ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನವೆಂಬರ್ 3ರಂದು ಬೆಳ್ಳಂಬೆಳಗ್ಗೆ ಬಿಲ್ಡರ್ಸ್ ಮನೆಗಳ ಮೇಲೆ ಐಟಿ(ಆದಾಯ ತೆರಿಗೆ) ದಾಳಿ ನಡೆದಿದೆ.
ಕಳೆದ ಹಲವು ದಿನಗಳಿಂದ ಐಟಿ ಅಧಿಕಾರಿಗಳು ಕರ್ನಾಟಕದಲ್ಲಿ ದಾಳಿ ಮುಂದುವರೆಸಿದ್ದಾರೆ. ಈ ಹಿಂದೆ, ರಾಜ್ಯದಲ್ಲಿರುವ ಹಲವು ಜ್ಯುವೆಲರ್ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದರು. ಈ ವೇಳೆ, ಕೋಟ್ಯಂತರ ಹಣವನ್ನು ವಶಕ್ಕೆ ಪಡೆದಿದ್ದರು.
ಕಳೆದ ಹಲವು ದಿನಗಳಿಂದ ರಾಜ್ಯದ ಹಲವೆಡೆ ಜ್ಯುವೆಲರ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು, ಈ ಬಾರಿ ಬಿಲ್ಡರ್ಸ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರತಿಷ್ಠಿತ ಐಸ್ ಕ್ರೀಂ ಕಂಪನಿ ಮಾಲೀಕರ ಸೊಸೆ ಆತ್ಮಹತ್ಯೆ ಪ್ರಕರಣ; ವಾರದ ಬಳಿಕ ಹೊರಬಿದ್ದ ಸತ್ಯ
ಕರ್ನಾಟಕದ ನಾನಾ ಭಾಗಗಳಲ್ಲಿ ಐಟಿ ದಾಳಿಯಾಗುತ್ತಲೇ ಇದ್ದು, ಈ ಹಿಂದೆ ಉಡುಪಿ ಮತ್ತು ಮಂಗಳೂರು ಭಾಗದಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದರು.