ಬೆಂಗಳೂರು | ಜ್ಯುವೆಲರಿ ಶಾಪ್‌ಗೆ ನುಗ್ಗಿ ಗುಂಡಿನ ದಾಳಿ: ನಾಲ್ವರ ಬಂಧನ

Date:

ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ದೇವಿಹಳ್ಳಿಯಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ ಮತ್ತು ಜ್ಯುವೆಲರಿ ಶಾಪ್‌ಗೆ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್ ಬಂಟಿ ಹಾಗೂ ಸೂರಜ್ ಬಂಧಿತರು. ಬಂಧಿತರು ದೊಡ್ಡ ದೊಡ್ಡ ಅಂಗಡಿಗಳಲ್ಲಿ ಸಾಕಷ್ಟು ಜನರು ಕೆಲಸ ಮಾಡುತ್ತಾರೆ ಎಂದು ಸಣ್ಣ ಜ್ಯುವೆಲರಿ ಅಂಗಡಿಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದರು. ಸದ್ಯ ಬಂಧಿತರನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಏನಿದು ಪ್ರಕರಣ?

ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ದೇವಿಹಳ್ಳಿಯಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ ಮತ್ತು ಜ್ಯುವೆಲರಿ ಶಾಪ್‌ಗೆ ನುಗ್ಗಿದ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು.

ಮಾರ್ಚ್‌ 14ರ ಬಳಿಗ್ಗೆ 11 ಗಂಟೆ ಸುಮಾರಿಗೆ ದೇವಿನಗರದ ಆರ್‌ಎಮ್‌ವಿ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿರುವ ಲಕ್ಷ್ಮಿ ಬ್ಯಾಂಕರ್ಸ್ ಮತ್ತು ಜ್ಯುವೆಲರಿ ಶಾಪ್‌ಗೆ ದರೋಡೆ ಮಾಡಲು ನಾಲ್ವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದರು. ಅಂಗಡಿಗಳಿಗೆ ನುಗ್ಗಿದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಘನತ್ಯಾಜ್ಯ ನಿರ್ವಹಣೆ ಬಗ್ಗೆ ನಾಗರಿಕರಲ್ಲಿ ಜಾಗೃತಿ

ಎರಡು ಬೈಕ್‌ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳಲ್ಲಿ ಇಬ್ಬರು ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ, ಅಂಗಡಿ ಮಾಲೀಕ ಅಪ್ಪುರಾಮ್ ಎಂಬವರ ಹೊಟ್ಟೆಗೆ ಗುಂಡು ತಗುಲಿದೆ. ಅಲ್ಲದೇ, ಅಭಿರಾಮ್ ಎಂಬವವರ ಕಾಲಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ಪುರಾಮ್ ಸ್ಥಿತಿ ಗಂಭೀರವಾಗಿತ್ತು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿನ್ನಾಭರಣ ದೋಚಲು ದುಷ್ಕರ್ಮಿಗಳು ವಿಫಲ ಯತ್ನ ನಡೆಸಿದ್ದರು. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗುವ ವೇಳೆ, 1 ಪಿಸ್ತೂಲ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಘಟನೆ ನಡೆದ ಸ್ಥಳಕ್ಕೆ ಎಫ್‌ಎಸ್‌ಎಲ್ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...