ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಪಂದ್ಯ ಫೈನಲ್ ನಡೆಯುವ ಸಂದರ್ಭದಲ್ಲಿ ಬೆಂಗಳೂರಿನ ಫ್ಲ್ಯಾಟ್‌ವೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಕೇತ್ ಮತ್ತು ರಿಷಬ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಒಂದು ಕೆಜಿ ಚಿನ್ನ, ಲ್ಯಾಪ್ ಟಾಪ್ ಹಾಗೂ ಮೊಬೈಲ್ ಅನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಫ್ಲಾಟ್‌ವೊಂದರಲ್ಲಿ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ, ಫ್ಲ್ಯಾಟ್ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ, ನೂರು ಗ್ರಾಂ ತೂಕದ ಹತ್ತು ಚಿನ್ನದ ಬಿಸ್ಕೆಟ್ಸ್ ಸೇರಿ ಬರೋಬ್ಬರಿ ಒಂದು ಕೆಜಿ ಚಿನ್ನ ಪತ್ತೆಯಾಗಿದೆ. ದಾಳಿ ವೇಳೆ ಪತ್ತೆಯಾದ ಚಿನ್ನಕ್ಕೆ ಯಾವುದೇ ದಾಖಲೆಗಳಿಲ್ಲದ ಕಾರಣ ಸಿಸಿಬಿ ಪೊಲೀಸರು ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆಣ್ಣು ಕೊಟ್ಟ ಅತ್ತೆಯ ಮನೆಗೆ ಕನ್ನ ಹಾಕಿದ ಅಳಿಯ
ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಈ ಬೆಟ್ಟಿಂಗ್ ಯಾರೊಂದಿಗೆ ಕಟ್ಟಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.