ಬೆಂಗಳೂರು | ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಕ್ಕೆ ಜಲಮಂಡಳಿ ಸಿದ್ದತೆ

Date:

ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896ರಲ್ಲಿ ಅರ್ಕಾವತಿ ನದಿಯ ನೀರನ್ನ ಹರಿಸಿದ್ದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಜಲಮಂಡಳಿ ಕೈಗೊಂಡಿದೆ.

- Advertisement -

ದೇಶದಲ್ಲೇ ಮೊದಲ ಬಾರಿಗೆ ವ್ಯವಸ್ಥಿತವಾದ ನೀರು ಸರಬರಾಜು ವ್ಯವಸ್ಥೆಯನ್ನು ಹೊಂದಿದ ಎರಡನೇ ನಗರ ಬೆಂಗಳೂರು. 1873ರಲ್ಲಿ ಮೊದಲ ಬಾರಿಗೆ ಮಿಲ್ಲರ್ಸ್‌ ಟ್ಯಾಂಕ್ ಎಂದು ಹೆಸರು ಪಡೆದಂತಹ ಹಲವಾರು ಕೆರೆಗಳ ಜಾಲದ ಮೂಲಕ ಬೆಂಗಳೂರು ನಗರಕ್ಕೆ ನೀರು ಪೂರೈಸುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. 1875-77ರ ಧಾತು ಈಶ್ವರ ಕ್ಷಾಮ(Great Famine of 1875-77) ದಿಂದ ಎರಡೂವರೆ ವರ್ಷಗಳ ಕಾಲ ಮಳೆ ಇಲ್ಲದೆ ಎಲ್ಲ ಜಲಮೂಲಗಳೂ ಬತ್ತಿ ಹೋಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಳೆಯುತ್ತಿರುವ ನಗರದ ನೀರಿನ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅಂದಿನ ಮೈಸೂರು ರಾಜರ ದಿವಾನರಾಗಿದ್ದ ಕೆ.ಶೇಷಾದ್ರಿ ಅಯ್ಯರ್‌ ಅವರು, ಹೆಸರುಘಟ್ಟ ಕೆರೆಯ ಮೂಲಕ ಅರ್ಕಾವತಿ ನದಿಯ ನೀರನ್ನ ಬೆಂಗಳೂರಿಗೆ ಹರಿಸುವ ಚಿಂತನೆ ನಡೆಸಿದರು. ಚಾಮರಾಜೇಂದ್ರ ವಾಟರ್‌ ವರ್ಕ್ಸ್‌ ಎಂದು ಇದಕ್ಕೆ ಹೆಸರಿಡಲಾಗಿತ್ತು.

ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಪುನಃಶ್ಚೇತನ

ಭೀಕರ ಕ್ಷಾಮದಿಂದ ಬಳಲಿದ್ದ ಬೆಂಗಳೂರು ನಗರಕ್ಕೆ ನೀರು ಹರಿಸಿದ್ದ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ನಿಂದ 1896ರಲ್ಲಿ ನೀರು ಹರಿಸಿದಂತೆ ಹೆಸರಘಟ್ಟ ಕೆರೆಯಿಂದ ಮತ್ತೆ ನಗರಕ್ಕೆ ನೀರು ಹರಿಸಲು ಜಲಮಂಡಳಿ ಚಿಂತನೆ ನಡೆಸುತ್ತಿದೆ.

ಸದ್ಯ ಹೆಸರಘಟ್ಟ ಕೆರೆಯಲ್ಲಿ ಸುಮಾರು 0.3 ಟಿಎಂಸಿ ಯಷ್ಟು ನೀರು ಲಭ್ಯವಿದೆ. ಇದಕ್ಕೆ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ನಲ್ಲಿ ಅಗತ್ಯ ಟ್ರೀಟ್‌ಮೆಂಟ್‌ ನೀಡಿ, ಎಂ.ಇ.ಐ ಲೇಔಟ್‌ನಲ್ಲಿರುವ ಜಲಸಂಗ್ರಾಹಾರಕ್ಕೆ ಪಂಪ್‌ ಮಾಡಲಾಗುವುದು. ಇಲ್ಲಿನಿಂದ ಅಗತ್ಯವಿರುವಂತಹ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವುದು ಇದರ ಉದ್ದೇಶವಾಗಿದೆ.

ಏಪ್ರಿಲ್‌ 20ರ ಒಳಗಾಗಿ ಸಿದ್ದತೆ ಪೂರ್ಣಗೊಳಿಸಲು ಸೂಚನೆ

ಏಪ್ರಿಲ್‌ 20 ರ ಒಳಗಾಗಿ ಈ ಪಂಪಿಂಗ್‌ ಸ್ಟೇಷನ್‌ನ ಪುನಶ್ಚೇತನಕ್ಕೆ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಲಮಂಡಳಿ ಅಧ್ಯಕ್ಷ ಡಾ ವಿ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಹಿಳೆಯರ ಕುರಿತು ಎಚ್‌ಡಿಕೆ ಆಕ್ಷೇಪಾರ್ಹ ಹೇಳಿಕೆ; ಪ್ರಕರಣ ದಾಖಲಿಸಲು ಮುಂದಾದ ಮಹಿಳಾ ಆಯೋಗ

“128 ವರ್ಷಗಳ ಹಿಂದಿನ ಭೀಕರ ಬರಗಾಲದ ಸಮಯದಲ್ಲಿ ನಗರದ ಭವಿಷ್ಯಕ್ಕಾಗಿ ಅಂದಿನ ಮಹನೀಯರುಗಳು ಕೈಗೊಂಡ ಮಹತ್ವದ ನಿರ್ಧಾರಗಳಿಂದ ಇಂದು ಬೆಂಗಳೂರು ನಗರ ಸಮರ್ಪಕ ನೀರು ಸರಬರಾಜನ್ನು ಕಾಣುತ್ತಿದೆ. ಮೇ ತಿಂಗಳಲ್ಲಿ ಮಳೆ ಬೀಳದೇ ನೀರಿನ ಕೊರತೆ ಹೆಚ್ಚಾದಲ್ಲಿ ಅದನ್ನ ಎದುರಿಸಲು ಜಲಮಂಡಳಿ ಸಿದ್ದವಾಗುತ್ತಿದೆ. ಗತಕಾಲದ ವೈಭವ ಮತ್ತು ತಂತ್ರಜ್ಞಾನವನ್ನು ಸಾರವಂತಹ ಸೋಲದೇವನಹಳ್ಳಿ ಪಂಪಿಂಗ್‌ ಸ್ಟೇಷನ್‌ ಪುನಃಶ್ಚೇತಗೊಳಿಸುವಂತೆ ಸೂಚನೆ ನೀಡಲಾಗಿದೆ. ಈ ಮೂಲಕ ಇತಿಹಾಸದ ಮೈಲುಗಲ್ಲನ್ನ ಇಂದಿಗೂ ಪ್ರಸ್ತುತಗೊಳಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...