆ ವಿಸ್ತರಿಸಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಆದೇಶ ಹೊರಡಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್), “ಈ ಪಂದ್ಯದ ದಿನಗಳಲ್ಲಿ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ₹50 ಮಾರಾಟಕ್ಕೆ ಲಭ್ಯವಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್​ಗೆ ವ್ಯವಸ್ಥೆ ಮಾಡಲಾಗಿದೆ” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪೇಪರ್ ಟಿಕೆಟ್ ಪಡೆದು ಎಲ್ಲ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ಇದೆ. ಆದರೆ, ಈ ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವರೆಗೆ ಮಾತ್ರ ಮಾನ್ಯವಾಗಲಿದೆ. ಅಲ್ಲದೇ, ಮೇಲೆ ತಿಳಿಸಿರುವ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಕಾದ ಇಳೆಗೆ ತಂಪೆರೆದ ಮಳೆ: ರಾಜ್ಯದ ಜನರ ಮೊಗದಲ್ಲಿ ಮಂದಹಾಸ

“ಎಂದಿನಂತೆ, ಕ್ಯೂಆರ್‌ ಕೋಡ್ ಟಿಕೆಟ್‌ ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಮ್‌ಸಿ ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್, ನಮ್ಮ ಮೆಟ್ರೊ ಆ್ಯಪ್, ಪೇಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ ಕ್ಯೂಆರ್‌ ಕೋಡ್ ಟಿಕೆಟ್‌ಗಳನ್ನು ಖರೀದಿಸಬಹುದು” ಎಂದು ತಿಳಿಸಿದೆ.

ಕಬ್ಬನ್ ಪಾರ್ಕ್ ಮತ್ತು ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...