ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ ರಕ್ತ ಬರುವ ಹಾಗೇ ಥಳಿಸಿದ ಘಟನೆ ನಡೆದಿದೆ.

ವೆಂಕಟೇಶ್ ಎಂಬ ರೋಗಿ ಥಳಿತಕ್ಕೊಳಗಾದವರು. ಇವರು ಬೆಂಗಳೂರಿನ ನೆಲಮಂಗಲದವರಾಗಿದ್ದು, ವಿಷ ಸೇವಿಸಿ ಐಸಿಯು ವಾರ್ಡ್ ಸೇರಿದ್ದರು. ಚಿಕಿತ್ಸೆಗಾಗಿ ವೆಂಕಟೇಶ್ ಐಸಿಯುನಲ್ಲಿ ಇರುವ ವೇಳೆ, ಆಸ್ಪತ್ರೆಯ ವಾರ್ಡ್‌ಬಾಯ್‌ ಧನಂಜಯ್ ಎಂಬಾತ ಆತನಿಗೆ ಹಿಗ್ಗಾಮುಗ್ಗಾ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

ರೋಗಿ ಚಿಕಿತ್ಸೆ ಪಡೆಯುವ ವೇಳೆ ಕೂಗಾಡಿದ ಎನ್ನುವ ಕಾರಣಕ್ಕೆ ಥಳಿಸಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಗಾಯಾಳು ವೆಂಕಟೇಶ್ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವಿಷ ಕುಡಿದು ನಮ್ಮವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ, ರೋಗಿ ಕೂಗಾಡುತ್ತಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಧನಂಜಯ ಎಂಬಾತ ನಮ್ಮವ ಬಾಯಿ ಹಾಗೂ ಮೂಗಿನ ಮೇಲೆ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಪೋಲಿಸರಿಗೂ ಸಹ ದೂರು ನೀಡಿದ್ದೇವೆ” ಎಂದು ರೋಗಿ ಸಂಬಂಧಿ ಲಲಿತ ಹೇಳಿದ್ದಾರೆ.

“ಮೇ 24ರಂದು ರಾತ್ರಿ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ವೈದ್ಯರಿಗೂ ಸಹ ಮಾಹಿತಿ ನೀಡಿದ್ದೇವೆ. ಹಲ್ಲೆ ಮಾಡಿದ ವಾರ್ಡ್ ಬಾಯ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುವಂತೆ ಹೇಳಿದರೆ, ಅದು ವರ್ಕ್ ಆಗುತ್ತಿಲ್ಲ. ಮೊದಲು ರೋಗಿ ಗುಣ ಆಗುವ ಕಡೆ ಗಮನವಹಿಸಿ ಅಂತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

“ವಿಷ ಕುಡಿದ ಹಿನ್ನೆಲೆ ರೋಗಿಯೂ ಮೊದಲಿಗೆ ಆನೇಕಲ್ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಕೆ.ಸಿ.ಜನರಲ್ ಆಸ್ಪತ್ರೆಗೆ ಮೇ 22ರಂದು ಬಂದಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ವೈದ್ಯರು ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ಸೂಕ್ಷ್ಮ ಚಿಕಿತ್ಸೆ ಕೊಡುವಾಗ ರೋಗಿಗಳು ಒಮ್ಮೊಮ್ಮೆ ವ್ಯತಿರಿಕ್ತವಾಗಿ ವರ್ತಿಸುತ್ತಾರೆ. ಅದರಲ್ಲೂ ಅವರು ತೀವ್ರ ನಿಗಾ ಘಟಕದಲ್ಲಿ ಇರುವುದರಿಂದ ಅವರನ್ನು ಕಂಟ್ರೋಲ್ ಮಾಡುವುದು ಕಷ್ಟ” ಎಂದು ಕೆ.ಸಿ ಜನರಲ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕಿ ಇಂದಿರಾ ಕಬಾಡೆ ಹೇಳಿದ್ದಾರೆ.

“ನಮ್ಮ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ನಂಬುವುದಕ್ಕೆ ಸಾಧ್ಯ ಇಲ್ಲ. ಸಿಸಿಟಿವಿ ಸಹ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅವರ ಬಳಿ ಹೋಗಿ ಸಮಸ್ಯೆ ಕೇಳಿದ್ದೇನೆ. ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂಬುವುದು ಸುಳ್ಳು. ಸಿಬ್ಬಂದಿ ಹಲ್ಲೆ ಮಾಡಿದ್ದರೇ ಆತನ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಮೇಲ್ನೋಟಕ್ಕೆ ಹಲ್ಲೆ ಆಗಿದೆ ಎಂದು ಕಾಣಿತ್ತಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರಿಂದ ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್...

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...